Homeಕರ್ನಾಟಕಕರ್ನಾಟಕ ಬಜೆಟ್-2024: ವೃದ್ಧಾಪ್ಯ ವೇತನ ಹೆಚ್ಚಳ, ಹಲವು ಹೊಸ ಕಾರ್ಯಕ್ರಮಗಳ ಘೋಷಣೆ

ಕರ್ನಾಟಕ ಬಜೆಟ್-2024: ವೃದ್ಧಾಪ್ಯ ವೇತನ ಹೆಚ್ಚಳ, ಹಲವು ಹೊಸ ಕಾರ್ಯಕ್ರಮಗಳ ಘೋಷಣೆ

- Advertisement -
- Advertisement -

ರಾಜ್ಯದ ಹಣಕಾಸು ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ 15ನೇ ಬಜೆಟ್ ಮಂಡಿಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ವೃದ್ಧಾಪ್ಯ ಮತ್ತು ವಿಧವಾ ವೇತನ ಹಣ ಹೆಚ್ಚಳ, ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ 50 ಕೆಫೆ ಹೋಟೆಲ್ ಸ್ಥಾಪನೆ ಸೇರಿದಂತೆ ಹಲವಾರು ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ.

2024-25ರ ಆಯವ್ಯಯ ಮುಖ್ಯಾಂಶಗಳು:

ಆಯವ್ಯಯ ಗಾತ್ರ (ಸಂಚಿತ ನಿಧಿ) – ₹3,71,383 ಕೋಟಿ. ಓಟ್ಟು ಸ್ವೀಕೃತಿ- ₹3,68,674 ಕೋಟಿ, ರಾಜಸ್ವ ಸ್ವೀಕೃತಿ ₹2,63,178 ಕೋಟಿ, ಸಾರ್ವಜನಿಕ ಋಣ- ₹105,246 ಕೋಟಿ ರೂಸೇರಿದಂತೆ ಬಂಡವಾಳ ಸ್ವೀಕೃತಿ ₹38 ಕೋಟಿ ನಿಗದಿಪಡಿಸಲಾಗಿದೆ.

ಬಜೆಟ್ ಓಟ್ಟು ವೆಚ್ಚ- ₹3,71,383 ಕೋಟಿ ಆಗಿದ್ದು, ರಾಜಸ್ವ ವೆಚ್ಚ- ₹2,90,531 ಕೋಟಿ, ಬಂಡವಾಳ ವೆಚ್ಚ- ₹55.877 ಕೋಟಿ ಹಾಗೂ ಸಾಲ ಮರುಪಾವತಿಗೆ ₹24,794 ಕೋಟಿ ನಿಗದಿಪಡಿಸಲಾಗಿದೆ. ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಯೋಜನೆಗೆ ₹39.121 ಕೋಟಿ ಅನುದಾನ ನಿಗದಿ ಮಾಡಿದ್ದು, ಎಸ್‌.ಸಿ.ಎಸ್‌.ಪಿ. ಅಡಿ ₹27,674 ಕೋಟಿ ಹಾಗೂ ಟಿ.ಎಸ್‌.ಪಿಗೆ ₹11.447 ಕೋಟಿ ಹಣ ಹಂಚಿಕೆ ಮಾಡಲಾಗಿದೆ.

ಮಹಿಳಾ ಆಯವ್ಯಯದಲ್ಲಿ ₹86,423 ಕೋಟಿ ಅನುದಾನ ಒದಗಿಸಿದ್ದು, ಮಕ್ಕಳ ಆಯವ್ಯಯಕ್ಕೆ ಒಟ್ಟು ₹54,617 ಕೋಟಿ ಹಂಚಿಕೆ ಮಾಡಲಾಗಿದೆ.

2024-25 ನೇ ಸಾಲಿನ ಹೊಸ ಯೋಜನೆಗಳು:

ಕೃಷಿ ಕ್ಷೇತ್ರದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ ಸಮಗ್ರ ಕೃಷಿ ಉತ್ತೇಜಿಸುವ ಉದ್ದೇಶದಿಂದ ‘ಕರ್ನಾಟಕ ರೈತ ಸಮೃದ್ಧಿ’ ಯೋಜನೆ ಜಾರಿಗೆ ನಿರ್ಧರಿಸಲಾಗಿದ್ದು, ಕೃಷಿ ಮತ್ತು ಅದರ ಪೂರಕ ಚಟುವಟಿಕೆಗಳ ನೀತಿ, ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ‘ಕೃಷಿ ಅಭಿವೃದ್ಧಿ ಪ್ರಾಧಿಕಾರ’ ರಚನೆಗೆ ತೀರ್ಮಾನಿಸಲಾಗಿದೆ.

