Homeಮುಖಪುಟ'ಶೂದ್ರ' ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

‘ಶೂದ್ರ’ ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

"100 ವರ್ಷಗಳ ಹಿಂದೆ ಇ.ವಿ.ರಾಮಸಾಮಿ ಪೆರಿಯಾರ್ ಅವರು ಮನುಸ್ಮೃತಿ ಮತ್ತು ಜಾತಿ ಪದ್ಧತಿಯಡಿಯಲ್ಲಿ ಶೂದ್ರ ಪದದ ವಿವರಣೆಯನ್ನು ಉಲ್ಲೇಖಿಸಿ ಶೂದ್ರ ಎಂದು ಸಂಬೋಧಿಸುವುದನ್ನು ಆಕ್ಷೇಪಿಸಿದ್ದರು"

- Advertisement -
- Advertisement -

ಮಾಲೆಗಾಂವ್ ಬಾಂಬ್ ಸ್ಫೋಟದ ಆರೋಪಿ ಮತ್ತು ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್ ವರ್ಣ ವ್ಯವಸ್ಥೆ ಮತ್ತು ಜಾತಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿರುವ ಸಾಮಾಜಿಕ ಕಾರ್ಯಕರ್ತೆ ಡಾ. ಮೀನಾ ಕಂದಸಾಮಿ ಪೆರಿಯಾರ್ ಹೇಳಿಕೆಯನ್ನು ಉಲ್ಲೇಖಿಸಿ ತಿರುಗೇಟು ನೀಡಿದ್ದಾರೆ.

“100 ವರ್ಷಗಳ ಹಿಂದೆ ಇ.ವಿ.ರಾಮಸಾಮಿ ಪೆರಿಯಾರ್ ಅವರು ಮನುಸ್ಮೃತಿ ಮತ್ತು ಜಾತಿ ಪದ್ಧತಿಯಡಿಯಲ್ಲಿ ಶೂದ್ರ ಪದದ ವಿವರಣೆಯನ್ನು ಉಲ್ಲೇಖಿಸಿ ಶೂದ್ರ ಎಂದು ಸಂಬೋಧಿಸುವುದನ್ನು ಆಕ್ಷೇಪಿಸಿದ್ದರು” ಎಂದು ವಿದ್ವಾಂಸರು ಮತ್ತು ಯುವ ಕವಿಯಾದ ಮೀನಾ ಕಂದಸಾಮಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಶೂದ್ರರಿಗೆ ಜ್ಞಾನವಿಲ್ಲ, ಹಾಗಾಗಿಯೇ ತಾವು ಶೂದ್ರರು ಎಂದು ಒಪ್ಪಿಕೊಳ್ಳುವುದಿಲ್ಲ: ಪ್ರಗ್ಯಾ ಠಾಕೂರ್ 

“ಬ್ರಾಹ್ಮಣರನ್ನು ಬ್ರಾಹ್ಮಣರು ಎಂದು ಕರೆದರೆ, ಅವರು ತಪ್ಪಾಗಿ ಗ್ರಹಿಸುವುದಿಲ್ಲ. ಏಕೆಂದರೆ ಈ ಪದ ಅಧಿಕಾರ, ಜ್ಞಾನ, ಪಾವಿತ್ರ್ಯತೆ ಮತ್ತು ಅರ್ಹತೆಯನ್ನು ಸೂಚಿಸುತ್ತದೆ” ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ರಾಜ್ಯಪಾಲರೇ, ಭೂಸುಧಾರಣಾ ಕಾಯ್ದೆಗೆ ಸಹಿ ಹಾಕಬೇಡಿ: ಟ್ವಿಟ್ಟರ್ ದಾಳಿಗೆ ಸಿದ್ದತೆ!

ಪೆರಿಯಾರ್ ಹೇಳಿಕೆಯಿರುವ ಚಿತ್ರವನ್ನು ಹಂಚಿಕೊಂಡಿರುವ ಮೀನಾ, “ನಮ್ಮನ್ನು ಸಂಬೋಧಿಸುವ ಹೆಸರು ಶೂದ್ರ, ನಮ್ಮನ್ನು ಹುಟ್ಟಿನಿಂದಲೇ ಅವಮಾನಕ್ಕೆ ಗುರಿ ಮಾಡುತ್ತದೆ. ಹುಟ್ಟುತ್ತಲೇ ಗುಲಾಮ ಎಂದು ಗುರುತಿಸಲಾಗುತ್ತದೆ. ಶೂದ್ರ ಎಂದರೆ ವೇಶ್ಯೆಯ ಮಗ.. ಇತ್ಯಾದಿ…” ಎಂದು ಬರೆಯಲಾಗಿದೆ.

