Homeಮುಖಪುಟಸಿದ್ದರಾಮಯ್ಯ ಬಜೆಟ್: ವಿಪಕ್ಷಗಳ ಪ್ರತಿಕ್ರಿಯೆ ಹೀಗಿದೆ...

ಸಿದ್ದರಾಮಯ್ಯ ಬಜೆಟ್: ವಿಪಕ್ಷಗಳ ಪ್ರತಿಕ್ರಿಯೆ ಹೀಗಿದೆ…

- Advertisement -
- Advertisement -

ಇಂದು ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ಕುರಿತು ಪ್ರತಿಪಕ್ಷಿಗಳು ಟೀಕಾಪ್ರಹಾರ ನಡೆಸಿವೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್.ಡಿ ಕುಮಾರಸ್ವಾಮಿ ಮತ್ತು ಆಮ್ ಆದ್ಮಿ ಪಕ್ಷ ಇದೊಂದು ನಿರಾಶಾದಾಯಕ ಬಜೆಟ್ ಎಂದು ಕರೆದಿವೆ.

ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ ಬಜೆಟ್: ಬಸವರಾಜ ಬೊಮ್ಮಾಯಿ

ಬಜೆಟ್ ನಲ್ಲಿ ಭವಿಷ್ಯದ ಯೋಜನೆಗಳ ಕುರಿತು ಹೇಳುವ ಬದಲು, ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ, ರಿವರ್ಸ್ ಗೇರ್ ಬಜೆಟ್‌ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಜಾರಿಯ ಹೆಸರಲ್ಲಿ ಈ‌ ಬಜೆಟ್ ಸಾಮಾನ್ಯರ ಮೇಲೆ ದೊಡ್ಡ ಹೊರೆ ಹೊರೆಸಿದೆ. ನಮ್ಮದು 77 ಸಾವಿರ ಕೋಟಿ ಸಾಲ ಇದ್ದದ್ದು, ಈಗ 88 ಸಾವಿರ ಕೋಟಿಗೆ ಹೆಚ್ಚಿಸಿದ್ದಾರೆ. ಬಜೆಟ್ ಗಾತ್ರ 3.27 ಲಕ್ಷ ಕೋಟಿ ಮಾಡಿದ್ದಾರೆ. ನಾವು ಸರಪ್ಲಸ್ ಬಜೆಟ್ ಮಾಡಿದ್ದೆವು, ಇವರು ಡೆಫಿಸಿಟ್ ಬಜೆಟ್ ಮಾಡಿದ್ದಾರೆ. ಯಾವುದೇ ಭರವಸೆ ನೀಡದೆ, ಜನರಿಗೆ ಸುಳ್ಳು ಭರವಸೆ ನೀಡಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ, ಪಿಡಬ್ಲುಡಿ, ನೀರಾವರಿ, ಯೋಜನೆಗಳಿಗೆ ಅನುದಾನ ಪ್ರಮಾಣ ಕಡಿಮೆ ಮಾಡಿದ್ದಾರೆ. ಹೆಚ್ಚಿನ ಅನುದಾನ ನೀಡದೆ ಅಭಿವೃದ್ಧಿ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದರು.

ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್..: ಹೆಚ್.ಡಿ ಕುಮಾರಸ್ವಾಮಿ

ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ, ಹಿಂದಿನ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ ಬಜೆಟ್ ಇದಾಗಿದೆ. ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಹಾಗೂ ಅನೇಕ ಎಟಿಎಮ್ ಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಜೆಟ್ಟಿನಲ್ಲಿ ದುಡಿಯುವ ಜನರ ಕೈಗೆ ಸ್ವಾವಲಂಭಿಯಾಗಲು, ಅವರು ಬದಕಲು ದೀರ್ಘಕಾಲೀನ ಯೋಜನೆ ಏನು? ಈ ಪ್ರಶ್ನೆ ಹಾಕಿಕೊಂಡರೆ ಉತ್ತರ ಶೂನ್ಯ ಎಂದ ಅವರು; ಇವರ ಯಾವ ಗ್ಯಾರಂಟಿಗೂ ನನ್ನ ತಕರಾರಿಲ್ಲ, ಇನ್ನೂ ಎರಡು ಜ್ಯೋತಿ ಕೊಡಿ. ನಮದ್ದೇನು ತಕರಾರಿಲ್ಲ. ವರ್ಷಕ್ಕೆ 50 ರಿಂದ 60 ಸಾವಿರ ವೆಚ್ಚಾಗಲಿದೆ. ಇದೊಂದೇ ಈ ಬಜೆಟ್ ನಲ್ಲಿ ಇರೊದು. ಆದರೆ ಯಾವುದಕ್ಕೂ ಈ ಬಜೆಟ್ ನಲ್ಲಿ ಹಣ ಇಟ್ಟಿಲ್ಲ. ಇದು ಕೇವಲ ಕೇಂದ್ರ ಸರ್ಕಾರ- ಹಿಂದಿನ ಸರ್ಕಾರವನ್ನ ದೂಷಣೆ ಮಾಡುವ ಬಜೆಟ್ ಅಷ್ಟೇ. ಇದರಲ್ಲಿ ಏನೂ ಇಲ್ಲ ಎಂದು ದೂರಿದರು.

