Homeಕರ್ನಾಟಕಸಿದ್ದರಾಮಯ್ಯರ ಬಜೆಟ್‌ನಲ್ಲಿ ಮಹಿಳೆ ಕಾಣೆ! - ಹೋರಾಟಗಾರ್ತಿ ದೇವಿ

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಮಹಿಳೆ ಕಾಣೆ! – ಹೋರಾಟಗಾರ್ತಿ ದೇವಿ

- Advertisement -
- Advertisement -

ಶಕ್ತಿ, ಗೃಹಲಕ್ಷ್ಮಿ ಯೋಜನೆಗಳನ್ನು ಬಿಟ್ಟು ರಾಜ್ಯದ ಈ ವರ್ಷದ ಬಜೆಟ್‌ನಲ್ಲಿ ಮಹಿಳೆಯರಿಗೆಂದು ಯಾವುದೆ ಪಾಲನ್ನು ಸಿಎಂ ಸಿದ್ದರಾಮಯ್ಯ ಅವರು ನೀಡಿಲ್ಲ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಬುಧವಾರ ಹೇಳಿದರು. ಅವರು ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಮಹಿಳಾ ಚಳವಳಿ ಆಗ್ರಹಗಳು’ ಎಂಬ ವಿಷಯದ ಬಗ್ಗೆ ಮಾತನಾಡುತ್ತಿದ್ದರು. ಸಿದ್ದರಾಮಯ್ಯರ

“ಭೂಮಿ ಮಹಿಳೆಯರ ಹೆಸರಿನಲ್ಲಿ ಇಲ್ಲ ಎಂಬ ಕಾರಣಕ್ಕಾಗಿ ಮಹಿಳೆಯರನ್ನು ಅವಗಣನೆ ಮಾಡಲಾಗಿದೆ. ಸುಮಾರು 100 ಕ್ಕೆ 80% ಮಹಿಳೆಯರು ಸಾಲದ ಸುಳಿಯಲ್ಲಿ ಇದ್ದಾರೆ. ಮಹಿಳೆಯರು ಆಹಾರ, ಕೃಷಿ, ಆರೋಗ್ಯಕ್ಕೋಸ್ಕರ ಈ ಸಾಲ ಮಾಡಿದ್ದಾರೆ. ಮೈಕ್ರೋ ಫೈನಾನ್ಸ್‌ಗಳ ಆಟಾಟೋಪಕ್ಕೆ ತಡೆ ನೀಡಿದ ಸರ್ಕಾರ, ಮಹಿಳೆಯರಿಗೆ ಯಾವುದೆ ಅನುದಾನ ನೀಡದೆ ಇದ್ದರೆ ಯಾವ ಲಾಭವಾಗಲಿದೆ? ಕೇವಲ ಗ್ಯಾರೆಂಟಿ ಯೋಜನೆಯನ್ನು ತೋರಿಸಿದರೆ ಸಾಕೆ?” ಎಂದು ಅವರು ಕೇಳಿದರು. ಸಿದ್ದರಾಮಯ್ಯರ

“ಸ್ತ್ರೀ ಶಕ್ತಿ ಸಂಘಗಳನ್ನು ಬಲಪಡಿಸಿ ಒಂದು ಗುಂಪಿಗೆ ಕನಿಷ್ಠ 10 ಲಕ್ಷ ಸಾಲವನ್ನು ನೀಡಿಬೇಕಿತ್ತು. ಅವರಿಗೆ ಸಾಲ ನೀಡಿ ಆಯಾ ಪ್ರದೇಶದಲ್ಲಿ ಸ್ವ-ಉದ್ಯೋಗ ಮಾಡುವ ತರಬೇತಿ ಕೊಟ್ಟು ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಒದಗಿಸಿಕೊಡಬೇಕಿತ್ತು. ಆದರೆ ಸರ್ಕಾರ ಇದನ್ನು ಮಾಡಿಲ್ಲ. ಈ ಹಿಂದೆ ನಿರ್ಭಯ ಫಂಡ್ ಎಂದು ಅತ್ಯಚಾರ ಮತ್ತು ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೋಸ್ಕರವೇ ಅನುದಾನವನ್ನು ಸರ್ಕಾರ ನೀಡುತ್ತಿತ್ತು. ಆದರೆ ಈಗ ಅದನ್ನು ನಿಲ್ಲಿಸಿದೆ.” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

