Homeಮುಖಪುಟದೇಶ ಮತ್ತು ಸಂವಿಧಾನ ಪ್ರೀತಿಸುವ ಪ್ರತಿಯೊಬ್ಬರು ಜಿಗ್ನೇಶ್ ಮೇವಾನಿ ಜೊತೆಗಿದ್ದಾರೆ: ಸಿದ್ದರಾಮಯ್ಯ

ದೇಶ ಮತ್ತು ಸಂವಿಧಾನ ಪ್ರೀತಿಸುವ ಪ್ರತಿಯೊಬ್ಬರು ಜಿಗ್ನೇಶ್ ಮೇವಾನಿ ಜೊತೆಗಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ಯುವ ದಲಿತ ಹೋರಾಟಗಾರ ಮತ್ತು ಗುಜರಾತ್‌ನ ಶಾಸಕ ಜಿಗ್ನೇಶ್ ಮೇವಾನಿಯವರ ಬಂಧನವು ಮೋದಿ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿಯಾಗಿದೆ ಎಂದು ಕರ್ನಾಟಕದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಅಭಿಪ್ರಾಯಪಟ್ಟಿದ್ದಾರೆ.

“ಸುಳ್ಳು ಆರೋಪದ ಮೇಲೆ ಗುಜರಾತ್ ಶಾಸಕ ಮತ್ತು ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿಯವರ ಬಂಧನದ ಮೂಲಕ ಬಿಜೆಪಿ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳು ಹಿಚುಕಲು ಹೊರಟಿರುವುದು ಅತ್ಯಂತ ಖಂಡನೀಯ. ರಾಜಕೀಯ ವಿರೋಧಿಗಳನ್ನು ಸೈದ್ಧಾಂತಿಕವಾಗಿ ಎದುರಿಸಲಾಗದೆ ಈ ರೀತಿ ಬಾಯಿಮುಚ್ಚಿಸುವುದು ಸರ್ವಾಧಿಕಾರಿ ಧೋರಣೆ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಯಾವುದೇ ಹೇಳಿಕೆಗಳಿಂದ ಯಾರಿಗಾದರೂ ಮಾನ ನಷ್ಟವಾಗಿದ್ದರೆ ಸಂಬಂಧಿತರಿಗೆ ನ್ಯಾಯಾಲಯದಲ್ಲಿ ನ್ಯಾಯ ಕೇಳಲು ಅವಕಾಶ ಇದೆ. ಇದರ ಬದಲಿಗೆ ಪೊಲೀಸರನ್ನು ದುರುಪಯೋಗಪಡಿಸಿಕೊಂಡು ತಮ್ಮ ರಾಜಕೀಯ ವಿರೋಧಿಗಳನ್ನು ಹಣಿಯಲು ಹೊರಟಿರುವುದು ಫ್ಯಾಸಿಸ್ಟ್ ಬುದ್ದಿ. ಭಾರತದಲ್ಲಿ ಇದು ನಡೆಯದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ದೇಶವನ್ನು ಪ್ರೀತಿಸುವ, ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬರೂ ಜಿಗ್ನೇಶ್
ಜೊತೆ ಇದ್ದಾರೆ. ಒಬ್ಬ ಜಿಗ್ನೇಶ್ ರನ್ನು ಜೈಲಿಗೆ ಕಳಿಸಿದ್ದೇವೆ ಎಂದು ಬೀಗುವುದು ಬೇಡ, ಈ ಬೆಳವಣಿಗೆಯಿಂದಾಗಿ ದೇಶದ ತುಂಬ ನೂರಾರು ಜಿಗ್ನೇಶರು ಹುಟ್ಟಿಕೊಂಡು ಹೋರಾಟವನ್ನು ಮುಂದುವರಿಸಲಿದ್ದಾರೆ ಎನ್ನುವುದು ನೆನಪಲ್ಲಿರಲಿ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಮತ್ತು ಗೋಡ್ಸೆ ಬಗ್ಗೆ ಟ್ವೀಟ್‌ ಮಾಡಿದ್ದಕ್ಕಾಗಿ ಗುಜರಾತ್‌ ಶಾಸಕ, ಹೋರಾಟಗಾರ ಜಿಗ್ನೇಶ್‌ ಮೇವಾನಿಯ ಬಂಧನ

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಕಳೆದ ಬುಧವಾರ ತಡರಾತ್ರಿ ಗುಜರಾತ್‌ನ ಪಾಲನ್‌ಪುರ ಸರ್ಕ್ಯೂಟ್ ಹೌಸ್‌ನಿಂದ ಬಂಧಿಸಿದ್ದರು. ಪ್ರಧಾನಿ ಮೋದಿ ಬಗ್ಗೆ ಟ್ವೀಟ್ ಮಾಡಿದ್ದಕ್ಕೆ ಅಸ್ಸಾಂನ ಬಿಜೆಪಿ ನಾಯಕರೊಬ್ಬರು ಪೊಲೀಸರಿಗೆ ನೀಡಿದ ದೂರಿನ ಮೇಲೆ ಅವರನ್ನು ಬಂಧಿಸಲಾಗಿದೆ.

ಗುಜರಾತ್‌ನ ವಡ್ಗಾಮ್‌ ಕ್ಷೇತ್ರದ ಸ್ವತಂತ್ರ ಶಾಸಕರಾಗಿರುವ ಜಿಗ್ನೇಶ್‌ ಮೇವಾನಿ ದಲಿತ ಹಕ್ಕುಗಳ ಹೋರಾಟಗಾರ ಮತ್ತು ರಾಷ್ಟ್ರೀಯ ದಲಿತ ಅಧಿಕಾರ ಮಂಚ್‌ನ ಸಂಚಾಲಕರೂ ಆಗಿದ್ದಾರೆ. ಅವರು ಕಳೆದ ವರ್ಷ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

3 COMMENTS

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...