Homeಮುಖಪುಟಈಗಲಾದರೂ ಕುಸಿಯುತ್ತಿರುವ ಆರ್ಥಿಕ ಸ್ಥಿತಿಯ ಬಗ್ಗೆ ಮಾತನಾಡುವಿರಾ? ಮೋದಿಗೆ ಸಿದ್ದು ಪ್ರಶ್ನೆ..

ಈಗಲಾದರೂ ಕುಸಿಯುತ್ತಿರುವ ಆರ್ಥಿಕ ಸ್ಥಿತಿಯ ಬಗ್ಗೆ ಮಾತನಾಡುವಿರಾ? ಮೋದಿಗೆ ಸಿದ್ದು ಪ್ರಶ್ನೆ..

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ‍್ಥಾನಮಾನ ರದ್ದಾಯಿತಲ್ಲಾ, ಈಗಲಾದರೂ ದೇಶದ ಕುಸಿಯುತ್ತಿರುವ ಆರ್ಥಿಕ ಸ್ಥಿತಿಯ ಬಗ್ಗೆ, ಕರ್ನಾಟಕದಲ್ಲಿ ಅತೀವೃಷ್ಟಿ ಮತ್ತು ಅನಾವೃಷ್ಟಿಯಿಂದ ನರಳುತ್ತಿರುವ ಜನರ ಬಗ್ಗೆ ಸ್ವಲ್ಪ ಗಮನಹರಿಸುತ್ತೀರಾ, ನರೇಂದ್ರ ಮೋದಿಯವರೆ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು “ಪ್ರಣಾಳಿಕೆಯಲ್ಲಿನ ಆಶ್ವಾಸನೆಯಂತೆ ಕಾಶ್ಮೀರಕ್ಕೆ‌ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಪಡಿಸಿದ್ದೀರಿ ಎನ್ನುತ್ತೀರಲ್ಲಾ‌ ನರೇಂದ್ರ ಮೋದಿಯವರೆ, ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು, ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿಟ್ಟು, ಸೈನಿಕರ ಕಾವಲು ಹಾಕಿ ಇದನ್ನು ಮಾಡ್ತೀರಿ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೀರಾ?” ಎಂದು ವ್ಯಂಗ್ಯವಾಡಿದ್ದಾರೆ.

ಮುಂದುವರೆದು “ಕೇಂದ್ರದಲ್ಲಿ ನಿಮ್ಮ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರವೇ ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಭದ್ರತಾ ಸಿಬ್ಬಂದಿ ಮತ್ತು ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗಿದ್ದಾರೆ ಎನ್ನುತ್ತಿವೆ ದಾಖಲೆಗಳು. ಇದಕ್ಕೆ ಕಾರಣ ಸಂವಿಧಾನದ 370ನೇ ವಿಧಿಯೇ? ಇಲ್ಲವೇ ಪರಿಸ‍್ಥಿತಿಯನ್ನು ನಿಯಂತ್ರಣ ಮಾಡಲಿಕ್ಕಾಗದ ನಿಮ್ಮ ಅಸಾಮರ್ಥ್ಯವೇ?” ಎಂದು ಪ್ರಶ್ನಿಸಿದ್ದಾರೆ.

“ಪಾಕಿಸ್ತಾನದ ವಿರುದ್ಧ ಯುದ್ಧ ಗೆದ್ದಾಗ, ಸ್ವರ್ಣಮಂದಿರದಲ್ಲಿದ್ದ ಉಗ್ರಗಾಮಿಗಳನ್ನು ಖಾಲಿ ಮಾಡಿಸಿದಾಗ.. ಶ್ರೀಮತಿ ಇಂದಿರಾಗಾಂಧಿಯವರು ರಾಜಕೀಯವಾಗಿ ಬಳಸಿಕೊಳ್ಳಲಿಲ್ಲ, ಅದು ತಮ್ಮ ಕರ್ತವ್ಯ ಎಂದು ತಿಳಿದಿದ್ದರು. ನರೇಂದ್ರ ಮೋದಿಯವರೆ, ನೀವ್ಯಾಕೆ ಪ್ರತಿ ಕೆಲಸವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ತಿದ್ದೀರಿ? ಎಂದು ನೇರ ಪ್ರಶ್ನೆ ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...