“ವಿಧವೆ, ಪರಿತ್ಯಕ್ತ ಮತ್ತು ಮದುವೆ ಆಗದ ಮಳೆಯರಿಗೆ ಕೇವಲ 800 ರೂ.ಗಳನ್ನು ಮಾತ್ರ ಸರಕಾರ ನೀಡುತ್ತಿದೆ. ಈ ಹಣದಲ್ಲಿ ಅವರು ಬದುಕು ಕಟ್ಟಿಕೊಳ್ಳಲು ಹೇಗೆ ಸಾಧ್ಯ? ಈ ಬಗ್ಗೆ ಬಜೆಟ್‌ನಲ್ಲಿ ಯಾವುದೆ ಚರ್ಚೆ ಮಾಡಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ತಿಳಿಸಿದ್ದರೂ ಅವುಗಳ ಬಗ್ಗೆ ಅವರು ಬಜೆಟ್‌ನಲ್ಲಿ ಉಲ್ಲೇಖಿಸಿಲ್ಲ. ಸಾವಿರಾರು ಎಕರೆ ಭೂಮಿಯನ್ನು ಕಾರ್ಪೋರೇಟ್‌ಗಳಿಗೆ ನೀಡುವ ಸರ್ಕಾರ ಬಡವರು ನಿವೇಶನಕ್ಕಾಗಿ ಭೂಮಿ ಕೇಳಿದಾಗ ಭೂಮಿ ಇಲ್ಲ ಎಂದು ಹೇಳುತ್ತದೆ” ಎಂದು ಅವರು ಹೇಳಿದರು.

ಗರ್ಭಕೋಶದ ಕಾನ್ಸರ್‌, ಸ್ತನ ಕ್ಯಾನ್ಸರ್ ಸೇರಿದಂತೆ ಹಲವು ರೋಗಗಳಿಗೆ ಮಹಿಳೆಯರು ಒಳಗಾಗುತ್ತಿದ್ದಾರೆ. ಅವರಿಗೆ ಯಾವುದೆ ಅನುದಾನವನ್ನು ಸರ್ಕಾರ ಬಜೆಟ್‌ನಲ್ಲಿ ನೀಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

“ಬಾಲ್ಯವಿವಾಹ, ಭ್ರೂಣ ಹತ್ಯೆ, ಮರ್ಯಾದಗೇಡು ಹತ್ಯೆ ನಡೆಯುತ್ತಿವೆ. ಹೆಣ್ಣು ಭ್ರೂಣ ಹತ್ಯೆಯಂತೂ ರಾಜ್ಯದಾದ್ಯಂತ ನಡೆಯುತ್ತಿವೆ. ಬಾಲ್ಯ ವಿವಾಹದಲ್ಲಿ ರಾಜಸ್ಥಾನದ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇವುಗಳನ್ನು ಉದ್ದೇಶಿಸಿ ಬಜೆಟ್ ಮಂಡಿಸದ ಸರ್ಕಾರ, ಕೇವಲ ಶಕ್ತಿ ಮತ್ತು ಗೃಹ ಲಕ್ಷ್ಮಿ ಯೋಜನೆಯನ್ನು ಮಾತ್ರ ತೋರಿಸುತ್ತಿವೆ. ರಾಜ್ಯದಲ್ಲಿ ಐದು ಸಾವಿರಕ್ಕೂ ಹೆಚ್ಚು ಮಹಿಳೆಯ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲೆ ಮಹಿಳೆಯರು ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಕಾಣೆಯಾಗಿದ್ದಾರೆ” ಎಂದು ಅವರು ಹೇಳಿದರು.