ಕೈಗೆಟುಕುವ ದರದಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಮತ್ತು ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಒದಗಿಸಲು ಸರ್ಕಾರದಿಂದ ‘ನಮ್ಮ ಮಿಲ್ಲೆಟ್’ ಹೊಸ ಕಾರ್ಯಕ್ರಮ ಪ್ರಾರಂಭೀಸಲಾಗುತ್ತದೆ. ಜತೆಗೆ, ರೃತರಿಗೆ ಕೀಟ, ರೋಗ ಮತ್ತು ಪೋಷಕಾಂಶ ನಿರ್ವಹಣೆಯ ಸಲಹೆ ನೀಡಲು, ರಾಯಚೂರು ಕೃಷಿ ವಿಶ್ವವಿದ್ಯಾಲಯ ಅಭಿವೃದ್ಧಿ ಪಡಿಸಿದ ಹೊಸ ತಂತ್ರಾಂಶದ ಪರಿಚಯಕ್ಕೆ ನಿರ್ಧಾರ.

ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಪರಿಣಾಮಕಾರಿ ಕಾರ್ಯನಿರ್ವಹಣೆಗೆ, ಕೃಷಿಇಲಾಖೆ ಅಧೀನದಲ್ಲಿ ಪ್ರತ್ಯೇಕ ‘ಕೃಷಿ ಆಯುಕ್ತಾಲಯ’ ಸ್ಥಾಪನೆಗೆ ನಿರ್ಧರಿಸಲಾಗಿದ್ದು, ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್‌) ಸಂಸ್ಥೆಯನ್ನು ಬಲಪಡಿಸಲು ₹80 ಕೋಟಿ ಸಅನುದಾನ ಒದಗಿಸಲಾಗಿದೆ.

ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆ೦ಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಆಹಾರ ಪಾರ್ಕ್‌ ಸ್ಥಾಪನೆ. ಕೃಷಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಆಧರಿಸಿ ಬೆಳೆಯ ಉತ್ಪಾದಕತೆ ಮುನ್ಸೂಚನೆಯನ್ನು ನೀಡಲು ದತ್ತಾಂಶ ಅಭಿವೃದ್ಧಿಗೆ ನಿರ್ಧಾರ.

ತೋಟಗಾರಿಕೆ ಇಲಾಖೆ:

ತೋಟಗಾರಿಕೆ ಕುರಿತು ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸಲು ಆಯ್ದ ಜಿಲ್ಲೆಗಳಲ್ಲಿ ‘ಕಿಸಾನ್‌ ಮಾಲ್‌’ ಸ್ಥಾಪನೆ. ಬೆ೦ಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆಯನ್ನು ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ. ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ರಫ್ತಿನ ಪ್ರಮಾಣ ಹೆಚ್ಚಿಸಲು ಕೊಯ್ದೋತ್ತರ ನಿರ್ವಹಣಾ ಕೇ೦ದ್ರ ಹಾಗೂ ಮೌಲ್ಯವರ್ಧನ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ನಿರ್ಧಾರ.

ರಾಜ್ಯದಲ್ಲಿ ಅಡಿಕೆ ಬೆಳೆಯಲ್ಲಿ ರೋಗನಿಯಂತ್ರಣಕ್ಕೆ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣೆ ಚಟುವಟಿಕೆಗೆ ಉತ್ತೇಜನ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ವೆಸ್‌ ಪಾರ್ಕ್‌ ಅಭಿವೃದ್ಧಿ. ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆ ಮಾಡುವುದಾಗಿ ಘೋಷಣೆ.

ರೇಷ್ಮೆ ಇಲಾಖೆ:

ರಾಮನಗರ ಮತ್ತು ಶಿಡ್ಲಘಟ್ಟದಲ್ಲಿ ₹250 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆ ನಿರ್ಮಾಣದ ಎರಡನೇ ಹಂತ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮ. ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೆ ಪ್ರೋತ್ಸಾಹ ಧನ ನೀಡಲು ₹12 ಕೋಟಿ ಅನುದಾನ ನಿಗದಿಯ ಜತೆಗೆ, ಬೈವೋಲ್ಬ್ಟೀನ್‌ ರೇಷ್ಮೆಗೂಡುಗಳಿಗೆ ನೀಡುವ ಪ್ರೋತ್ಸಾಹಧನ ಪ್ರತಿ ಕಿಲೋಗೆ ₹30ಕ್ಕೆ ಹೆಚ್ಚಳದ ಘೊಷಣೆ ಮಾಡಲಾಗಿದೆ.

