Homeಮುಖಪುಟಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

ಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

- Advertisement -
- Advertisement -

ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರದ 8 ವರ್ಷದ ಆಳ್ವಿಕೆಯಲ್ಲಿ ದೇಶದ ಅಭಿವೃದ್ಧಿ 20 ವರ್ಷದಷ್ಟು ಹಿಂದಕ್ಕೆ ಕುಸಿದಿದೆ. ದೇಶ ವಿಶ್ವಗುರುವಾಗುವ ಬದಲು ಪಾತಾಳದತ್ತ ಕುಸಿಯುತ್ತಿದೆ. ಇದನ್ನು ನಾನು ಹೇಳುತ್ತಿರುವುದಲ್ಲ ಬದಲಿಗೆ ಸರ್ಕಾರದ ದಾಖಲೆಗಳೇ ಹೇಳುತ್ತಿವೆ ಎಂದು ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶ ಹಿಂದೆಂದೂ ಇಲ್ಲದಷ್ಟು ಸಾಲದ ಸುಳಿಗೆ ಸಿಲುಕಿದೆ. ರೂಪಾಯಿಯ ಬೆಲೆ ಪಾತಾಳಕ್ಕೆ ಕುಸಿಯುತ್ತಿದೆ. ಬೆಲೆ ಏರಿಕೆಯು ಹಿಂದೆಂದೂ ಇಲ್ಲದ ಮಟ್ಟಕ್ಕೆ ಮುಟ್ಟಿದೆ. ಹಣದುಬ್ಬರ ಕಳೆದ 17 ವರ್ಷಗಳಲ್ಲಿ ತೀವ್ರಗತಿಗೆ ಮುಟ್ಟಿದೆ. ನಿರುದ್ಯೋಗ ತಾರಕಕ್ಕೇರಿದೆ. ರಾಜ್ಯಗಳ ಆರ್ಥಿಕತೆ ಕುಸಿದು ಹೋಗುತ್ತಿದೆ. ಒಕ್ಕೂಟ ವ್ಯವಸ್ಥೆ ಶಿಥಿಲವಾಗುತ್ತಿದೆ. ಇದರ ಜೊತೆಯಲ್ಲಿ ದೇಶದ ಪ್ರಜಾತಾಂತ್ರಿಕೆಯೂ ಭಯಭೀತವಾಗಿದೆ” ಎಂದಿದ್ದಾರೆ.

ಅಮೇರಿಕಾದಂತಹ ದೇಶಗಳಿಗೆ ಆರ್ಥಿಕತೆಯನ್ನು ನಿಭಾಯಿಸುವುದು ಹೇಗೆ ಎಂದು ಹೇಳಿಕೊಟ್ಟು ಮಾದರಿಯಾಗಿದ್ದ ಡಾ. ಮನಮೋಹನ್‌ ಸಿಂಗರವರು ರೂಪಿಸಿ ತಲೆ ಎತ್ತಿ ನಿಲ್ಲವಂತೆ ಮಾಡಿದ್ದ ಭಾರತದ ಆರ್ಥಿಕತೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ದುರಾಡಳಿತವು ನೆಲ ಕಚ್ಚುವಂತೆ ಮಾಡಿದೆ. ಇದೇ ಅವರ ಎಂಟು ವರ್ಷಗಳ ಸಾಧನೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಡಿ ಮಾನಿಟೈಸೇಷನ್- ಜಿಎಸ್‍ಟಿ ವ್ಯವಸ್ಥೆ, ಕೊರೋನ ಸಾಂಕ್ರಾಮಿಕದ ಎಡಬಿಡಂಗಿ ನಿರ್ವಹಣೆಗಳು ದೇಶದ ಬೆನ್ನುಮೂಳೆಯನ್ನು ಟೊಳ್ಳು ಮಾಡಿವೆ. ದೇಶದ ಜನರು ಕಷ್ಟಪಟ್ಟು ಕಟ್ಟಿದ್ದ ಲಾಭದಾಯಕ ಸಂಸ್ಥೆ/ಕಂಪೆನಿ/ಕಾರ್ಖಾನೆಗಳನ್ನು ಖಾಸಗಿಯವರಿಗೆ ಬಿಡಿಗಾಸಿಗೆ ಮಾರಾಟ ಮಾಡಲಾಗುತ್ತಿದೆ. ರೈತ, ಕಾರ್ಮಿಕ, ಮಹಿಳೆ, ಯುವಜನರ ವಿರೋಧಿಯಾದ ಕಾನೂನುಗಳನ್ನು ಜಾರಿಗೆ ತಂದು ಮೂಲಕ ಜನರನ್ನು ಶತ್ರುಗಳಂತೆ ಭಾವಿಸಿ ದಮನಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ದೇಶದ ಸಾಲವನ್ನು ಯಾವ ಮಟ್ಟಕ್ಕೆ ಏರಿಸಲಾಗಿದೆಯೆಂದರೆ ಸರ್ಕಾರದ ದಾಖಲೆಗಳ ಪ್ರಕಾರ 2014 ರ ಮಾರ್ಚ್ ವೇಳೆಗೆ ಕೇಂದ್ರ ಸರ್ಕಾರ ಮಾಡಿರುವ ಸಾಲ 53.11 ಲಕ್ಷ ಕೋಟಿ ರೂಗಳಷ್ಟಿತ್ತು. ಇದು ದೇಶವು ಸ್ವಾತಂತ್ರ್ಯ ಗಳಿಸಿಕೊಂಡಾಗಿನಿಂದ ಮಾಡಿದ್ದ ಸಾಲ. ಈ ಸಾಲವು 2019-20 ರ ವೇಳೆಗೆ 106.45 ಲಕ್ಷ ಕೋಟಿಗೆ ಏರಿಕೆಯಾಯಿತು. 2022 ರ ಮಾರ್ಚ್-31 ರ ವೇಳೆಗೆ 139.57 ಲಕ್ಷ ಕೋಟಿಗಳಿಗೆ ತಲುಪಿದೆ. 2023 ರ ಮಾರ್ಚ್ ಅಂತ್ಯದ ವೇಳೆಗೆ 155 ಲಕ್ಷ ಕೋಟಿಗೆ ತಲುಪುವ ನಿರೀಕ್ಷೆಯಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

