Homeಕರ್ನಾಟಕ’ಹಿಂದೂ ನಾವೆಲ್ಲ ಒಂದು’ ಎಂದವರು ಜಾತಿ ಸಮಾವೇಶ ಮಾಡುತ್ತಿರುವುದೇಕೆ: ಸಿದ್ದರಾಮಯ್ಯ

’ಹಿಂದೂ ನಾವೆಲ್ಲ ಒಂದು’ ಎಂದವರು ಜಾತಿ ಸಮಾವೇಶ ಮಾಡುತ್ತಿರುವುದೇಕೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಮೀಸಲಾತಿಗಾಗಿ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವೆ ಇದೆ ಎಂದು ನೆನಪಿಸುತ್ತೇನೆ ಎಂದು ಹೇಳಿದ್ದಾರೆ

- Advertisement -
- Advertisement -

ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿರುವ ಬಿಜೆಪಿ ನಾಯಕರು ಸಾಲುಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ? ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕುತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮೀಸಲಾತಿ ಹೋರಾಟಗಳ ಹಿಂದೆ ಬಿದ್ದಿರುವ ಬಿಜೆಪಿಗೆ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಮಂಡಲ್ ವರದಿಯನ್ನು ವಿರೋಧಿಸಿ ಮೈಗೆ ಬೆಂಕಿಹಚ್ಚಿಕೊಂಡವರು ಯಾರು? ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ವಿರೋಧಿಸಿ ಬೀದಿಗಿಳಿದವರು ಯಾರು? ಸ್ಥಳೀಯ ಸಂಸ್ಥೆಗಳ ಇಲ್ಲಿನ ಮೀಸಲಾತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ರಾಮಾ ಜೋಯಿಸ್ ಯಾವ ಪಕ್ಷದವರು? ಉತ್ತರಿಸುವಿರಾ?” ಎಂದು ಕೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ ಕೇವಲ 5 ಸ್ಥಾನ ಗೆದ್ದು ತೋರಿಸಲಿ: HDK ಸವಾಲ್

“ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ ,ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? ಯಾರಾದರೂ ಉತ್ತರಿಸುವಿರಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ಮೀಸಲಾತಿಯನ್ನು ನೇರವಾಗಿ ವಿರೋಧಿಸಲಿಕ್ಕಾಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸುವ ಕುಟಿಲ ಕಾರಸ್ಥಾನಕ್ಕೆ ಅಮಾಯಕ ಜನತೆ ಬಲಿಯಾಗಬಾರದು” ಎಂದು ಜನತೆಯಲ್ಲಿ ಅವರು ಮನವಿ ಮಾಡಿದ್ದಾರೆ.

“ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಮರೆತುಬಿಟ್ಟಿದ್ದರೆ ನೆನಪಿಸಬಯಸುತ್ತೇನೆ: ಕೇಂದ್ರ ಮತ್ತು ರಾಜ್ಯದಲ್ಲಿರುವುದು ಭಾರತೀಯ ಜನತಾ ಪಕ್ಷದ ಸರ್ಕಾರ. ಅಲ್ಲಿನ ಪ್ರಧಾನಿ ನರೇಂದ್ರ ಮೋದಿ, ಇಲ್ಲಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕುರುಬ ಸಮುದಾಯ ಒಡೆಯುವುದೇ RSS, BJPಯವರ ಉದ್ದೇಶ: ಸಿದ್ದರಾಮಯ್ಯ

“ಈಗಿನ ಮೀಸಲಾತಿ ಬದಲಾವಣೆ-ಹೆಚ್ಚಳದ ಬೇಡಿಕೆಗೆ ತಮಿಳುನಾಡಿನ ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಶೇಕಡಾ 73ಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರ್ಕಾರವೇ ಮಾಡಿರುವ ಕಾನೂನು ಮಾತ್ರ ಪರಿಹಾರ. ಅದರ ಅನುಷ್ಠಾನ ಕೇಂದ್ರದ ಬಿಜೆಪಿ ಕೈಯಲ್ಲಿದೆ” ಎಂದು ಅವರು ಹೇಳಿದ್ದಾರೆ.

“ಮೀಸಲಾತಿ ಹೆಚ್ಚಳಕ್ಕಾಗಿ ಆಧಾರ ಕೋರುತ್ತಿರುವ ನ್ಯಾಯಾಲಯಕ್ಕೆ ಕರ್ನಾಟಕದಲ್ಲಿ ನಡೆದಿರುವ ಸಾಮಾಜಿಕ-ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯೇ ಉತ್ತರ. ರಾಜ್ಯಸರ್ಕಾರ ಮೀಸಲಾತಿ ಹೆಚ್ಚಳದ ಪರವಾಗಿದ್ದರೆ ಮೊದಲು ನಡೆಸಿದ್ದ ಈ ಸಮೀಕ್ಷೆಯನ್ನು ಸ್ವೀಕರಿಸಿ, ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಿನಿಮಾ ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಬೇಕು – ಸಿದ್ದರಾಮಯ್ಯ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...