ಪಶುಸಂಗೋಪನೆ:

‘ಕರ್ನಾಟಕ ರೈತ ಸಮೃದ್ಧಿ ಯೋಜನೆ’ಯೊಂದಿಗೆ ಸಂಯೋಜಿಸಿ ಕುರಿ ಸಾಕಾಣಿಕೆ, ಹೈನುಗಾರಿಕೆ, ಹ೦ದಿ ಮತ್ತು ಕೋಳಿ ಸಾಕಾಣಿಕೆಗೆ ಉತ್ತೇಜನ ನೀಡುವುದರ ಜತೆಗೆ, ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿ ಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲು ₹10 ಕೋಟಿ ಅನುದಾನ ಮೀಸಲು. ಜತೆಗೆ, ದುಸ್ಥಿತಿಯಲ್ಲಿರುವ 200 ಪಶುವೈದ್ಯ ಸಂಸ್ಥೆಗಳಿಗೆ ₹100 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ನಿರ್ಧಾರ. ವಲಸೆ ಕುರಿಗಾರರ ಅಭ್ಯದಯಕ್ಕೆ ಕ್ರಮ ಹಾಗೂ ಅವರ ಮೇಲಿನ ಶೋಷಣೆ ಮತ್ತು ದೌರ್ಜನ್ಯ ತಡೆಯಲು ‘ಕುರಿಗಾಹಿಗಳ ಮತ್ತು ಸ್ವತ್ತುಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ’ ಜಾರಿಗೆ ನಿರ್ಧಾರ ‍ಘೀಷಿಸಿದ್ದಯ, ಪುತ್ತೂರಿನಲ್ಲಿ ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ.

ಮೀನುಗಾರಿಕೆ:

ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ ₹3,000 ಕೋಟಿಗಳಷ್ಟು ಬೃಹತ್‌ ಗಾತ್ರದ ವಿವಿಧ ಯೋಜನೆಗಳ ಅನುಷ್ಠಾನದ ಜತೆಗೆ, ಮೀನುಗಾರರ ರಕ್ಷಣೆಗೆ ಸಮುದ್ರ ಅಂಬ್ಯುಲೆನ್ಸ್‌ ಖರೀದಿಗೆ ₹7 ಕೋಟಿ ಹಣ ನಿಗದಿಪಡಿಸಲಾಗಿದೆ. ‘ಮತ್ಸ್ಯ ಆಶಾಕಿರಣ’ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರದ
ರಾಜ್ಯದ ಪಾಲು ₹3,000 ಗಳಿಗೆ ಹೆಚ್ಚಳ ಮತ್ತು ವಿವಿಧ ವಸತಿ ಯೋಜನೆಗಳಡಿ 10,000 ವಸತಿರಹಿತ ಮೀನುಗಾರರಿಗೆ ಮನೆ ನಿರ್ಮಿಸಲು ಸಹಾಯಧನ ನೀಡಲು ನಿರ್ಧರಿಸಲಾಗಿದೆ.

ಸಹಕಾರ ಕ್ಷೇತ್ರ:

ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ ₹27,000 ಕೋಟಿಗಳಷ್ಟು ದಾಖಲೆಯ ಬೆಳೆ ಸಾಲ ವಿತರಣೆ ಗುರಿ ಹೊಂದಿದ್ದು, ಸರ್ಕಾರದ ಹಿ೦ದಿನ ಅವಧಿಯ ಬೆಳೆಸಾಲ ಮನ್ನಾ ಬಾಬ್ತು ಬಾಕಿ ಇರುವ
₹132 ಕೋಟಿ ಮೊತ್ತ ಡಿಸಿಸಿ ಬ್ಯಾಂಕುಗಳಿಗೆ ಬಿಡುಗಡೆ; ಮಧ್ಯಮಾವಧಿ ಮತ್ತು ದೀರ್ಫಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಹಿನ್ನಲೆಯಲ್ಲಿ ಡಿಸಿಸಿ ಮತ್ತು ಪಿಕಾರ್ಡ್‌ ಬ್ಯಾಂಕುಗಳಿಗೆ ₹450 ಕೋಟಿ ಅನುದಾನ; ಟಿ.ಎ.ಪಿ.ಸಿ.ಎ೦.ಎಸ್‌.ಗಳಿಗೆ ಗೋದಾಮು ನಿರ್ಮಾಣಕ್ಕೆ ಶೇ. 6ರ ಬಡ್ಡಿ ದರದಲ್ಲಿ ಸಹಾಯಧನ ನೀಡಲು ನಿರ್ಧಾರ.