ಕೇಂದ್ರ ಸರ್ಕಾರ ಕಾರ್ಪೊರೇಟ್ ಕಂಪೆನಿಗಳ ಪರವಾದ ನಿಲುವು ತಾಳಿರುವುದರಿಂದ, ಜನಪರ ಆರ್ಥಿಕ ನೀತಿ ಇಲ್ಲದಿರುವುದರಿಂದ ದೇಶವನ್ನು ಸಾಲದ ಸುನಾಮಿಗೆ ಸಿಲುಕಿಸಿದ್ದಾರೆ. ರಾಜ್ಯಕ್ಕೆ ನ್ಯಾಯಯುತವಾಗಿ ಕೊಡಬೇಕಾದಷ್ಟು ಅನುದಾನಗಳನ್ನು, ತೆರಿಗೆ ಹಂಚಿಕೆಯನ್ನು ಮಾಡದಿರುವುದರಿಂದ ನಮ್ಮ ರಾಜ್ಯವು ಸಾಲದ ಸುಳಿಗೆ ಸಿಲುಕಿಕೊಂಡಿದೆ. 15 ನೇ ಹಣಕಾಸು ಆಯೋಗವು ನಮ್ಮ ರಾಜ್ಯಕ್ಕೆ ಹೆಚ್ಚುವರಿಯಾಗಿ 5495 ಕೋಟಿ ರೂ ಗಳನ್ನು ಶಿಫಾರಸ್ಸು ಮಾಡಿದ್ದರೂ ಅದನ್ನು ಕೊಡುವುದಿಲ್ಲವೆಂದು ಹೇಳಿ ರಾಜ್ಯದ ಜನರ ಬೆನ್ನಿಗೆ ಇರಿದ ನಿರ್ಮಲಾ ಸೀತಾರಾಮನ್ ಅವರನ್ನು ಮತ್ತೆ ರಾಜ್ಯದಿಂದ ರಾಜ್ಯಸಭೆಗೆ ಆರಿಸಲು ಬಿಜೆಪಿ ಟಿಕೆಟ್ ನೀಡಿ ನಮ್ಮ ಜನರಿಗೆ ಅವಮಾನ ಮಾಡಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯಸಭೆ ಚುನಾವಣೆ ಕಾಂಗ್ರೆಸ್‌ ಎರಡನೇ ಅಭ್ಯರ್ಥಿ ನಾಮಪತ್ರವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಗೆಲ್ಲುವ ವಿಶ್ವಾಸದಿಂದಲೇ ನಾವು ನಾಮಪತ್ರ ಸಲ್ಲಿಸಿದ್ದೇವೆ. ನಮಗೂ ಬೇರೆ ಬೇರೆ ಮತಗಳು ಬರಲಿವೆ. ಆದರೆ, ಅದು ಹೇಗೆ ಎಂದು ಈಗ ಹೇಳುವುದಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿಯವರ ವೈಫಲ್ಯವನ್ನು ಸಿದ್ದರಾಮಯ್ಯ ಸರಿಯಾಗಿ ಗುರುತಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...