Homeಕರ್ನಾಟಕರಾಜ್ಯದಲ್ಲಿ 'ಆಪರೇಷನ್ ಕಮಲ'ಕ್ಕೆ ಯತ್ನ: ಸಿಎಂ ಸಿದ್ದರಾಮಯ್ಯ; ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯಿಂದ 50ಕೋಟಿ ರೂ. ಆಫರ್‌?

ರಾಜ್ಯದಲ್ಲಿ ‘ಆಪರೇಷನ್ ಕಮಲ’ಕ್ಕೆ ಯತ್ನ: ಸಿಎಂ ಸಿದ್ದರಾಮಯ್ಯ; ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯಿಂದ 50ಕೋಟಿ ರೂ. ಆಫರ್‌?

- Advertisement -
- Advertisement -

ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಆಪರೇಷನ್ ಕಮಲ ನಡೆಸಲು ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದು, ಕೈ ಶಾಸಕರಿಗೆ 50ಕೋಟಿ ರೂ.ಆಫರ್‌ ನೀಡಲಾಗಿದೆ ಎಂದು ಹೇಳಿದ್ದಾರೆ.

ಇಂಡಿಯಾ ಟುಡೇ ಟಿವಿಯ ಕನ್ಸಲ್ಟಿಂಗ್ ಎಡಿಟರ್ ರಾಜ್‌ದೀಪ್ ಸರ್ದೇಸಾಯಿ ಅವರೊಂದಿಗೆ ನಡೆಸಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಆಡಳಿತಾರೂಢ ಕಾಂಗ್ರೆಸ್‌ನ ಶಾಸಕರಿಗೆ ಪಕ್ಷ ತ್ಯಜಿಸಲು ಬಿಜೆಪಿ 50 ಕೋಟಿ ರೂಪಾಯಿಗಳ ಆಫರ್‌ ನೀಡಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನಿರೀಕ್ಷಿತ ಫಲಿತಾಂಶ ನೀಡದೆ ಸೋತರೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕಳೆದ ಒಂದು ವರ್ಷದಿಂದ ಅವರು ನಮ್ಮ ಸರ್ಕಾರವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಶಾಸಕರಿಗೆ 50 ಕೋಟಿ ರೂ.ಗಳ ಆಫರ್‌ ನೀಡಲಾಯಿತು, ಅವರು ಪ್ರಯತ್ನಿಸಿದರು ಮತ್ತು ವಿಫಲರಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸೋತರೆ ಕಾಂಗ್ರೆಸ್ ಸರ್ಕಾರ ಪತನವಾಗುವ ಕುರಿತ ಟೀಕೆಯನ್ನು ಸಿದ್ದರಾಮಯ್ಯ ಅವರು ತಳ್ಳಿ ಹಾಕಿದ್ದಾರೆ. ನಮ್ಮ ಶಾಸಕರು ಪಕ್ಷ ಬಿಡುವುದಿಲ್ಲ. ಒಬ್ಬ ಶಾಸಕರೂ ಕೂಡ ಕಾಂಗ್ರೆಸ್‌ ಪಕ್ಷವನ್ನು ಬಿಡುವುದಿಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತನ್ನ ಪೂರ್ಣ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿ ನಾಯಕ ಎಸ್ ಪ್ರಕಾಶ್ ಅವರು ಸಿದ್ದರಾಮಯ್ಯ ಮಾಡಿರುವ ಆರೋಪಗಳನ್ನು ದುರದೃಷ್ಟಕರ ಎಂದು ಕರೆದಿದ್ದಾರೆ. ತಮ್ಮನ್ನು ಬೆಂಬಲಿಸುತ್ತಿರುವ ಸಮಾಜದ ಒಂದು ವರ್ಗದ ಜನರ ಅನುಕಂಪ ಗಿಟ್ಟಿಸಿಕೊಳ್ಳಲು ಅವರು ಪದೇ ಪದೇ ಇಂತಹ ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 28 ಸ್ಥಾನಗಳನ್ನು ಗೆಲ್ಲುವತ್ತ ಗಮನ ಹರಿಸುವ ಬದಲು, ಸಿದ್ದರಾಮಯ್ಯ ಅವರು ಚುನಾವಣೆಯ ನಂತರ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಮಾತ್ರ ಗಮನ ಹರಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆ ಪ್ರಚಾರಕ್ಕೆ ರಾಜ್ಯಕ್ಕೆ ಬರುವ ಬಗ್ಗೆ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಅವರು ರಾಜ್ಯಕ್ಕೆ ಏನು ಕೊಡುಗೆಗಳನ್ನು ನೀಡಿದ್ದಾರೆ ಎಂಬುವುದನ್ನು ತಿಳಿಸಲಿ ಎಂದು ಹೇಳಿದ್ದಾರೆ.

ಮೋದಿಯವರು ಪ್ರಚಾರಕ್ಕಾಗಿ ಮೈಸೂರಿಗೆ ಬರುತ್ತಿರುವುದಕ್ಕೆ‌ ನಮ್ಮ ಅಭ್ಯಂತರವೇನಿಲ್ಲ. ನಿರುದ್ಯೋಗ ನಿವಾರಣೆಗೆ ಏನು ಮಾಡಿದ್ದಾರೆ? ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದೆ.‌ ಅದನ್ನು ಪರಿಹರಿಸಲು ಏನು ಮಾಡಿದ್ದಾರೆ? ಬರ ಪರಿಹಾರವನ್ನು ಈವರೆಗೂ ಯಾಕೆ ಕೊಟ್ಟಿಲ್ಲ ಎಂಬುವುದನ್ನು ತಿಳಿಸಬೇಕು. ದೇಶದಲ್ಲಿ ಎನ್‌ಡಿಎಗೆ ಬಹುಮತ ಬರುವುದಿಲ್ಲ. ಐಎನ್‌ಡಿಐಎ ಒಕ್ಕೂಟಕ್ಕೆ ಬಹುಮತ ಸಿಗುವ ನಿರೀಕ್ಷೆ ಇದೆ. ರಾಜ್ಯದಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನ ಸಿಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನು ಓದಿ: ಕೇಜ್ರಿವಾಲ್ ಭೇಟಿಗೆ ಕುಟುಂಬಸ್ಥರಿಗೆ ಅವಕಾಶ ನೀಡುತ್ತಿಲ್ಲ: ಸಂಜಯ್ ಸಿಂಗ್ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...