Homeಕರ್ನಾಟಕಕೇಂದ್ರ ಸರ್ಕಾರ ಕನ್ನಡಿಗರ ಆತ್ಮಾಭಿಮಾನವನ್ನು ಕೆಣಕುತ್ತಿದೆ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಕನ್ನಡಿಗರ ಆತ್ಮಾಭಿಮಾನವನ್ನು ಕೆಣಕುತ್ತಿದೆ: ಸಿದ್ದರಾಮಯ್ಯ

- Advertisement -
- Advertisement -

ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ಟ್ವಿಟ್ಟರ್ ಮತ್ತು ಫೇಸ್ ಬುಕ್ ನಲ್ಲಿ ಅವರು ಬಿಜೆಪಿ ಮತ್ತು ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಅವರು ಮಾತುಗಳು ಈ ಕೆಳಗಿನಂತಿವೆ..

ಕನ್ನಡ ನಾಡು-ನುಡಿ ಬಗೆಗಿನ ಮಲತಾಯಿ ಧೋರಣೆಯಿಂದ ಕೇಂದ್ರ ಸರ್ಕಾರ ಕನ್ನಡಿಗರ ಆತ್ಮಾಭಿಮಾನವನ್ನು ಕೆಣಕುತ್ತಿದೆ. ಹಿಂದಿ ಹೇರಿಕೆ, ನಾಡ ಧ್ವಜಕ್ಕೆ ಅಡ್ಡಗಾಲು, ನೆರೆಪರಿಹಾರದಲ್ಲಿ‌ ನಿರ್ಲಕ್ಷ್ಯ…

ಕರ್ನಾಟಕದ ಕೂಗಿಗೆ ಬೆಲೆಯೇ ಇಲ್ಲದಂತಾಗಿದೆ. ಕನ್ನಡಿಗರ ಔದಾರ್ಯ ಮತ್ತು ಹೃದಯವಂತಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ.
ರಾಜ್ಯದಿಂದ ಇಪ್ಪತ್ತೈದು ಜನ ಸಂಸದರು ಆಯ್ಕೆಯಾಗಿದ್ದಾರೆ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯದೇ ಸರ್ಕಾರವಿದೆ. ಹೀಗಿದ್ದರೂ ಐಬಿಪಿಎಸ್ ಪರೀಕ್ಷೆಯಲ್ಲಿ ರಾಜ್ಯದ ಪರೀಕ್ಷಾರ್ಥಿಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗದಿರುವುದು ಕನ್ನಡಿಗರಿಗೆ ಬಗೆದ ದ್ರೋಹ.
ಕನ್ನಡಿಗರು ಇದನ್ನು ಸಹಿಸರು. #IBPSmosa

ಕೇಂದ್ರ ಸರ್ಕಾರ ಮತ್ತೆ ಕರ್ನಾಟಕದ ಜನರಿಗೆ ಮೋಸ ಮಾಡಿದೆ. ನಿರ್ಮಲಾ ಸೀತಾರಾಮನ್ ಮತ್ತು ತೇಜಸ್ವಿ ಸೂರ್ಯ ಕೊಟ್ಟಿದ್ದ  ಭರವಸೆಗೆ ಯಾವ ಅರ್ಥವೂ ಇಲ್ಲವಾಗಿದೆ.

ಹಿಂದಿ ಅಲ್ಲದ ಜನರಿಗೆ ಬ್ಯಾಂಕ್ ಉದ್ಯೋಗ ಸಿಗದಂತೆ ತಡೆಯುವ ಪಿತೂರಿ ಇದು. ಭಾಷಾ ವೈವಿಧ್ಯತೆಯ ಶಕ್ತಿಯ ಬಗ್ಗೆ ನಾವು ಬಿಜೆಪಿಗೆ ಪಾಠ ಕಲಿಸಬೇಕಾಗಿದೆ. ಬಿಜೆಪಿಯ ಕರ್ನಾಟಕದ ಸಂಸದರು ಏನು ಮಾಡುತ್ತಿದ್ದಾರೆ? ಹಿಂದಿಯ ಶ್ರೇಷ್ಠತೆಯ ಕಲ್ಪನೆಗೆ ಅವರು ನೀರೆರೆಯುತ್ತಿದ್ದಾರೆಯೇ? ನಾಚಿಕೆಗೇಡು!! ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...

ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ; ವೀಡಿಯೊ ವೈರಲ್ ಬಳಿಕ ಆರೋಪಿ ಬಂಧನ

ಏಳು ತಿಂಗಳ ಹಿಂದಿನ ಘಟನೆಯ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ 20 ವರ್ಷದ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮತ್ತು ಅವಮಾನ ಮಾಡಿದ ಆರೋಪದ...

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...