ರಾಜ್ಯದ ಪ್ರಮುಖ ಬೆಳೆಗಳಾದ ಅಡಿಕೆ, ಈರುಳ್ಳಿ, ದ್ರಾಕ್ಷಿ, ಮಾವು, ಬಾಳೆ ಮತ್ತು ಇತರ ತೋಟಗಾರಿಕಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಲು ಹಾಗೂ ಎ೦.ಎಸ್‌. ಸ್ವಾಮಿನಾಥನ್‌ ಸಮಿತಿ ವರದಿ ಅನ್ವಯ ಬೇಸಾಯ ವೆಚ್ಚ ಮತ್ತು ಶೇ.50 ಲಾಭಾಂಶ ಆಧಾರದಡಿ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಕೇಂದ್ರಕ್ಕೆ ಒತ್ತಾಯ ಮಾಡಲು ತೀರ್ಮಾನಿಸಲಾಗಿದೆ.

ಮಾಧ್ಯಮಿಕ, ಫೆಡರಲ್‌ ಹಾಗೂ ಅಪೆಕ್ಸ್‌ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಮೀಸಲಾತಿ ತರಲು ಅಧಿನಿಯಮಗಳಿಗೆ ತಿದ್ದುಪಡಿ. ಕೃಷಿ ಉತ್ಪನ್ನ ಸಂಸ್ಕರಣೆ, ಮಾರುಕಟ್ಟೆ ಸಂಪರ್ಕ ಮತ್ತು ಮೌಲ್ಯವರ್ಧನೆಗೆ
ಪೂರಕ ಕ್ರಮಗಳಾದ ₹130 ಕೋಟಿ ರೂ. ವೆಚ್ಚದಲ್ಲಿ 7 ಶೀತಲಗೃಹ ನಿರ್ಮಾಣ. ರಾಯಚೂರು ಹಾಗೂ ರಾಣೆಬೆನ್ನೂರಿನಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಪ್ರಾರಂಭ, ಮಂಗಳೂರಿನಲ್ಲಿ ₹35 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ಸ್ಥಾಪನೆ. ₹10 ಕೋಟಿ ವೆಚ್ಚದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ
ಎಲ್ಲಾ ಕಾರ್ಯ ಚಟುವಟಿಕೆಗಳ ಡಿಜಿಟಲೀಕರಣ ಮಾಡಲು ತೀರ್ಮಾನ.

ಎ.ಪಿ.ಎಂ.ಸಿ ಗಳನ್ನು ಬಲಪಡಿಸಲು ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯುವುದು, ಮಾರುಕಟ್ಟೆ ಅಭಿವೃದ್ಧಿ ಸಹಾಯ ನಿಧಿ ಸ್ಥಾಪನೆ ಹಾಗೂ ಬೆಂಬಲ ಬೆಲೆ ಯೋಜನೆ ಜಾರಿಗೆ ಶಾಸನಾತ್ಮಕ ಬೆ೦ಬಲ ನೀಡಲು ಕ್ರಮದ ಜತೆಗೆ, ರಾಜ್ಯದಲ್ಲಿ ಕಬ್ಬು ಬೆಳೆಗಾರರಿಗೆ ತೂಕದಲ್ಲಾಗುವ ಮೋಸ ತಡೆಗಟ್ಟಲು ಎಲ್ಲ ಸಕ್ಕರೆ ಕಾರ್ಲಾನೆಗಳ ಬಳಿ ಎಪಿಎಂಸಿಗಳ ಮೂಲಕ ವೇಯ್ಟ್‌ ಬ್ರಿಜ್‌ಗಳ ಸ್ಥಾಪನೆ.

ಜಲಸಂಪನ್ಮೂಲ ಇಲಾಖೆ:

ಕಾವೇರಿ ಕಣಿವೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ಪ್ರತ್ಯೇಕ ಯೋಜನಾ ವಿಭಾಗ ಹಾಗೂ ಎರಡು ಉಪವಿಭಾಗಗಳ ಸ್ಥಾಪನೆ. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ದೊಡ್ಡನಗರದ ಬಳಿಯ ವಿತರಣಾ ತೊಟ್ಟಿಯವರೆಗೆ ಪೂರ್ವ ಪರೀಕ್ಷಾರ್ಥ ಚಾಲನೆ. ಪ್ರಸಕ್ತ ಸಾಲಿನಲ್ಲಿ ಯೋಜನೆಯ ಎಲ್ಲಾ ಲಿಫ್ಟ್‌ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗುರುತ್ವ ಕಾಲುವೆಗೆ ನೀರು ಹರಿಸಲು ಕ್ರಮ ತೆಗೆದುಕೊಳ್ಳಲು ನಿರ್ಧಾರ.