ಬಸವರಾಜ ಬೊಮ್ಮಾಯಿ 77 ಸಾವಿರ ಕೋಟಿ ಸಾಲ ಮಾಡಿದ್ರು, ಇವರು 85 ಸಾವಿರ ಕೋಟಿಗೆ ತೆಗೆದುಕೊಂಡು ಹೋಗಿದ್ದಾರೆ. ಹಿಂದಿನ ಬಜೆಟ್ ನ ಯೋಜನೆ ಎಲ್ಲ ಲೆಕ್ಕಾಚಾರ ತೆಗೆದ್ರು 59 ಕೋಟಿ ವ್ಯತ್ಯಾಸ ಆಗಿರಬಹುದು ಅಷ್ಟೇ. ಆರೋಗ್ಯ, ಶಿಕ್ಷಣ ಕ್ಷೇತ್ರ ಪ್ರಮುಖವಾದುವು, ಅದಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕಿದೆ. ಅದನ್ನು ಜನರಿಗೆ ತಲುಪಲು ನಾವು ಎಡವುತ್ತಿದ್ದೇವೆ. ಮೂಲಭೂತವಾಗಿ ಜನರಿಗೆ ಏನು ಬೇಕು ಎನ್ನುವ ಬಗ್ಗೆ ಬಜೆಟ್ ಪೂರ್ಣವಾಗಿ ಎಡವಿದೆ ಎಂದು ಅವರು ತರಾಟೆಗೆ ತೆಗೆದುಕೊಂಡರು.

ಶೇ.109ರಷ್ಟು ಆದಾಯ ಕೊರತೆ ಹೆಚ್ಚಳವಾಗಿದೆ: ಪೃಥ್ವಿ ರೆಡ್ಡಿ

ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿ ಬಜೆಟ್‌ ಭರವಸೆ ನೀಡಿದ್ದಾರೆ. ವಾಸ್ತವದಲ್ಲಿ ಇಂದು ಮಂಡಿಸಿರುವ ಬಜೆಟ್‌ನಲ್ಲಿ ಶೇ.109ರಷ್ಟು ಆದಾಯ ಕೊರತೆ ಹೆಚ್ಚಳವಾಗಿದ್ದು, ಅದು ದುಪ್ಪಟ್ಟಾಗಿದೆ. ಕಾಂಗ್ರೆಸ್ ಪಕ್ಷ ಕರ್ನಾಟಕದ ಜನತೆಗೆ ನೀಡಿದ ಭರವಸೆಗಳು ಕೇವಲ ಮತಕ್ಕಾಗಿಯೇ ಹೊರತು ಮತದಾರರಿಗಾಗಿ ಅಲ್ಲ.

ಕರ್ನಾಟಕದ ಜನರು “ಖಾತರಿ”ಗಳಿಂದ ವಂಚಿಸಿದ್ದಾರೆ, ವಾಸ್ತವದಲ್ಲಿ ಕಾಂಗ್ರೆಸ್ ಸರ್ಕಾರವು ಒಂದು ಕೈಯಲ್ಲಿ ಕೊಟ್ಟು ಎರಡು ಕೈಯಿಂದ ತೆಗೆದುಕೊಳ್ಳುತ್ತಿದೆ ಎಂಬುದನ್ನು ಬಜೆಟ್ ಬಹಿರಂಗಪಡಿಸುತ್ತದೆ. ಕೃಷಿ ಮತ್ತು ತೋಟಗಾರಿಕೆ ಶೇ.25ರಷ್ಟು ಕಡಿಮೆಯಾಗಿದೆ. ಸಮಾಜ ಕಲ್ಯಾಣ 42% ರಷ್ಟು ಕಡಿಮೆಯಾಗಿದೆ. ಸಹಕಾರ 16% ಕಡಿಮೆಯಾಗಿದೆ. ಅರಣ್ಯ, ಪರಿಸರ ಮತ್ತು ಪರಿಸರವನ್ನು 67% ರಷ್ಟು ಕಡಿತಗೊಳಿಸಲಾಗಿದೆ. ಹಾಲು ಶೇ.2ರಷ್ಟು ಕಡಿತವಾಗಿದೆ. ಸಾರ್ವಜನಿಕ ಸಾಲವನ್ನು ಸುಮಾರು 19000 ಕೋಟಿ ಅಥವಾ 28% ರಷ್ಟು ಹೆಚ್ಚಿಸುವ ಮೂಲಕ, ಅದೂ ಮುಖ್ಯವಾಗಿ ಮುಕ್ತ ಮಾರುಕಟ್ಟೆಯಿಂದ .ಸಾಲ ಮತ್ತು ಬಡ್ಡಿಯ ಮರುಪಾವತಿಯು ಪ್ರಾಮಾಣಿಕ ತೆರಿಗೆದಾರರ ಮೇಲೆ ಮತ್ತಷ್ಟು ಹೊರೆಯನ್ನು ಉಂಟುಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; 2023-24ರ ಆಯವ್ಯಯ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ: ನಿರಂಜನಾರಾಧ್ಯ.ವಿ.ಪಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...