ಕುಮಾರಸ್ವಾಮಿ
PC: NEWS24

ರಾಜ್ಯದಲ್ಲಿ ಉಪಚುನಾವಣೆಯ ಕಾವು ಹೆಚ್ಚಾಗುತ್ತಿದ್ದು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ’’ಸಿದ್ದರಾಮಯ್ಯ ಅಗ್ಗದ ಯೋಜನೆಗಳ ಮೂಲಕ ಜನರ ತುಟಿಗೆ ತುಪ್ಪ ಸವರಿದ್ದಾರೆ’’ ಎಂದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಮೇಲೆ ಸರಣಿ ಟ್ವೀಟ್ ಮಾಡಿ ಮುಗಿಬಿದ್ದಿದ್ದಾರೆ.

’’ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ಅರ್ಧಚಂದ್ರ ಪ್ರಯೋಗ ಮಾಡಿದರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ’’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ: ಆರ್‌.ಆರ್‌ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ರವಿ ಪತ್ನಿ ಕುಸುಮಾ-ಸಿದ್ದರಾಮಯ್ಯ

’’ಜನ ಕಲ್ಯಾಣಕ್ಕೆ ದೂರದೃಷ್ಟಿಯ ಕಾರ್ಯಸಾಧ್ಯವಾದ ಯೋಜನೆಗಳನ್ನು ರೂಪಿಸುವಲ್ಲಿ ಎಡವಿದ್ದ ಸಿದ್ದರಾಮಯ್ಯ, ಅಗ್ಗದ ಯೋಜನೆಗಳ ಮೂಲಕ ಜನರ ತುಟಿಗೆ ತುಪ್ಪ ಸವರುವ ಆಡಳಿತಕ್ಕೆ ಕಳೆದ ಬಾರಿ ತಕ್ಕ ಶಾಸ್ತಿ ಮಾಡಿದ್ದರು. ಇವರ ದುರಾಡಳಿತವನ್ನು ಜನತೆ ಇನ್ನೂ ಮರೆತಿಲ್ಲ. ಉಪಚುನಾವಣೆಯಲ್ಲೂ ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ’’ ಎಂದು ಅವರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

’’ಯಾರನ್ನು ಯಾರು ಎಲ್ಲಿಗೆ ಕಳುಹಿಸಿದರು? ಸ್ವಾರ್ಥ ರಾಜಕಾರಣಕ್ಕಾಗಿ ಮೂಲ ಕಾಂಗ್ರೆಸ್ಸಿಗರ ಮೇಲೆ ಯಾರು ಸವಾರಿ ಮಾಡುತ್ತಿದ್ದಾರೆ? ಎಂಬುದನ್ನು ತಿಳಿಯದಷ್ಟು ಜನ ಪೆದ್ದರಲ್ಲ. ನಮ್ಮ ಮೂವರು ಶಾಸಕರು ಪಕ್ಷದಿಂದ ಹೊರಹೋಗಲು ನಡೆದ ಸಂಚಿನಲ್ಲಿ ಹಣ ಅಧಿಕಾರದ ಆಮಿಷ ಮಾತ್ರವಲ್ಲ. ಕೆಲವರ ‘ಕೈ’ವಾಡ ಕೂಡ ಕಾರಣ’’ ಎಂದಿರುವ ಕುಮಾರಸ್ವಾಮಿ ಆಪರೇಷನ್ ಕಮಲದಲ್ಲಿ ಕಾಂಗ್ರೆಸ್ ಕೈವಾಡ ಇದೆಯೆಂದು ಪರೋಕ್ಷವಾಗಿ ಆರೋಪಿದ್ದಾರೆ.

“ಕಾಂಗ್ರೆಸ್ ಪಕ್ಷದ ಹತ್ತಾರು ಮಂದಿ ಪೈಕಿ ‘ಎದೆ ಸೀಳಿದರೆ ಸಿದ್ದು ಕಾಣುತ್ತಾರೆ’ ಎಂಬ ಅನುಯಾಯಿಗಳು ಬಿಜೆಪಿಗೆ ಹಾರಲು ಮಸಲತ್ತು ನಡೆಸಿದವರು ಯಾರೆಂಬುದು ‘ಸಿದ್ಧವನ’ದಲ್ಲಿ ಕುಳಿತಿದ್ದ ‘ರಾಮ’ನಿಗೂ ಗೊತ್ತಿತ್ತು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ: ಡಿಕೆ ಸಹೋದರರ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್ ಖಂಡನೆ

“ಮೈತ್ರಿ ಸರ್ಕಾರ ತೆಗೆಯಲು ಅಳಲೇಕಾಯಿ ಪಂಡಿತನಂತೆ ಔಷಧ ಅರೆದ ವ್ಯಕ್ತಿಗೆ ನಮ್ಮ ಮೂವರು ಶಾಸಕರುದ್ದು ಓಡಿ ಹೋದರೋ? ನಾವೇ ಕತ್ತು ಹಿಡಿದು ನೂಕಿದವೋ? ಎಂದು ಗೊತ್ತಿಲ್ಲದ ಜಾಣ ಪೆದ್ದನಾಗಿದ್ದು ವಿಪರ್ಯಾಸ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಎರಡೂ ಕಡೆ ಪಕ್ಷಾಂತರಗಳು ಇನ್ನು ಮುಂದೆ ತುಂಬಾ ಹೆಚ್ಚಾಗಲಿವೆ: ಡಿ.ಕೆ ಶಿವಕುಮಾರ್‌

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here