Homeಕರ್ನಾಟಕಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ?- ಸಿದ್ದರಾಮಯ್ಯ

ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ?- ಸಿದ್ದರಾಮಯ್ಯ

’ರಾಜ್ಯದ ಲಸಿಕಾ ಕೇಂದ್ರಕ್ಕೆ ಬರುತ್ತಿರುವ ನೂರು ಮಂದಿಯಲ್ಲಿ 20 ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ’

- Advertisement -
- Advertisement -

ಕೊರೊನಾ ಲಸಿಕೆ ಕೊರತೆ ಬಗ್ಗೆ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ..? ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

’ಲಸಿಕೆ ಕೊರತೆಯಿಂದಾಗಿ ರಾಜ್ಯದ ಶೇಕಡಾ 50 ರಷ್ಟು ಲಸಿಕೆ ಕೇಂದ್ರಗಳು ಸ್ಥಗಿತಗೊಂಡಿವೆ. ಕಳೆದ 14 ದಿನಗಳಲ್ಲಿ ಸರಾಸರಿ 2.56 ಲಕ್ಷ ಲಸಿಕೆಗಳನ್ನು ಮಾತ್ರ ನೀಡಲಾಗುತ್ತಿದೆ ಎಂಬ ವರದಿ ಕಳವಳಕಾರಿಯಾದುದು. ಪ್ರಧಾನಿ ನರೇಂದ್ರ ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ..? ಎಂದು ಕಿಡಿಕಾರಿದ್ದಾರೆ.

’ರಾಜ್ಯದ ಲಸಿಕಾ ಕೇಂದ್ರಕ್ಕೆ ಬರುತ್ತಿರುವ ನೂರು ಮಂದಿಯಲ್ಲಿ 20 ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಬೇಡಿಕೆಯ ಶೇಕಡಾ 20ರಷ್ಟು ಲಸಿಕೆಗಳೂ ಪೂರೈಕೆಯಾಗುತ್ತಿಲ್ಲ ಎಂದು ಆರೋಗ್ಯ ಇಲಾಖೆಯ ವೈದ್ಯರು ಹೇಳುತ್ತಿದ್ದಾರೆ. ಇದರ ವಿರುದ್ಧ ಸೊಲ್ಲೆತ್ತಲಾಗದ ಅಸಮರ್ಥ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಅಸಹಾಯಕರಂತೆ ದೆಹಲಿ ಕಡೆ ಕೈತೋರಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

‘ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪೂರೈಸುವಂತೆ ಹತ್ತಕ್ಕಿಂತ ಹೆಚ್ಚು ಪತ್ರಗಳನ್ನು ರಾಜ್ಯ ಸರ್ಕಾರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಂದನೆ ಇಲ್ಲ. ಲಸಿಕೆ ನೀಡಿಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳುತ್ತಾ ಬಂದಿರುವ ಕೇಂದ್ರ ಸರ್ಕಾರ ತನ್ನ ವೈಫಲ್ಯತೆಯನ್ನು ಒಪ್ಪಲಿದೆಯೇ..?’ ಎಂದು ಸರಣಿ ಟ್ವೀಟ್‌ಗಳಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಬ್ಯಾಂಕಿಂಗ್‌ ಪರೀಕ್ಷೆ: ಕನ್ನಡಿಗರಿಗೆ ದ್ರೋಹ ಬಗೆದ ಮೋದಿ ಸರ್ಕಾರ’ – ಸಿದ್ದರಾಮಯ್ಯ

 

’ರಾಜ್ಯದಲ್ಲಿರುವ 8500 ಲಸಿಕಾ ಕೇಂದ್ರಗಳಲ್ಲಿ ಬಹುಪಾಲು ಕೇಂದ್ರಗಳು ಗ್ರಾಮೀಣ ಪ್ರದೇಶದಲ್ಲಿವೆ. ಅಲ್ಲಿ ಲಭ್ಯ ಇರುವ ಲಸಿಕೆಗಳನ್ನು ಕೂಡಾ ರಾಜಕಾರಣಿಗಳು ಮತ್ತು ಪ್ರಭಾವಿಗಳ ಶಿಫಾರಸಿನ ಮೇರೆಗೆ ನೀಡಲಾಗುತ್ತಿರುವ ದೂರುಗಳಿವೆ. ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳ ಮುಂಭಾಗದಲ್ಲಿ ಲಸಿಕಾ ಆಕಾಂಕ್ಷಿಗಳು ಬೆಳಿಗ್ಗೆಯಿಂದ ಸಾಲಲ್ಲಿ ನಿಂತು ಬರಿಗೈಯಲ್ಲಿ ಹಿಂದಿರುಗುತ್ತಿದ್ದಾರೆ’ ಎಂದು ಆಕ್ರೋಶ ಹೊರಹಾಕಿದ್ದಾರೆ.

