Homeಮುಖಪುಟಮೂತ್ರ ವಿಸರ್ಜನೆ ವಿಡಿಯೋ ನಕಲಿ ಎಂದು ಬಲವಂತವಾಗಿ ಅಫಿಡವಿಟ್‌ಗೆ ಸಹಿ ಹಾಕಿಸಿಕೊಂಡಿದ್ದ ಬಿಜೆಪಿ ಮುಖಂಡ

ಮೂತ್ರ ವಿಸರ್ಜನೆ ವಿಡಿಯೋ ನಕಲಿ ಎಂದು ಬಲವಂತವಾಗಿ ಅಫಿಡವಿಟ್‌ಗೆ ಸಹಿ ಹಾಕಿಸಿಕೊಂಡಿದ್ದ ಬಿಜೆಪಿ ಮುಖಂಡ

- Advertisement -
- Advertisement -

ಮಧ್ಯಪ್ರದೇಶದಲ್ಲಿ ಬುಡಕಟ್ಟು ಸಮುದಾಯದ ಯುವಕನ ಮೇಲೆ ಮಧ್ಯಪ್ರದೇಶದ ಬಿಜೆಪಿ ಮುಖಂಡ ಮೂತ್ರ ವಿಸರ್ಜನೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನಕಲಿಯಾಗಿದೆ ಎಂದು ಹೇಳುವ ಪತ್ರಕ್ಕೆ ಬಲವಂತವಾಗಿ ಯುವಕನ ತಂದೆಯಿಂದ ಸಹಿ ಮಾಡಿಸಿಕೊಂಡಿದ್ದಾನೆ. ಈ ಪತ್ರ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.

ವೀಡಿಯೋದಲ್ಲಿ ಸೆರೆಹಿಡಿಯಲಾದ ಘಟನೆ 2020ರಲ್ಲಿ ನಡೆದಿದೆ ಎಂಬುದನ್ನು ಬಲಿಪಶು ದೃಢಪಡಿಸಿದ್ದಾರೆ ಎಂದು ಸಿಧಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಡಿಎಲ್ ಎಸ್ಪಿ) ಅಂಜುಲತಾ ಪಟ್ಲೆ ತಿಳಿಸಿದ್ದಾರೆ.

ಬಿಜೆಪಿ ಮುಖಂಡ ಪ್ರವೇಶ್ ಶುಕ್ಲಾ ಅವರು ಜುಲೈ 3ರಂದು ಆ ಬುಡಕಟ್ಟು ಸಮುದಾಯದ ಯುವಕನ ಮನೆಗೆ ತೆರಳಿ ಯುವಕನ ತಂದೆಗೆ ಒತ್ತಡ ಹೇರಿ, ”ವೀಡಿಯೊ ನಕಲಿಯಾಗಿದೆ ಎಂದು ಬರೆದಿರುವ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದಾರೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಪಾಟ್ಲೆ ಹೇಳಿದ್ದಾರೆ.

”ಈ ಘಟನೆ ನಡೆದದ್ದು 2020ರಲ್ಲಿ ಆದರೆ ನನಗೆ ದಿನಾಂಕ ಅಥವಾ ತಿಂಗಳು ತನಗೆ ನೆನಪಿಲ್ಲ” ಎಂದು ಬಲಿಪಶು ಪೊಲೀಸರಿಗೆ ತಿಳಿಸಿದ್ದಾರೆ.

”ಪ್ರವೇಶ್ ಜೊತೆಗಿದ್ದ ವ್ಯಕ್ತಿಯೊಬ್ಬರು ಮೊದಲು ಆತನ ಮೇಲೆ ಮೂತ್ರ ಮಾಡಲು ಪ್ರಯತ್ನಿಸಿದರು ಆದರೆ ಪ್ರವೇಶ್ ಅವರನ್ನು ತಡೆದು, ತಾವೇ ಮೂತ್ರ ವಿಸರ್ಜನೆ ಮಾಡಿದ್ದಾರೆ” ಎಂದು ಅವರು ಹೇಳಿದರು.

ಘಟನೆ ನಡೆದಾಗ ಪ್ರವೇಶ್ ಶುಕ್ಲಾ ಅವರೊಂದಿಗೆ ಇತರ ಮೂವರು ಇದ್ದರು ಎಂದು ತಿಳಿದುಬಂದಿದೆ. ಆ ಮೂವರನ್ನೂ ನಾವು ವಿಚಾರಣೆ ಮಾಡುತ್ತೇವೆ” ಎಂದು ಪಟ್ಲೆ ಹೇಳಿದರು.

ಇದನ್ನೂ ಓದಿ: ಆದಿವಾಸಿ ಯುವಕನ ಮೇಲೆ ಮೂತ್ರ ಪ್ರಕರಣ ಬಿಜೆಪಿಯ ದ್ವೇಷದ ಅಸಹ್ಯಕರ ಮುಖವಾಗಿದೆ: ರಾಹುಲ್ ಗಾಂಧಿ

ಮಂಗಳವಾರ ತಡರಾತ್ರಿ ಪ್ರವೇಶ್ ಶುಕ್ಲಾ ಅವರನ್ನು ಕಟ್ಟುನಿಟ್ಟಾದ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸುವಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪೊಲೀಸರಿಗೆ ತಿಳಿಸಿದ ನಂತರ ಅವರನ್ನು ಬಂಧಿಸಲಾಯಿತು.

ಬಿಜೆಪಿ ಆಡಳಿತದಲ್ಲಿ ಆದಿವಾಸಿಗಳು ಮತ್ತು ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಿವೆ ಎಂದು ಹೇಳುವ ಮೂಲಕ ಆಡಳಿತಾರೂಢ ಬಿಜೆಪಿಯನ್ನು ಕೆಣಕಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಘಟನೆಯನ್ನು ಉಲ್ಲೇಖಿಸಿದ್ದಾರೆ.

”ಬಿಜೆಪಿ ಆಡಳಿತದಲ್ಲಿ ಆದಿವಾಸಿ ಸಹೋದರ ಸಹೋದರಿಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಮಧ್ಯಪ್ರದೇಶದ ಬಿಜೆಪಿ ನಾಯಕನ ಅಮಾನವೀಯ ಅಪರಾಧದಿಂದ ಇಡೀ ಮಾನವೀಯತೆ ತಲೆತಗ್ಗಿಸುವಂತೆ ಮಾಡಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇದು ಆದಿವಾಸಿಗಳು ಮತ್ತು ದಲಿತರ ಮೇಲಿನ ಬಿಜೆಪಿಯ ದ್ವೇಷದ ಅಸಹ್ಯಕರ ಮುಖ ಮತ್ತು ನೈಜ ಸ್ವರೂಪ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...