ಕೃಷ್ಣಾ ಮೇಲ್ದಂಡೆ ಯೋಜನೆ ಹ೦ತ-3 ಯೋಜನೆಯಡಿಯ ಉಪಯೋಜನೆಗಳನ್ನು ಪೂರ್ಣಗೊಳಿಸಲು ಹಾಗೂ ಇದರಡಿ ಭೂಸ್ವಾಧೀನ ಮತ್ತು ಪುನರ್‌ ವಸತಿ, ಪುನರ್‌ ನಿರ್ಮಾಣಕ್ಕೆ ಆದ್ಯತೆ ನೀಡುವ ಜತೆಗೆ, ಕೃಷ್ಣಾ ನ್ಯಾಯಾಧಿಕರಣ-2ರ ಅಂತಿಮ ತೀರ್ಪಿನ ಬಾಕಿಯಿರುವ ಗೆಜೆಟ್‌ ಅಧಿಸೂಚನೆ ಹೊರಡಿಸಲು ಕೇಂದ್ರದ ಮೇಲೆ ಒತ್ತಡ ಹೇರಲು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಗುರಿ ಮತ್ತು ಘೋಷಣೆಯಂತೆ ₹5300 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಒತ್ತಾಯ. ಕಳಸಾ ಮತ್ತು ಬಂಡೂರಾ ನಾಲೆ ತಿರುವು ಯೋಜನೆಗಳಡಿ ರಾಷ್ಟೀಯ ವನ್ಯ ಜೀವಿ ಮಂಡಳಿಯಿಂದ ಅರಣ್ಯ ತೀರುವಳಿ ನಿರೀಕ್ಷಿಸಿ ರಾಜ್ಯ ಸರ್ಕಾರವು ಟೆಂಡರ್‌ ಪ್ರಕ್ರಿಯೆ ಪ್ರಾರಂಭ ಮಾಡುವ ಜತೆಗೆ, ಮಂಡಳಿಯ ಸಭೆಯಲ್ಲಿ ತೀರುವಳಿ ಕುರಿತ ತೀರ್ಮಾನ ಮುಂದೂಡಿಕೆಗೆ ನಿರ್ಧರಿಸಲಾಗಿದೆ.

ಕೂಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನೆಯ ₹15,600 ಕೋಟಿ ಮೊತ್ತದ ವಿವರವಾದ ಯೋಜನಾ ವರದಿ ಸಿದ್ಧಪಡಿಸುವುದು. ಯೋಜನೆಯ ಅನುಷ್ಠಾನ ಸಂಬ೦ಧ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚನೆ ಪ್ರಾರಂಭಿಸುವುದು. ಕೆಆರ್‌ಎಸ್‌ನ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತೀಕರಣಕ್ಕೆ ನಿರ್ಧಾರ.

ಪ್ರಗತಿಯಲ್ಲಿರುವ ಏತನೀರಾವರಿ ಯೋಜನೆಗಳಾದ ಬೂದಿಹಾಳ್‌-ಪೀರಾಪುರ ಹಂತ-1 ಶ್ರೀ ವೆಂಕಟೇಶ್ವರ ಹಾಗೂ ಕೆ೦ಪವಾಡ ಬಸವೇಶ್ವರ ಹಾಗೂ ಕೆರೆ ತುಂಬಿಸುವ ಯೋಜನೆಗಳಾದ ಮುಂಡಗೋಡು, ತುಪರೀಹಳ್ಳ, ಸಾಸಿವೆಹಳ್ಳಿ, ದೇವದುರ್ಗ ಮತ್ತು ಗುರುಮಿಠಕಲ್‌ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲು ಕ್ರಮ. ಪ್ರಗತಿಯಲ್ಲಿರುವ ಹೇಮಾವತಿ ಯೋಜನೆ ವೈನಾಲೆಯಡಿ 5.45 ಕಿ.ಮೀ ಉದ್ದದ ಹಾಗೂ ತುಮಕೂರು ಶಾಖಾ ನಾಲೆಯಡಿ 166.90 ಕಿ.ಮೀ. ಉದ್ದದ ನಾಲೆಯ ಆಧುನೀಕರಣ ಕಾಮಗಾರಿ ಪೂರ್ಣಗೊಳಿಸಲು ಕ್ರಮ.

