Homeಕರ್ನಾಟಕತುಮಕೂರು: ಸಿದ್ಧಗಂಗಾ ಮಠದ ಜಾತ್ರೆಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌

ತುಮಕೂರು: ಸಿದ್ಧಗಂಗಾ ಮಠದ ಜಾತ್ರೆಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌

- Advertisement -
- Advertisement -

ತುಮಕೂರು ಸಿದ್ಧಗಂಗಾ ಮಠದ ಜಾತ್ರೆಗೆ ತೆರಳಿದ್ದ ಬಾಲಕಿಯನ್ನು ಬಲವಂತವಾಗಿ ಕರೆದೊಯ್ದು ಸಾಮೂಹಿಕ ಅತ್ಯಾಚಾರಗೈದ ಘಟನೆ ತುಮಕೂರಿನ ಬಂಡೆಪಾಳ್ಯದಲ್ಲಿ ನಡೆದಿದೆ.

ಈ ಬಗ್ಗೆ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಡೆಪಾಳ್ಯದಲ್ಲಿ ವಾಸವಿದ್ದ ಅಮೋಘ, ಹನುಮಂತ ಹಾಗೂ ಪ್ರತಾಪ್ ಎಂದು ಗುರುತಿಸಲಾಗಿದೆ.

ಮಾ.4ರಂದು ಘಟನೆ ನಡೆದಿದೆ. ಸಿದ್ದಗಂಗಾ ಮಠದ ಜಾತ್ರೆಗೆ ತೆರಳಿದ್ದ ಬಾಲಕಿ ಬೆಟ್ಟದ ಬಳಿ ಮರದ ಕೆಳಗೆ ಕುಳಿತು ತನ್ನ ಸ್ನೇಹಿತನ ಜೊತೆ ಮಾತನಾಡುತ್ತಿದ್ದಳು, ಇದನ್ನು ಆರೋಪಿಗಳು ಮೊಬೈಲ್‌ನಲ್ಲಿ ವೀಡಿಯೊ ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದಾರೆ. ಬಳಿಕ ಬಾಲಕಿಯನ್ನು ಬೈಕಿನಲ್ಲಿ ಬಲವಂತವಾಗಿ ಬಂಡೆಪಾಳ್ಯದ ಮನೆಯೊಂದಕ್ಕೆ ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರಗೈದಿದ್ದಾರೆ.

ಘಟನೆಯ ವೇಳೆ ಅಸ್ವಸ್ಥಳಾದ ಬಾಲಕಿಯನ್ನು ಬಳಿಕ ಸಿದ್ದಗಂಗಾ ಮಠದ ಬಳಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಸಂತ್ರಸ್ತೆಯನ್ನು ಆಕೆಯ ಸ್ನೇಹಿತ ಬಳಿಕ ಆಸ್ಪತ್ರೆಗೆ ದಾಖಲಿಸಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ತನಿಖೆಯನ್ನು ನಡೆಸುತ್ತಿದ್ದಾರೆ.

ಬಾಲಕಿಯ ಸಮೂಹಿಕ ಅತ್ಯಾಚಾರದ ವಿಡಿಯೋವನ್ನು ಕೂಡ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಸಿದ್ದಂಗಾ ಜಾತ್ರೆಗೆ ಸಾವಿರಾರು ಜನರು ತೆರಳುತ್ತಾರೆ, ಈ ವೇಳೆ ಮಹಿಳೆಯರು, ಬಾಲಕಿಯರಿಗೆ ಬೆಟ್ಟದ ಕಡೆಗೆ ಹೋಗದಂತೆ ಪೊಲೀಸರು ನಿಗಾವಹಿಸುತ್ತಾರೆ. ಆದರೂ ಪೊಲೀಸರ ಕಣ್ಣು ತಪ್ಪಿಸಿ ಕೆಲವರು ಬೆಟ್ಟದ ಕಡೆಗೆ ಹೋಗುತ್ತಾರೆ ಎಂಬುವುದು ಕಂಡು ಬಂದಿದೆ.

ಇದನ್ನು ಓದಿ: ಭೀಮಾ ಕೋರೆಗಾಂವ್ ಪ್ರಕರಣ; ಗೌತಮ್ ನವ್ಲಾಖಾಗೆ 1 ಕೋಟಿ ಪಾವತಿಗೆ ಸೂಚಿಸಿದ ಎನ್‌ಐಎ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...