Homeಕರ್ನಾಟಕಮೋದಿ, ಅದಾನಿಯೆದರು ತೆಲೆಯೆತ್ತಲು ಬಿಎಸ್‌ವೈಗೆ ಧೈರ್ಯವಿಲ್ಲ: ವಿದ್ಯುತ್ ದರ ಏರಿಕೆಗೆ ಸಿದ್ದರಾಮಯ್ಯ ಖಂಡನೆ

ಮೋದಿ, ಅದಾನಿಯೆದರು ತೆಲೆಯೆತ್ತಲು ಬಿಎಸ್‌ವೈಗೆ ಧೈರ್ಯವಿಲ್ಲ: ವಿದ್ಯುತ್ ದರ ಏರಿಕೆಗೆ ಸಿದ್ದರಾಮಯ್ಯ ಖಂಡನೆ

- Advertisement -
- Advertisement -

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ವಿದ್ಯುಚ್ಛಕ್ತಿ ಪೂರೈಕೆ ದರಗಳ ಪರಿಷ್ಕರಣೆಗೆ ಅನುಮೋದನೆ ನೀಡಿದ್ದು, ಪ್ರತಿ ಯೂನಿಟ್‌ಗೆ 30 ಪೈಸೆಗಳ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಕೋವಿಡ್‌ ಲಾಕ್‌ಡೌನ್‌ನಿಂದ ಜನ ಸಂಕಷ್ಟದಲ್ಲಿರುವ ಸಮಯದಲ್ಲಿ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಕರ್ನಾಟಕವು ಹೆಚ್ಚುವರಿ ವಿದ್ಯುತ್ ಶಕ್ತಿಯನ್ನು ಹೊಂದಿದೆ. ಆದರೂ ಸಹ ಸೆಂಟ್ರಲ್ ಗ್ರಿಡ್, ಅದಾನಿ ಮತ್ತು ಇತರರಿಂದ ಹೆಚ್ಚಿನ ವೆಚ್ಚದಲ್ಲಿ ವಿದ್ಯುತ್ ಖರೀದಿಸುವುದನ್ನು ಬಿಜೆಪಿ ಸರ್ಕಾರ ಮುಂದುವರೆಸಿದೆ. ಆದರೆ ಹೆಚ್ಚುವರಿ ಬೆಲೆಯನ್ನು ರಾಜ್ಯದ ಜನರು ಭರಿಸಬೇಕಾಗಿದೆ. ಮೋದಿ, ಅದಾನಿಯೆದರು ತೆಲೆಯೆತ್ತಲು ಬಿಎಸ್‌ವೈಗೆ ಧೈರ್ಯವಿಲ್ಲದಿರುವುದು ದುರದೃಷ್ಟಕರ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಗಳು ವಿದ್ಯುತ್ ದರ ಏರಿಕೆ ನಿರ್ಧಾರ ಮಾಡಿರುವುದು ಪ್ರತಿಯೊಬ್ಬರ ಪಾಲಿಗೂ ದುರಂತ. ಸಾಮಾನ್ಯ ಜನರು, ಕೈಗಾರಿಕೋದ್ಯಮಿಗಳು ಸೇರಿ ಪ್ರತಿಯೊಬ್ಬರೂ ಸಹ ಕೋವಿಡ್ ನಿಂದ ಬಸವಳಿದಿದ್ದಾರೆ. ಇಂತಹ ಸಂಧರ್ಭದಲ್ಲಿ ವಿದ್ಯುತ್ ದರ ಏರಿಕೆ ಮಾಡಿರುವುದು ಸರಿಯಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ; ಜೂನ್ 14 ರಿಂದ ಹಲವು ಹಂತಗಳಲ್ಲಿ ಅನ್‌ಲಾಕ್‌ ಪ್ರಕ್ರಿಯೆ ಆರಂಭ: ಆರ್ ಅಶೋಕ್ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...