ಕರ್ನಾಟಕ ನೀರಾವರಿ ನಿಗಮದಡಿ ₹7,280 ಕೋಟಿ ಅಂದಾಜು ಮೊತ್ತದಲ್ಲಿ ವಿವಿಧ ಏತ ನೀರಾವರಿ ಯೋಜನೆಗಳ ಅನುಷ್ಠಾನ; 97,698 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ. ಕೃಷ್ಣಾ ಭಾಗ್ಯ ಜಲನಿಗಮದಡಿ ₹3.779 ಕೋಟಿ ಮೊತ್ತದ ಏತ ನೀರಾವರಿ ಯೋಜನೆಗಳ ಅನುಷ್ಠಾನ. 1,09,350 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ.

ಯಲಬುರ್ಗಾ-ಕುಕನೂರು ತಾಲ್ಲೂಕಿನಲ್ಲಿ ₹970 ಕೋಟಿ ವೆಚ್ಚದಲ್ಲಿ 38 ಕೆರೆಗಳನ್ನು ತುಂಬಿಸುವ ಯೋಜನೆ ಹಾಗೂ ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಹಾಗೂ ಇತರ ಪದೇಶಗಳಿಗೆ ಅಂದಾಜು ₹990 ಕೋಟಿ ಮೊತ್ತದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆ ಅನುಷ್ಠಾನಕ್ಕೆ ತೀರ್ಮಾನ. ಕಾವೇರಿ ನೀರಾವರಿ ನಿಗಮದಡಿ ₹2.000 ಕೋಟಿ ಮೊತ್ತದ ನೀರಾವರಿ, ನಾಲಾ ಹಾಗೂ ಕೆರೆ ತುಂಬಿಸುವ ಯೋಜನೆಗಳ ಜಾರಿಗೆ ನಿರ್ಧಾರ.

ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜಿಗಾಗಿ ಬೆಣ್ಣೆತೊರಾ ಜಲಾಶಯಕ್ಕೆ ಭೀಮಾ ಮತ್ತು ಕಾಗಿಣಾ ನದಿಗಳಿಂದ ನೀರು ತುಂಬಿಸುವ ₹365 ಕೋಟಿ ಮೊತ್ತದ ಯೋಜನೆ ಜಾರಿ. ಧಾರವಾಡ ಜಿಲ್ಲೆಯಲ್ಲಿ ಬೆಣ್ಣೆಹಳ್ಳದಿ೦ಂದ ಪ್ರವಾಹ ಪೀಡಿತ ಗ್ರಾಮಗಳಿಗೆ ತಡೆಗೋಡೆ ನಿರ್ಮಾಣಕ್ಕೆ ಕ್ರಮ.

ಸಣ್ಣ ನೀರಾವರಿ ಇಲಾಖೆ:

₹700 ಕೋಟಿ ವೆಚ್ಚದಲ್ಲಿ 115 ಜಲ ಸಂರಕ್ಷಣಾ ಕಾಮಗಾರಿ ಅನುಷ್ಠಾನದ ಜತೆಗೆ, ಪ್ರಗತಿಯಲ್ಲಿರುವ ₹455 ಕೋಟಿ ಮೊತ್ತದ ಕೆ.ಸಿ ವ್ಯಾಲಿ-2ನೇ ಹಂತದ ಉದ್ದೇಶಿತ 272 ಕೆರೆ ತುಂಬಿಸುವ ಯೋಜನೆ ಪೂರ್ಣಗೊಳಿಸಲು ಕ್ರಮ.

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ:

ಶಾಲಾ-ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ಥಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ ₹850 ಕೋಟಿ ನಿಗದಿ, ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ಸಿ.ಎಸ್‌.ಆರ್‌. ಅನುದಾನದಡಿ, ಕರ್ನಾಟಕ ಪಬ್ಲಕ್‌ ಶಾಲೆಗಳಾಗಿ ಆಯ್ದ ಶಾಲೆಗಳ ಉನ್ನತೀಕರಣ; 3 ರಿಂದ 5 ನೇ ತರಗತಿ ಎದ್ಯಾರ್ಥಿಗಳಿಗೆ ಗಣಿತ-ಗಣಕ ಕಾರ್ಯಕ್ರಮ, ₹10 ಕೋಟಿ ವೆಚ್ಚದಲ್ಲಿ ಮರು ಸಿ೦ಚನ ಕಾರ್ಯಕ್ರಮ; ಆಯ್ದ ಪ್ರೌಢ ಶಾಲೆಗಳಲ್ಲಿ ₹50 ಕೋಟಿ ವೆಚ್ಚದಲ್ಲಿ ವಿಜ್ಞಾನ ಹಾಗೂ ಕಂಪ್ಯೂಟರ್‌ ಪ್ರಯೋಗಾಲಯ ಸ್ಥಾಪನೆ, ಇಂಟರ್‌ನೆಟ್‌ ಸೌಲಭ್ಯ.

ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳ ಪರಿವರ್ತನೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಹೊಸ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾರಂಭ. ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ರಾಜ್ಯದ 74 ಆದರ್ಶ ವಿದ್ಯಾಲಯಗಳ ಉನ್ನತೀಕರಣ; 100 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಗಣಕ ವಿಜ್ಞಾನ ಸಂಯೋಜನೆ ಪ್ರಾರಂಭದ ಜತೆಗೆ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ವಿಜ್ಞಾನ ಪ್ರಯೋಗಾಲಯಗಳ ಉನ್ನತೀಕರಣ. ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ 20,000 ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ₹10 ಕೋಟಿ ವೆಚ್ಚದಲ್ಲಿ ನೀಟ್, ಜೆಇಇ, ಸಿಇಟಿ ತರಬೇತಿ ಕಾರ್ಯಕ್ರಮ ಜಾರಿಗೆ ತೀರ್ಮಾನ.

ಉನ್ನತ ಶಿಕ್ಷಣ:

ರಾಜ್ಯದ 30 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ಗಳ ಉನ್ನತೀಕರಣಕ್ಕಾಗಿ ಒಟ್ಟು ₹30 ಕೋಟಿ ಅನುದಾನ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಕಾಮಗಾರಿಗಳಿಗೆ ₹250 ಕೋಟಿ ಮತ್ತು ಸರ್ಕಾರಿ ಪಾಲಿಟೆಕ್ನಿಕ್‌ ಮತ್ತು ಎಂಜಿನಿಯರಿಂಗ್‌ ಕಾಲೇಜುಗಳ ಕಾಮಗಾರಿಗಳಿಗೆ ₹120 ಕೋಟಿ ಅನುದಾನ ಘೋಷಣೆ.

ಐಐಟಿ ಮಾದರಿಯಲ್ಲಿ ₹500 ಕೋಟಿ ವೆಚ್ಚದಲ್ಲಿ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯ ಅಭಿವೃದ್ಧಿಗೆ ಸರ್ಕಾರದಿಂದ ₹100 ಕೋಟಿ ಅನುದಾನ. ₹56 ಕೋಟಿ ವೆಚ್ಚದಲ್ಲಿ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡ ಹಾಗೂ ₹116 ಕೋಟಿ ವೆಚ್ಚದಲ್ಲಿ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಸ್ಟೆಲ್‌ ಕಟ್ಟಡ ನಿರ್ಮಾಣಕ್ಕೆ ಕ್ರಮ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ:

ರಾಜ್ಯದ ಏಳು ಜಿಲ್ಲೆಗಳಲ್ಲಿ ₹187 ಕೋಟಿ ವೆಚ್ಚದಲ್ಲಿ ಕ್ರಿಟಿಕಲ್‌ ಕೇರ್‌ ಬ್ಲಾಕ್‌ ಕಟ್ಟಡ ನಿರ್ಮಾಣ. ₹7 ಕೋಟಿ ವೆಚ್ಚದಲ್ಲಿ ಏಳು ತಾಲ್ಲೂಕುಗಳಲ್ಲಿ 100 ಹಾಸಿಗೆ ಸಾಮರ್ಥ್ಯದ ಆಸತ್ರೆ ನಿರ್ಮಾಣ. ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ಥಿ ಮತ್ತು ಉನ್ನತೀಕರಣಕ್ಕೆ ₹75 ಕೋಟಿ ಅನುದಾನ ನೀಡಲು ನಿರ್ಧಾರ.

ಬೆಂಗಳೂರಿನ ಕೆ.ಸಿ. ಜನರಲ್‌ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳಿಗೆ ₹150 ಕೋಟಿ. ಎರಡು ವರ್ಷಗಳಲ್ಲಿ ₹350 ಕೋಟಿ ವೆಚ್ಚದಲ್ಲಿ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣ. ಕಲ್ಯಾಣ ಕರ್ನಾಟಕ ಭಾಗದಲ್ಲಿ ₹221 ಕೋಟಿ ವೆಚ್ಚದಲ್ಲಿ 46 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ನಿರ್ಧಾರ.

