Homeಕರ್ನಾಟಕಓವರ್ ಸ್ಪೀಡ್ ಡೇಂಜರಸ್ ಮಿಸ್ಟರ್ ಸಿ.ಟಿ ರವಿ, ಜೋಪಾನ: ಸಿದ್ದು ಸಲಹೆ

ಓವರ್ ಸ್ಪೀಡ್ ಡೇಂಜರಸ್ ಮಿಸ್ಟರ್ ಸಿ.ಟಿ ರವಿ, ಜೋಪಾನ: ಸಿದ್ದು ಸಲಹೆ

- Advertisement -
- Advertisement -

ಸನ್ಮಾನ್ಯ ಸಿ.ಟಿ ರವಿ ಅವರೇ, ನಾನು ಕಾಲು ಜಾರದ ಹಾಗೆ ಎಚ್ಚರದಿಂದ ನಾಲ್ಕು ದಶಕಗಳ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ. ನೀವು ಇನ್ನೂ ಯುವಕರು, ಹೆಚ್ಚು ಸ್ಪೀಡಾಗಿ ಹೋಗ್ಬೇಡಿ, ಜೋಪಾನ. ಅಪಘಾತ‌ ಮಾಡಿಬಿಟ್ಟರೆ ಎಲ್ಲ ಸಂದರ್ಭಗಳಲ್ಲಿಯೂ ರಕ್ಷಣೆಗೆ ಹಿತೈಷಿಗಳಿರುವುದಿಲ್ಲ ಎಂದು ಸಿದ್ದರಾಮಯ್ಯನವರು ತಿರುಗೇಟು ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯನವರ ಕಾಲು ಎಳೆಯುವವರ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಅವರು ತಮ್ಮ ಕಾಲನ್ನು ಭದ್ರವಾಗಿ ಇರಿಸಿಕೊಳ್ಳಲ್ಲಿ ಎಂದು ಸಚಿವ ಸಿ.ಟಿ ರವಿರವರು ಈ ಮುಂಚೆ ಹೇಳಿದ್ದರು.

ಕನ್ನಡ ಮತ್ತು ಸಂಸ್ಕೃತಿ‌‌ ಸಚಿವ ಸಿ.ಟಿ ರವಿ ಅವರು ನಾಡಧ್ವಜ ವಿರೋಧಿಸಿರುವುದು ಸರಿಯಲ್ಲ. ನಾವು ಪ್ರತ್ಯೇಕ ಧ್ವಜ ಕೇಳುತ್ತಿಲ್ಲ.‌‌ ರಾಜ್ಯಗಳು ತಮ್ಮದೇ ಧ್ವಜ ಹೊಂದಲು ಸಂವಿಧಾನ ಇಲ್ಲವೇ ಕಾನೂನಿನಲ್ಲಿ ಯಾವ ಅಡ್ಡಿಯೂ ಇಲ್ಲ.‌ ರಾಜ್ಯ ಬಿಜೆಪಿ ಸರ್ಕಾರದ ನಿಲುವು ಸ್ಪಷ್ಟವಾಗಿ ಕನ್ನಡ ವಿರೋಧಿಯಾದುದ್ದು ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.

ನಾವು ನಮಗೊಂದು ನಾಡಗೀತೆಯನ್ನು‌ ಒಪ್ಪಿಕೊಂಡಿಲ್ಲವೇ?
ಇದರಿಂದ ರಾಷ್ಟ್ರಗೀತೆಗೆ ಅವಮಾನ ಮಾಡಿದಂತಾಗುವುದೇ? ರಾಷ್ಟ್ರಧ್ವಜದ ಕೆಳಗೆ ಬೇರೆ ಧ್ವಜ ಹಾರಿಸಬೇಕೆಂದು ರಾಷ್ಟ್ರಧ್ವಜ ಸಂಹಿತೆ ಹೇಳಿದೆ. ಅದನ್ನು ಪಾಲಿಸಬೇಕಾಗಿರುವುದು ನಮ್ಮೆಲ್ಲರ‌ ಕರ್ತವ್ಯ. ಬೇರೇನು ಸಮಸ್ಯೆ ಇದೆ?

ಹಿರಿಯರಾದ ಡಾ.ಪಾಟೀಲ ಪುಟ್ಟಪ್ಪ ಮತ್ತಿತರ ಕನ್ನಡ ಹೋರಾಟಗಾರರು ನಾಡಧ್ವಜಕ್ಕಾಗಿ ಮನವಿ‌ ಮಾಡಿದ್ದರು.
ಆ ಬಗ್ಗೆ ಅಧ್ಯಯನ ನಡೆಸಿದ್ದ ತಜ್ಞರ ಸಮಿತಿ ವಿನ್ಯಾಸಗೊಳಿಸಿದ್ದ ನಾಡಧ್ವಜಕ್ಕೆ ಮನ್ನಣೆ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಕೋರಿದ್ದೆವು. ಈಗ ರಾಜ್ಯ ಸರ್ಕಾರವೇ ವಿರೋಧಿಸುತ್ತಿರುವುದು ಖಂಡನೀಯ.

ಕನ್ನಡ ಮತ್ತು ಸಂಸ್ಕೃತಿ ಸಚಿವರು ನಾಡಧ್ವಜ ಅಗತ್ಯ ಇಲ್ಲ‌ ಎಂದು ಹೇಳಿ‌ ಕನ್ನಡಿಗರನ್ನು ಕೆರಳಿಸಿರುವುದು ಸರಿ ಅಲ್ಲ. ಮಾಡಬೇಕಾಗಿರುವ ಕೆಲಸ ಬಿಟ್ಟು ಸಚಿವರು ಅನಗತ್ಯವಾಗಿ ವಿವಾದ ಸೃಷ್ಟಿಸಲು ಹೊರಟಂತಿದೆ. ಸಚಿವರು ತಕ್ಷಣ ತಮ್ಮ ಅಭಿಪ್ರಾಯವನ್ನು ಹಿಂದಕ್ಕೆ ಪಡೆದು ನಾಡಧ್ವಜವನ್ನು ಒಪ್ಪಿಕೊಳ್ಳಬೇಕು ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...