Homeಕರ್ನಾಟಕಆಗಸ್ಟ್‌ 26 ರಂದು ಕೊಡಗು ಎಸ್‌ಪಿ ಕಚೇರಿ ಮುತ್ತಿಗೆ ಘೋಷಿಸಿದ ಸಿದ್ದರಾಮಯ್ಯ

ಆಗಸ್ಟ್‌ 26 ರಂದು ಕೊಡಗು ಎಸ್‌ಪಿ ಕಚೇರಿ ಮುತ್ತಿಗೆ ಘೋಷಿಸಿದ ಸಿದ್ದರಾಮಯ್ಯ

- Advertisement -
- Advertisement -

ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಗೆ ತೆರಳಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ತಮ್ಮ ಕಾರಿಗೆ ಅಡ್ಡಿ ಪಡಿಸಿರುವ ಘಟನೆ ವಿರೋಧಿಸಿ ಆಗಸ್ಟ್‌‌ 26 ರಂದು ಜಿಲ್ಲೆಯ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಅವರು, “ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ. ಬಿಜೆಪಿ ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಸಿದ್ದರಾಮಯ್ಯ ಅವರು, “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಮೊಟ್ಟೆ ಎಸೆಯುವ ಗೂಂಡಾಗಿರಿಯ ರಾಜಕೀಯ ಶುರುಮಾಡಬೇಡಿ. ಅದನ್ನು ಅಂತ್ಯ ಮಾಡುವುದು ಹೇಗೆ ಎಂದು ನಮಗೂ ಗೊತ್ತು. ನಮ್ಮ ಕಾರ್ಯಕರ್ತರು ನಿಮ್ಮವರಂತೆಯೇ ಬೀದಿಗಿಳಿದರೆ ನೀವು ಮನೆಯಿಂದ ಹೊರಬರುವುದು ಕೂಡಾ ಕಷ್ಟವಾಗಬಹುದು. ಯು.ಪಿ ಮಾದರಿ ಎಂದರೆ ಇದೆನಾ?” ಎಂದು ಗುರುವಾರ ಪ್ರಶ್ನಿಸಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದುದ್ದನ್ನು ಖಂಡಿಸಿದ ಮಾಜಿ ಸಿಎಂ ಯಡಿಯೂರಪ್ಪ

“ನಾವು ಸಮಾಜದಲ್ಲಿ ಸಾಮರಸ್ಯ ಬಯಸುವವರು, ಎಲ್ಲ ಜಾತಿ ಧರ್ಮದ ಜನರು ಒಂದೇ ತಾಯಿಯ ಮಕ್ಕಳಂತೆ ಬದುಕಬೇಕು ಎಂದು ಬಯಸುವವರು. ಬಿಜೆಪಿಯವರು ಮತ ಧ್ರುವಿಕರಣಕ್ಕಾಗಿ ಸಮಾಜ ಒಡೆಯುವವರು, ಗೋಡ್ಸೆಗೆ ಪೂಜೆ ಮಾಡುವುದು ದೇಶಪ್ರೇಮವೇ?” ಎಂದು ಅವರು ಹೇಳಿದ್ದರು.

“ಶಿವಮೊಗ್ಗದ ಗಲಭೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರೇ ಕಾರಣ. ಸಚಿವ ಸ್ಥಾನ ಕಳೆದುಕೊಂಡು ಮನೆಯಲ್ಲಿರುವ ಅವರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನ ಖಾತರಿಯೂ ಇಲ್ಲ. ಇದರಿಂದ ಹತಾಶರಾಗಿರುವ ಈಶ್ವರಪ್ಪನವರು ಆರ್‌ಎಸ್‌ಎಸ್ ಒಡೆಯರನ್ನು ಒಲಿಸಿಕೊಳ್ಳಲು ಇದೆಲ್ಲ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಸಾಧನೆಯ ಬಲದಿಂದ ಚುನಾವಣೆಯನ್ನು ಎದುರಿಸಲಿಕ್ಕಾಗದ ಬಿಜೆಪಿ ನಾಯಕರಿಗೆ ಸುಳ್ಳು ಸುದ್ದಿ ಮತ್ತು ಆಧಾರರಹಿತ ಆರೋಪಗಳೇ ಬಂಡವಾಳ. ಹಳೆಯ ಆಟವನ್ನು ಬಿಜೆಪಿ ರಾಜ್ಯದಲ್ಲಿ ಮತ್ತೆ ಶುರುಮಾಡಿದೆ. ಈ ಸುಳ್ಳಿನ ಸರದಾರರಿಗೆ ಸತ್ಯವನ್ನು ಎದುರಿಸುವ ನೈತಿಕತೆ ಇಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