“ಪ್ರಗ್ಯಾ ಠಾಕೂರ್ ಮತ್ತು ಇತರೆ ಹಿಂದುತ್ವವಾದಿಗಳು ಹಾಗೂ ಸನಾತನವಾದಿಗಳಿಗೆ ಈ ಪದಗಳ ಬಳಕೆ ಏನನ್ನು ಸೂಚಿಸುತ್ತದೆ ಎಂದು ತಿಳಿದಿಲ್ಲ. ಈ ಪದಗಳು ಅಥವಾ ಇಂತಹ ಉಲ್ಲೇಖಗಳು ಎಷ್ಟು ತೀವ್ರವಾಗಿ ನೋಯಿಸುತ್ತದೆ ಎಂಬುದೂ ಅವರಿಗೆ ತಿಳಿದಿಲ್ಲ. ಇದಕ್ಕೆ ತದ್ವಿರುದ್ದವಾಗಿ ಜಾತಿ ಮತ್ತು ವರ್ಣಾಶ್ರಮವನ್ನು ರಕ್ಷಿಸಿ ಅವುಗಳನ್ನು ಸಾರ್ವತ್ರಿಕಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹೋರಾಟ ತೀವ್ರಗೊಳಿಸಲು ಉಪವಾಸ ಸತ್ಯಾಗ್ರಹ ಆರಂಭಿಸಿದ ರೈತ ಮುಖಂಡರು: 10 ಅಂಶಗಳು

ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಶನಿವಾರ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಮಧ್ಯಪ್ರದೇಶದ ಸೆಹೋರ್‌ನಲ್ಲಿ ನಡೆದ ಸಭೆಯನ್ನುದ್ದೇಶಿಸಿ, “ಶೂದ್ರರನ್ನು ಶೂದ್ರರು ಎಂದು ಕರೆದರೆ ಅವರು ಒಪ್ಪುವುದಿಲ್ಲ, ಯಾಕೆಂದರೆ ಅವರಿಗೆ ಜ್ಞಾನವಿಲ್ಲ” ಎಂದು ಹೇಳಿದ್ದರು.

ಭಾರತದಲ್ಲಿನ ವರ್ಣ ವ್ಯವಸ್ಥೆಯ ಬಗ್ಗೆ ಮಾತನಾಡುತ್ತಾ, “ಸಾಮಾಜಿಕ ರಚನೆಗಾಗಿ ನಮ್ಮ ಸಮಾಜವನ್ನು ನಾಲ್ಕು ಭಾಗಗಳಾಗಿ ವಿಂಗಡಿಸಲಾಗಿದೆ. ಕ್ಷತ್ರಿಯರನ್ನು ಕ್ಷತ್ರಿಯರು ಎಂದು ಕರೆದರೆ, ಅವರು ಅದನ್ನು ತಪ್ಪೆಂದು ಪರಿಗಣಿಸುವುದಿಲ್ಲ. ಒಬ್ಬ ಬ್ರಾಹ್ಮಣನನ್ನು ಬ್ರಾಹ್ಮಣ ಎಂದು ಕರೆದರೆ ತಪ್ಪೆಂದು ಪರಿಗಣಿಸುವುದಿಲ್ಲ. ವೈಶ್ಯನನ್ನು ವೈಶ್ಯ ಎಂದರೆ, ಅವನೂ ಅದನ್ನು ಅನ್ಯತಾ ಭಾವಿಸುವುದಿಲ್ಲ. ಆದರೆ ಶೂದ್ರರನ್ನು ಶೂದ್ರರನ್ನು ಶೂದ್ರರು ಎಂದು ಕರೆದರೆ, ಅವರು ಅದನ್ನು ಒಪ್ಪುವುದಿಲ್ಲ, ಯಾಕೆಂದರೆ ಅವರಿಗೆ ಜ್ಞಾನವಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಕರ್ನಾಟಕದ ಸುಮಾರು 50% ರಷ್ಟು ಯುವತಿಯರಿಗೆ ರಕ್ತಹೀನತೆ- NFHS ವರದಿ

ಪ್ರಗ್ಯಾ ಸಿಂಗ್ ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ನವೆಂಬರ್‌ನಲ್ಲಿ ಮಹಾತ್ಮ ಗಾಂಧಿಯ ಹಂತಕ ನಾಥೂರಾಂ ಗೂಡ್ಸೆಯನ್ನು ದೇಶ ಭಕ್ತ ಎಂದು ಕರೆದು ವ್ಯಾಪಕ ಟೀಕೆಗೆ ಗುರಿಯಾಗಿದ್ದರು.

2008 ರಲ್ಲಿ ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕೊಲ್ಲಲ್ಪಟ್ಟ ದಿವಂಗತ ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕಾರ್ಕರೆ ಅವರನ್ನು ತಾನು ಶಪಿಸಿದ್ದರಿಂದಲೇ ಸಾವನ್ನಪ್ಪಿದ್ದಾರೆ ಎಂದು ಪ್ರಗ್ಯಾ ಸಿಂಗ್ ತಮ್ಮ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಹೇಳಿ ವಿವಾದಕ್ಕೆ ಗುರಿಯಾಗಿದ್ದರು.


ಇದನ್ನೂ ಓದಿ: ರಾಜಸ್ಥಾನ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್-620, ಬಿಜೆಪಿ-548 ಸ್ಥಾನಗಳಲ್ಲಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...