’ಈಗಿನ ಅಂದಾಜಿನಂತೆ ರಾಜ್ಯದಲ್ಲಿ 4.97 ಕೋಟಿ ಜನರಿಗೆ ಲಸಿಕೆ ನೀಡಬೇಕಿದ್ದು, ಎರಡು ಡೋಸ್‌ಗಳಂತೆ ಒಟ್ಟು 9.94 ಕೋಟಿ ಲಸಿಕೆಗಳು ಬೇಕಾಗಿದೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯ ವರೆಗೆ ಪೂರೈಸಿರುವುದು 2.6 ಕೋಟಿ ಲಸಿಕೆ ಮಾತ್ರ ಎಂದು ಆರೋಗ್ಯ ಇಲಾಖೆ ಹೇಳುತ್ತಿರುವುದು ಪರಿಸ್ಥಿತಿಯ ಗಂಭೀರತೆಗೆ ಸಾಕ್ಷಿ’ ಎಂದಿದ್ದಾರೆ.

’ಒಂದೆಡೆ ಯುವಜನರನ್ನು ಗುರಿಯಾಗಿಟ್ಟುಕೊಂಡಿದೆಯೆನ್ನಲಾದ ಕೊರೊನಾ ಮೂರನೇ ಅಲೆಯ ಭೀತಿ, ಇನ್ನೊಂದೆಡೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮತ್ತು ಕಾಲೇಜುಗಳನ್ನು ತೆರೆಯಲು ಸರ್ಕಾರದ ಪ್ರಯತ್ನ. ಈ ಪರಿಸ್ಥಿತಿಯಲ್ಲಿ ಇನ್ನಷ್ಟು ಎಚ್ಚರಿಕೆಯಿಂದ ಪೂರ್ವ ಸಿದ್ಧತೆ ನಡೆಸಬೇಕಾಗಿದ್ದ ರಾಜ್ಯ ಸರ್ಕಾರ ಕೈಕಟ್ಟಿ ಕೂತಿದೆ’ ಎಂದು ಆರೋಪಿಸಿದ್ದಾರೆ.

’ಜುಲೈ ಅಂತ್ಯದೊಳಗೆ ದೇಶಾದ್ಯಂತ 51.6 ಕೋಟಿ ಕೊರೊನಾ ಲಸಿಕೆಗಳನ್ನು ನೀಡುವುದಾಗಿ ಕೇಂದ್ರ ಸರ್ಕಾರ ಆಶ್ವಾಸನೆ ನೀಡಿತ್ತು. ಈ ಗುರಿ ಸಾಧನೆಗಾಗಿ ಪ್ರತಿದಿನ 70 ಲಕ್ಷ ಲಸಿಕೆ ನೀಡಬೇಕಾಗಿದ್ದರೂ ಈಗ 40 ಲಕ್ಷ ಲಸಿಕೆ ಮಾತ್ರ ನೀಡಲಾಗುತ್ತಿದೆ. ಇಲ್ಲಿಯ ವರೆಗೆ 38.5 ಕೋಟಿ ಲಸಿಕೆಗಳನ್ನಷ್ಟೇ ನೀಡಲಾಗಿದೆ. ದಿನದಿಂದ ದಿನಕ್ಕೆ ಲಸಿಕೆ ನೀಡಿಕೆಯ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾದರೆ ಮುಂದೇನು..?’ ಎಂದಿದ್ದಾರೆ.

’ರಾಜ್ಯಗಳು ಲಸಿಕೆ ಹಾಕುವುದರಲ್ಲಿ ವಿಫಲವಾಗಿದೆ ಎಂದು ಆರೋಪಿಸಿ, ಈ ಹೊಣೆಯನ್ನು ತನ್ನ ತಲೆ ಮೇಲೆ ಹೊತ್ತುಕೊಂಡ ಪ್ರಧಾನಿಯವರ ಆಶ್ವಾಸನೆ, ಅವರ ಎಂದಿನ ಸುಳ್ಳಿನ ಸರಮಾಲೆಗೆ ಇನ್ನೊಂದು ಹೊಸ ಸುಳ್ಳಿನ ಸೇರ್ಪಡೆ ಅಷ್ಟೆ’ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದಾರೆ.


ಇದನ್ನೂ ಓದಿ: ಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...