“ವಿ.ಡಿ.ಸಾವರ್ಕರ್ ಬಗ್ಗೆ ಅಭಿಮಾನ ಇದ್ದರೆ ಅವರ ಬಗ್ಗೆ ಪುಸ್ತಕ ಬರೆದು, ಕಾರ್ಯಕ್ರಮಗಳನ್ನು ಆಯೋಜಿಸಿ ಅವರ ವಿರುದ್ಧದ ಆರೋಪಗಳಿಗೆ ಉತ್ತರ ಕೊಡಿ.. ಕೋಮುಗಲಭೆ ಹುಟ್ಟುಹಾಕಲು ಅವರ ಪೋಟೊವನ್ನು ಅಸ್ತ್ರವನ್ನಾಗಿ ಯಾಕೆ ಮಾಡುತ್ತಿದ್ದೀರಿ? ಇದನ್ನೇ ನಾನು ಪ್ರಶ್ನಿಸಿದ್ದು” ಎಂದು ಅವರು ಹೇಳಿದ್ದಾರೆ.

“ಮಹಾತ್ಮ ಗಾಂಧೀಜಿಯವರ ಪೋಟೊ ಹಾಕಿ ಜಾಹೀರಾತು ಕೊಡುತ್ತಿರುವ ರಾಜ್ಯದ ಮುಖ್ಯಮಂತ್ರಿಗಳು, ಗಾಂಧೀಜಿ ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆ ಪೋಟೊ ಮೆರವಣಿಗೆ ಮಾಡಿದ ತಮ್ಮದೇ ಪಕ್ಷದ ಕಾರ್ಯಕರ್ತರ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ? ಸಾವರ್ಕರ್ ಅವರನ್ನು ಹೊತ್ತು ಮೆರೆಯುತ್ತಿರುವ ಬಿಜೆಪಿ ನಾಯಕರಲ್ಲಿ ಯಾರಾದರೂ 52 ವರ್ಷಗಳ ಕಾಲ ಆರ್ ಎಸ್ ಎಸ್ ಕಚೇರಿ ಮೇಲೆ ರಾಷ್ಟ್ರಧ್ವಜವನ್ನು ಯಾಕೆ ಹಾರಿಸಿರಲಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸುತ್ತೀರಾ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಬಾಬಾಸಾಹೇಬ್ ಅಂಬೇಡ್ಕರ್ ಅವರ ಪೋಟೊವನ್ನು ಪಕ್ಷದ ಕಚೇರಿಯಲ್ಲಿಯೇ ಕಸದ ಬುಟ್ಟಿಗೆ ಎಸೆದಿರುವ ಬಿಜೆಪಿ ನಾಯಕರ ಹೃದಯದೊಳಗೆ ಗಾಂಧೀಜಿಯೂ ಇಲ್ಲ, ಅಂಬೇಡ್ಕರ್ ಅವರೂ ಇಲ್ಲ. ಅವರೊಳಗೆ ಇರುವುದು ನಾಥುರಾಮ್ ಗೋಡ್ಸೆ ಮಾತ್ರ. ಈ ಸತ್ಯವನ್ನು ಮೊದಲು ಒಪ್ಪಿಕೊಳ್ಳಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳದ ಎಡರಂಗ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಸುತ್ತಿದೆ: ಕೊಡಿಯೇರಿ ಬಾಲಕೃಷ್ಣನ್ ಆರೋಪ

“ಬಿ.ಎಸ್ ಯಡಿಯೂರಪ್ಪ ಅವರಿಗೆ 75 ವರ್ಷ ಆಯ್ತು ಎಂದು ಮುಖ್ಯಮಂತ್ರಿ ಸ್ಥಾನದಿಂದ ನಿರ್ದಯವಾಗಿ ಕೆಳಗಿಳಿಸಿದರು. ಅವರು ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದರು. ಈಗ ಮತ್ತೆ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಾರೆ, ಅವರ ವಯಸ್ಸು ಕಡಿಮೆ ಆಯ್ತಾ? ಇದಕ್ಕೆ ಕಾರಣ ಅವರ ಮೇಲಿನ ಪ್ರೀತಿ ಅಲ್ಲ, ಸೋಲಿನ ಭಯ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...