Homeಮುಖಪುಟಪಾಕ್ ಜಿಂದಾಬಾದ್ ಎಂದವರ ನಾಲಿಗೆ ಕತ್ತರಿಸಿ : ಮತ್ತೆ ಪ್ರಚೋದಾನಕಾರಿ ಹೇಳಿಕೆ ನೀಡಿದ ಅಂದೋಲಾ ಶ್ರೀ

ಪಾಕ್ ಜಿಂದಾಬಾದ್ ಎಂದವರ ನಾಲಿಗೆ ಕತ್ತರಿಸಿ : ಮತ್ತೆ ಪ್ರಚೋದಾನಕಾರಿ ಹೇಳಿಕೆ ನೀಡಿದ ಅಂದೋಲಾ ಶ್ರೀ

ನಿನ್ನೆ ರಾಯಚೂರಿನಲ್ಲಿಯೂ ಸಹ  ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

- Advertisement -
- Advertisement -

ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿರುವ ಮೂವರು ವಿದ್ಯಾರ್ಥಿಗಳ ನಾಲಿಗೆ ಕತ್ತರಿಸಿ ತಂದು ಕೊಟ್ಟವರಿಗೆ ಶ್ರೀರಾಮ ಸೇನೆಯು ಮೂರು ಲಕ್ಷ ರೂ. ಬಹುಮಾನ ನೀಡಲಿದೆ ಎಂದು ಜೇವರ್ಗಿ ಆಂದೋಲ ಮಠದ ಸಿದ್ಧಲಿಂಗಸ್ವಾಮಿ ಹೇಳಿದ್ದಾರೆ.

ಗದಗದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಶ್ರೀರಾಮಸೇನೆಯಯಿಂದ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 393ನೇ ಜಯಂತ್ಯುತ್ಸವದ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು ಪಾಕ್ತಿಸಾನ ಜಿಂದಾಬಾದ್ ಎಂದು ಹೇಳಲಿಕ್ಕೆ ಇದು ಇಮ್ರಾನ್‌ಖಾನ್ ದೇಶವಲ್ಲ, ಇದು ಇಮ್ರಾನ್‌ಖಾನ್ ಅಪ್ಪ ಮೋದಿ, ಶಿವಾಜಿಯ ದೇಶ ದೇಶ ಎಂದು ಹೇಳಿದ್ದಾರೆ.

ಪಾಕಿಸ್ತಾನ್ ಜಿಂದಾಬಾದ್ ಎಂದ ದೇಶದ್ರೋಹಿಗಳನ್ನು ಎರಡು ಗಂಟೆಗಳಲ್ಲಿ ಬಿಡುಗಡೆ ಮಾಡಿದ್ದರ ಹಿಂದೆ ಇರುವ ಮಂತ್ರಿ ಯಾರು, ರಾಜಕಾರಣಿ ಯಾರು ಎಂಬುದನ್ನು ಬಹಿರಂಗಪಡಿಸಿ ಎಂದು ಅವರು ಆಗ್ರಹಿಸಿದ್ದಾರೆ.

ಶ್ರೀರಾಮ ಸೇನೆಯ ಕಾರ್ಯಕರ್ತರ ದೇಹದಲ್ಲಿ ಶಿವಾಜಿ ಮಹಾರಾಜರ ರಕ್ತ ತುಂಬಿದೆ. ಬಿಜೆಪಿಯವರ ಮೈಯಲ್ಲಿ ಯಾವ ರಕ್ತ ಹರಿಯುತ್ತಿದೆಯೋ ಗೊತ್ತಿಲ್ಲ ಎಂದಿದ್ದಾರೆ.

ಯಾರಾದರೂ ಒಂದು ಕಪಾಳಕ್ಕೆ ಹೊಡೆದರೆ, ಮತ್ತೊಂದು ಕಪಾಳ ತೋರಿಸುವ ಗಾಂಧಿ ತತ್ವ ನಮಗೆ ಬೇಕಾಗಿಲ್ಲ. ದುರದೃಷ್ಟವೆಂದರೆ, ಭಾರತವನ್ನು ತುಂಡರಿಸಿ, ಪಾಕಿಸ್ತಾನ ನಿರ್ಮಿಸಿದವರು ರಾಷ್ಟ್ರಪಿತ, ಮಹಾತ್ಮರಾದರು ಎಂದರು.

ಛತ್ರಪತಿ ಶಿವಾಜಿ ಮಹಾರಾಜರು, ಸುಭಾಷಚಂದ್ರ ಬೋಸ್, ಚಂದ್ರಶೇಖರ ಆಜಾದ್, ಕಿತ್ತೂರು ರಾಣಿ ಚೆನ್ನಮ್ಮರನ್ನು ಆದರ್ಶವಾಗಿ ಇಟ್ಟುಕೊಂಡಾಗ ಮಾತ್ರ ಭಾರತ ಹಿಂದೂರಾಷ್ಟ್ರ ಆಗಲು ಸಾಧ್ಯ ಎಂದ ಅವರು,
ಪೊಲೀಸರು ದೇವದಾಸಿಯರಿದ್ದಂತೆ ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಅವರ ಮೇಲೆ ದೇಶದ್ರೋಹ ಕೇಸು ದಾಖಲಿಸಿ ಬಂಧಿಸಬೇಕು ಎಂದು ಸ್ವಾಮೀಜಿ ಆಗ್ರಹಿಸಿದರು.

ವಿವಾದಾತ್ಮಕ ಹೇಳಿಕೆಗಗೆ ಕುಖ್ಯಾತರಾಗಿರುವ ಇವರು, ನಿನ್ನೆ ರಾಯಚೂರಿನಲ್ಲಿಯೂ ಸಹ  ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

ಅಂದೋಲಾ ಶ್ರೀ

ಮೋದಿ, ಅಮಿತ್ ಷಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತದೆ – ಪ್ರಚೋದನಕಾರಿ ಭಾಷಣ ಮಾಡಿದ ಅಂದೋಲಾ ಶ್ರೀ.

Posted by Naanu Gauri on Friday, February 21, 2020

ರಾಯಚೂರಿನ ಶಕ್ತಿನಗರದಲ್ಲಿ ನಡೆದ ಧರ್ಮಸಮ್ಮೇಳನದಲ್ಲಿ ಮಾತಾಡಿದ ಅವರು,  ಇನ್ನೂ 14-15 ವಯಸ್ಸಿನವರು ಮೋದಿ ಅಮಿತ್ ಷಾ ಬಗ್ಗೆ ಮಾತ‌ನಾಡುತ್ತಾರೆ. ಭವಿಷ್ಯದಲ್ಲಿ ಅವರಿಗೂ ಗೌರಿ ಲಂಕೇಶರಿಗೆ ಆದ ಗತಿಯಾಗುತ್ತೆ ಎಂದು ಧಮಕಿ ಹಾಕಿದ್ದರು.

ಈ ಸಮ್ಮೇಳನದಲ್ಲಿ ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಸಹ ವೇದಿಕೆಯಲ್ಲಿದ್ದರು. ಈ ಪ್ರಚೋದನಾಕಾರಿ ಭಾಷಣದ ವಿರುದ್ದ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...