Homeಕರ್ನಾಟಕಜನತೆಯ ಪ್ರಾಣದ ಜೊತೆ ಚೆಲ್ಲಾಟವಾಡಬೇಡಿ: ಸರ್ಕಾರಗಳಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

ಜನತೆಯ ಪ್ರಾಣದ ಜೊತೆ ಚೆಲ್ಲಾಟವಾಡಬೇಡಿ: ಸರ್ಕಾರಗಳಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

- Advertisement -
- Advertisement -

ಅತಿವೃಷ್ಟಿಯಿಂದ ಮನೆ-ತೋಟ-ಗದ್ದೆಯನ್ನು ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹಾವೇರಿ,ಗದಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಐವರು ರೈತರ ಕುಟುಂಬಕ್ಕೆ ನನ್ನ ಸಂತಾಪಗಳು. ಇದೇ ರೀತಿ ನೂರಾರು ರೈತರು ಅಸಹಾಯಕರಾಗಿ ಆತ್ಮಹತ್ಯೆಯ ದಾರಿಯಲ್ಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಇದ್ದೂ ಸತ್ತಂತಿವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಗಳನ್ನು ಮಾಡಿದ್ದಾರೆ.

ಅತಿವೃಷ್ಟಿ ಪೀಡಿತ ರೈತರನ್ನು ಬ್ಯಾಂಕುಗಳಲ್ಲಿನ ಸಾಲ ಬಾಕಿಗಾಗಿ ನೋಟೀಸ್ ಜಾರಿ ಮಾಡಿ ಕಿರುಕುಳು ನೀಡುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯ ಸರ್ಕಾರಕ್ಕೇನಾದರೂ ಒಂದಿಷ್ಟು ಮಾನವೀಯತೆ ಎನ್ನುವುದಾದರೂ ಇದ್ದರೆ ಇಂತಹ ಕ್ರೌರ್ಯವನ್ನು ತಕ್ಷಣ ನಿಲ್ಲಿಸಬೇಕು. ರಾಜ್ಯಕ್ಕೆ ಬಂದೆರಗಿದ ಅತಿವೃಷ್ಟಿಯಿಂದ ರೂ.38 ಸಾವಿರ ಕೋಟಿ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ನಯಾಪೈಸೆ ನೆರವು ಬಂದಿಲ್ಲ. ರಾಜ್ಯದ ಹೇಡಿ ಸರ್ಕಾರಕ್ಕೆ ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಇಲ್ಲ.

2009ರಲ್ಲಿ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದಾಗ ಸಂಭವಿಸಿದ ಅತಿವೃಷ್ಟಿಯ ಸಂದರ್ಭದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಧಾವಿಸಿ ಬಂದು ಸಮೀಕ್ಷೆ ನಡೆಸಿ ತಕ್ಷಣ ರೂ.1500 ಕೋಟಿ ಪರಿಹಾರ ಘೋಷಿಸಿದ್ದರು. ಈಗಿನ ಪ್ರಧಾನಿ ಎಲ್ಲಿದ್ದಾರೆ? ದಿನಕ್ಕೊಂದು ದೇಶ ಸುತ್ತುವ, ಘಳಿಗೆಗೊಂದು ವೇಷ ಬದಲಿಸುವ ಈಗಿನ ಪ್ರಧಾನಿಗಳಿಗೆ ಒಂದು ಘಳಿಗೆ ಬಂದು ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಇಲ್ಲದಿರುವುದು ದುರಂತ.

ನಮ್ಮ ಪ್ರತಿಭಾವಂತ ವಿಜ್ಞಾನಿಗಳು ಹಗಲಿರುಳು ಶ್ರಮಿಸಿ ನಡೆಸಿದ ಚಂದ್ರಯಾನ-2 ಪ್ರಯೋಗ, ನರೇಂದ್ರಮೋದಿ ಹಾಜರು ಹಾಕಿದರೂ ವಿಫಲವಾಯಿತು. ಪ್ರಧಾನಿಗಳು ಅಷ್ಟೇ ಸಮಯವನ್ನು ಅತಿವೃಷ್ಟಿ ಪೀಡಿತ ಪ್ರದೇಶದ ಭೇಟಿಗೂ ನೀಡಿದ್ದರೆ ಪ್ರಾಯಶ್ಚಿತ ಮಾಡಿಕೊಂಡಂತಾಗುತ್ತಿತ್ತು. ಕಾಲ್ಗುಣದಂತಹ ಮೌಢ್ಯದಲ್ಲಿ ನನಗೆ ನಂಬಿಕೆ ಇಲ್ಲ. ಆದರೆ 2009ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗಲೇ ಅತಿವೃಷ್ಟಿ ಬಂದೆರಗಿತು. ನಮ್ಮ ಕಾಲದಲ್ಲಿ ನಡೆದ ರೈತರು ಆತ್ಮಹತ್ಯೆಯ ದಾರಿ ಹಿಡಿದಾಗ ತಕ್ಷಣ ಸ್ಪಂದಿಸಿದ ನಮ್ಮ ಸರ್ಕಾರ ಕೃಷಿಭಾಗ್ಯ, ಅನ್ನಭಾಗ್ಯ, ಕ್ಷೀರಧಾರೆಯಂತ ಯೋಜನೆಗಳು ಮತ್ತು ಸೂಕ್ತ ಪರಿಹಾರದ ಮೂಲಕ ನೆರವಾಗಿ ಆತ್ಮಹತ್ಯೆಯ ಸರಣಿಯನ್ನು ತಡೆದಿದ್ದೆವು. ಅಂತಹ ಇಚ್ಛಾಶಕ್ತಿಯೇ ಈ ಸರ್ಕಾರಕ್ಕೆ ಇಲ್ಲ.

ಅತಿವೃಷ್ಠಿ ಪೀಡಿತ ಪ್ರದೇಶಕ್ಕೆ ಪರಿಹಾರಕ್ಕಾಗಿ ಒತ್ತಾಯಿಸದಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಕೇಂದ್ರ ಸರ್ಕಾರ ದಿವಾಳಿಯಾಗಿ ಹೋಗಿರುವ ಸೂಚನೆ ಇದು. ಇದು ನಿಜವಲ್ಲದೆ ಇದ್ದರೆ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು. ದೇಶದ ಜನತೆಯ ಪ್ರಾಣದ ಜೊತೆ ಚೆಲ್ಲಾಟವಾಡಬೇಡಿ. ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....