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ 199 ಉಪಕೇ೦ದ್ರಗಳನ್ನು ಆರೋಗ್ಯ ಕ್ಷೇಮ ಕೇಂದ್ರಗಳ ಕಟ್ಟಡಕ್ಕಾಗಿ ₹130 ಕೋಟಿ ಅನುದಾನ. ₹20 ಕೋಟಿ ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದು ಡೇ-ಕೇರ್‌ ಕಿಮೋತೆರಪಿ ಕೇ೦ದ್ರ ಸ್ಥಾಪನೆ. 20 ಜಿಲ್ಲಾ ಆಸ್ಪತ್ರೆಗಳಲ್ಲಿ digital mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್‌ ಆಸ್ಪತ್ರೆ ಬೆ೦ಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ colposcopy ಉಪಕರಣ ಖರೀದಿಗೆ ₹21 ಕೋಟಿ ಅನುದಾನ ನೀಡುವುದಕ್ಕೆ ತೀರ್ಮಾನ.

ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿಶಾಮಕ ವ್ಯವಸ್ಥೆಯನ್ನು ಒದಗಿಸಲು ₹6 ಕೋಟಿ ಅನುದಾನ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಷಯ ರೋಗ ತಪಾಸಣೆಗಾಗಿ 87 Truenat Machines ಗಳ ಖರೀದಿಗೆ ₹6 ಕೋಟಿ ಅನುದಾನ. ಉತ್ತರ ಕರ್ನಾಟಕದ ಜಿಲ್ಲೆಗಳ First Referral Unit (FRU) ಗಳಲ್ಲಿ ಎರಡು ವರ್ಷಗಳಲ್ಲಿ 50 ಹೊಸ ರಕ್ತ ಶೇಖರಣಾ ಘಟಕಗಳ ಸ್ಥಾಪನೆಗೆ ನಿರ್ಧಾರ.

ಮುಂದಿನ 4 ವರ್ಷದಲ್ಲಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಸ್ಥಾಪನೆ; ಮುಂದಿನ ಎರಡು ವರ್ಷಗಳಲ್ಲಿ 16 ಜಿಲ್ಲೆಗಳಲ್ಲಿ ಹಾಗೂ ಪ್ರಸಕ್ತ ಸಾಲಿನಲ್ಲಿ ತಾಲ್ಲೂಕು ಮಟ್ಟದ ಪ್ರಯೋಗಾಲಯ ಸ್ಥಾಪನೆ. ಒಟ್ಟಾರೆ ₹11 ಕೋಟಿ ಅನುದಾನ. ಬೆಂಗಳೂರಿನಲ್ಲಿ ಮುಂದಿನ ಎರಡು ವರ್ಷಗಳಲ್ಲಿ HUB and Spoke ಮಾದರಿಯಲ್ಲಿ 430 ಪ್ರಯೋಗಾಲಯಗಳ ಸ್ಥಾಪನೆಗೆ ₹20 ಕೋಟಿ ಅನುದಾನಕ್ಕೆ ನಿರ್ಧಾರ.

ವೈದ್ಯಕೀಯ ಶಿಕ್ಷಣ

ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ. 2024-25ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ ₹400 ಕೋಟಿ ಹಾಗೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ ₹130 ಕೋಟಿ ಅನುದಾನದ ಜತೆಗೆ, ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಣ.

ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕ ಸ್ಥಾಪನೆ. ಬೆ೦ಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ ₹20 ಕೋಟಿ ವೆಚ್ಚದಲ್ಲಿ ರೋಬೋಟಿಕ್‌ ಶಸ್ತ್ರಚಿಕಿತ್ಸಾ ಸೌಲಭ್ಯ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ Viral Research & Diagnostic Laboratory (VRDL) ಸ್ಥಾಪನೆ. ದಿಜಿಟಲ್‌ ಹೆಲ್ತ್‌ ಸೊಸೈಟಿಯಡಿ Health Repository ಯನ್ನು ಸೃಜಿಸಿ ಸಾರ್ವಜನಿಕರ ಚಿಕಿತ್ಸಾ ಮಾಹಿತಿ ಒಂದೇ ಮೂಲದಿಂದ ಲಭ್ಯವಾಗುವಂತೆ ಮಾಡಲು ಕ್ರಮ. ಮೃಸೂರು ವೈದ್ಯಕೀಯ ಮಹಾವಿದ್ಯಾಲಯ ಶತಮಾನೋತ್ಸವದ ಸವಿ ನೆನಪಿಗಾಗಿ ಕೆ.ಆರ್‌. ಆಸ್ಪತ್ರೆ ಆವರಣದಲ್ಲಿ ₹75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡ ನಿರ್ಮಾಣಕ್ಕೆ ಕ್ರಮ.

ಇದನ್ನೂ ಓದಿ; ರಾಜ್ಯ ಬಜೆಟ್: ಸುಳ್ಳು ಸುದ್ದಿ ತಡೆಗೆ ಸತ್ಯ ಶೋಧನಾ ತಂಡ ರಚನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...