Homeಕರ್ನಾಟಕಕರ್ನಾಟಕದಲ್ಲಿಯೂ ಉದ್ಯೋಗಗಳು ನಾಶವಾಗುತ್ತಿವೆ, ಯಡಿಯೂರಪ್ಪ ಏನು ಮಾಡುತ್ತಿದ್ದಾರೆ: ಸಿದ್ದು ಪ್ರಶ್ನೆ

ಕರ್ನಾಟಕದಲ್ಲಿಯೂ ಉದ್ಯೋಗಗಳು ನಾಶವಾಗುತ್ತಿವೆ, ಯಡಿಯೂರಪ್ಪ ಏನು ಮಾಡುತ್ತಿದ್ದಾರೆ: ಸಿದ್ದು ಪ್ರಶ್ನೆ

- Advertisement -
- Advertisement -

ಕರ್ನಾಟಕದಲ್ಲಿ ಆಟೋಮೊಬೈಲ್ ಕ್ಷೇತ್ರವು ಬಹುಮುಖ್ಯ ಉದ್ಯಮವಾಗಿದೆ. 60,000 ಕ್ಕಿಂತ ಹೆಚ್ಚು ನೇರ ಮತ್ತು ಒಂದು ಲಕ್ಷಕ್ಕೂ ಹೆಚ್ಚು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಿರುವ ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಇಂತ ಬಹುದೊಡ್ಡ ಉದ್ಯಮವು ದಿನೇ ದಿನೇ ಸ್ಪಷ್ಟವಾಗಿ ಕುಸಿಯುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಕೇಂದ್ರ ಸರ್ಕಾರದ ಇಚ್ಛಾಶಕ್ತಿಯ ಕೊರತೆ ಮತ್ತು ರಾಜ್ಯ ಸರ್ಕಾರದ ಕ್ಯಾಬಿನೆಟ್ ಕೊರತೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಸಮಸ್ಯೆಯನ್ನು ಪರಿಹರಿಸಲು ಮತ್ತು ಉದ್ಯೋಗ ಕಡಿತವನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ, ಯಡಿಯೂರಪ್ಪನವರು ಯಾವ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ? ಎಂದು ಅವರು ಪ್ರಶ್ನಿಸಿದ್ದಾರೆ.

ಅಧಿಕಾರ ಶಕ್ತಿಯನ್ನು ನಿಯಂತ್ರಿಸುವುದೇ ಬಿಜೆಪಿಯ ಗುರಿಯಾಗಿದೆ. ಅವರು ಮನೆಯಲ್ಲಿ ಕುಳಿತು ಇತರರಿಗೆ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪ್ರಜಾಪ್ರಭುತ್ವ ಮತ್ತು ಮುಗ್ಧ ಜನರನ್ನು ಅಪಹಾಸ್ಯ ಮಾಡುವುದೇ ಬಿಜೆಪಿಯ ಕೆಲಸವಾಗಿದೆ, ಇವರು ಝೀರೊ ಕ್ಯಾಬಿನೆಟ್ ಸಿಎಂ ಎಂದು ಸಿದ್ದರಾಮಯ್ಯ ಟ್ವಿಟ್ಟರ್ ಮತ್ತು ಫೇಸ್ ಬುಕ್ ನಲ್ಲಿ ಟೀಕಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್...