ಕೇಂದ್ರದ ಹಣಕಾಸಿನ ಮಂತ್ರಿಯ ತಲೆಯಲ್ಲಿ ಸಗಣಿ, ಗಂಜಲ ಅಷ್ಟೆ ಇದೆ: ಹೋರಾಟಗಾರ್ತಿ ಗೌರಿ ಆಕ್ರೋಶ

ಮಹಿಳಾ ಮುನ್ನಡೆ ರಾಜ್ಯ ಸಮನ್ವಯಕಾರರಾದ ಗೌರಿ ಮಾತನಾಡಿ, “ತೊಗರಿಬೇಳೆಗೆ 18% ಜಿಎಸ್‌ಟಿ ಹಾಕುವ ಸರ್ಕಾರ ವಜ್ರಗಳಿಗೆ 1% ಜಿಎಸ್‌ಟಿ ಹಾಕುತ್ತಿದೆ. ಕೇಂದ್ರದ ಹಣಕಾಸಿನ ಮಂತ್ರಿಯ ತಲೆಯಲ್ಲಿ ಸಗಣಿ, ಗಂಜಲ ಅಷ್ಟೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. “ದಲಿತ, ಮಹಿಳೆ, ಟ್ರಾನ್ಸ್‌ಜೆಂಡರ್‌ಗಳ ಪರಿಸ್ಥಿತಿ ಕೆಟ್ಟದಾಗಿದೆ. ಬಜೆಟ್ ಪೂರ್ವ ಸಭೆಯಲ್ಲಿ ಮಹಿಳೆಯರನ್ನು ಕೆರೆದು ಅವರ ಆಗ್ರಹವನ್ನು ಕೇಳುತ್ತಿಲ್ಲ. ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆಯನ್ನು ಮುಂದಿಟ್ಟು ಮಹಿಳೆಯರು ಸರ್ವತೋಮುಖ ಅಭಿವೃದ್ಧಿ ಆಗಿದ್ದಾರೆ ಎಂದು ಬಿಂಬಿಸುತ್ತಿದ್ದಾರೆ” ಎಂದು ಅವರು ಹೇಳಿದರು.

“ಸಾಂಸ್ಕೃತಿಕ ವಿಚಾರಗಳು ಮಹಿಳೆಯರನ್ನು ಅಲುಗಾಡಿಸುತ್ತಿವೆ. ಟಿವಿ ಸೀರಿಯಲ್‌ಗಳು ನಮ್ಮ ಸಮಾಜವನ್ನು ಹಾಳು ಮಾಡುತ್ತಿದ್ದು, ಅತ್ಯಾಚಾರ ಮತ್ತು ಮಹಿಳಾ ದೌರ್ಜನ್ಯವನ್ನು ಪ್ರೋತ್ಸಾಹಿಸುತ್ತಿವೆ. ಬಲಾಢ್ಯರು ಮಹಿಳಾ ದೌರ್ಜನ್ಯ ಎಸಗಿದರೆ ಅದರಿಂದ ತಪ್ಪಿಸಿಕೊಳ್ಳಬಹುದು ಎಂದು ಸೌಜನ್ಯ ಪ್ರಕರಣ ಸಾಬೀತು ಮಾಡಿದೆ. ಇಂತಹ ದೊಡ್ಡವರನ್ನು ಯಾಕೆ ಸರ್ಕಾರ ಬಂಧಿಸಿಲ್ಲ ಎಂಬುವುದಕ್ಕೆ ಉತ್ತರ ಸಿಗಬೇಕಿದೆ” ಎಂದರು.

“ದೇವದಾಸಿಯರ ಮಕ್ಕಳು ತಮ್ಮ ತಂದೆಯ ಹೆಸರಿನ ಕಾಲಂನಲ್ಲಿ ಹೆಸರು ಹಾಕುವುದಿಲ್ಲ ಎಂಬ ಚಿಕ್ಕ ವಿಷಯಕ್ಕೂ ಈಗಲೂ ಹೋರಾಟ ಮಾಡುತ್ತಿದ್ದಾರೆ. ಬಜೆಟ್‌ನಲ್ಲಿ ನೀಡುವ ಗ್ಯಾರೆಂಟಿ ಯೋಜನೆಗಳಲ್ಲಿ ಮಹಿಳೆಯರಿಗೆ ನೀಡುವ ಕಾರ್ಯಕ್ರಮಗಳ ಬಗ್ಗೆ ಕೂಡಾ ಸರ್ಕಾರ ಸಮರ್ಥನೆ ಮಾಡುತ್ತಿಲ್ಲ. ಜನಸಂಖ್ಯೆಯ ಅರ್ಧದಷ್ಟಿರುವ ಹೆಣ್ಣು ಮಕ್ಕಳು ಇನ್ನೂ ಅತ್ಯಾಚಾರಕ್ಕೆ, ದೌರ್ಜನ್ಯಕ್ಕೆ ಒಳಗಾಗುತ್ತಿದ್ದರೆ ನಾಗರೀಕ ಸಮಾಜ ಸಮಾಧಾನದಿಂದ ನಿದ್ದೆ ಮಾಡಲು ಸಾಧ್ಯವಿಲ್ಲ” ಎಂದು ಗೌರಿ ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...