Homeಕರ್ನಾಟಕನಾಟಕದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿ ಅವಹೇಳನ: ಮೈಸೂರು ರಂಗಾಯಣ ಮುತ್ತಿಗೆಗೆ ನಿರ್ಧಾರ

ನಾಟಕದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿ ಅವಹೇಳನ: ಮೈಸೂರು ರಂಗಾಯಣ ಮುತ್ತಿಗೆಗೆ ನಿರ್ಧಾರ

- Advertisement -
- Advertisement -

ಮೈಸೂರಿನ ರಂಗಾಯಣದಲ್ಲಿ ಪ್ರದರ್ಶನಗೊಂಡ ನಾಟಕವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕುರಿತು ಅವಹೇಳನಕಾರಿ ಸಂಭಾಷಣೆ ಬಳಸಿರುವುದನ್ನು ಖಂಡಿಸಿ ಜನವರಿ 10 ರಂದು ರಂಗಾಯಣ ಮುತ್ತಿಗೆ ಹೋರಾಟ ನಡೆಸಲು ಸ್ವಾಭಿಮಾನಿ ಹೋರಾಟ ಸಮಿತಿ ನಿರ್ಧರಿಸಿದೆ.

‘ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪನವರ ಪ್ರತಿ ನಡೆಯು ಕೋಮು ಸಂಘರ್ಷಕ್ಕೆ ಕಾರಣವಾಗುತ್ತಿದೆ. ಸರ್ಕಾರದ ಸಂಸ್ಥೆಯಾದ ರಂಗಾಯಣವನ್ನು ತಮ್ಮ ದುರುದ್ದೇಶಕ್ಕೆ ಬಿಜೆಪಿ ಹಾಗೂ ಆರ್‌ಸ್‌ಎಸ್ ರಹಸ್ಯ ಕಾರ್ಯಸೂಚಿಗಳ ಜಾರಿಗೆ ಬಳಸಿಕೊಳ್ಳುತ್ತಿದ್ದಾರೆ’ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಮೈಸೂರು ನಗರದ ಓವಲ್ ಮೈದಾನದಲ್ಲಿ ಜಮಾವಣೆಗೊಂಡು ಖಂಡನಾ ಸಮಾವೇಶ ನಡೆಸಲಾಗುವುದು. ಆನಂತರ ರಂಗಾಯಣಕ್ಕೆ ಮುತ್ತಿಗೆ ಹಾಕಿ ಹೋರಾಟ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವಿಧಾನಪರಿಷತ್‌ ಸದಸ್ಯ ಡಾ.ಡಿ.ತಿಮ್ಮಯ್ಯ, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು, ಪೌರಕಾರ್ಮಿಕರ ಸಂಘದ ಅಧ್ಯಕ್ಷ ನಾರಾಯಣ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

ಏನಿದು ಪ್ರಕರಣ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರರ ‘ಸಾಂಬಶಿವ ಪ್ರಹಸನ’ ನಾಟಕವನ್ನು ಕಾರ್ತಿಕ್ ಉಪಮನ್ಯು ನಿರ್ದೇಶನದಲ್ಲಿ ‘ನಾಗರತ್ನಮ್ಮ’ ರಂಗ ಕಾರ್ಯಾಗಾರದ ಶಿಬಿರಾರ್ಥಿಗಳು ಡಿಸೆಂಬರ್ 31ರ ಶನಿವಾರ ಪ್ರದರ್ಶಿಸುತ್ತಿದ್ದರು. ಈ ನಾಟಕದಲ್ಲಿ ಕೆಲವು ಅಂಶಗಳನ್ನು ತಿರುಚಿ ಸಿದ್ದರಾಮಯ್ಯನವರನ್ನು ಹೀಯಾಳಿಸಲಾಗಿದೆ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರನ್ನೂ ಗೇಲಿ ಮಾಡಲಾಗಿದೆ ಎಂದು  ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಶಾದಿ ಭಾಗ್ಯ’ಗಳನ್ನು ಕೊಟ್ಟು ಜನರನ್ನು ಅವರು ಸೋಂಬೇರಿಗಳನ್ನಾಗಿ ಮಾಡಿದರು. ಅದೇ ರೀತಿ ‘ಕಳ್ಳತನ ಭಾಗ್ಯ’ವನ್ನು ನೀಡಬೇಕಾಗಿತ್ತು ಎನ್ನುವ ಸಂಭಾಷಣೆಯನ್ನು ರಂಗದ ಮೇಲೆ ಪ್ರಸ್ತುತಪಡಿಸಲಾಗಿತ್ತು. ಕಾರ್ಯಕ್ರಮಗಳಲ್ಲಿ ನಿದ್ರೆ ಹೊಡೆಯುವುದು, ಗೊರಕೆ ಹೊಡೆದು ಅವರಿಂದ ರಾಜ್ಯವೇ ಹಾಳಾಗಿದೆ. ನಿಮಗೆ ಈ ಭಾರಿ ಬಾದಾಮಿಯೂ ಕೂಡ ಸಿಗುವುದಿಲ್ಲ ಎಂದು ಸೇವಕನ ಪಾತ್ರಧಾರಿಯಿಂದ ನಾಟಕದಲ್ಲಿ ಹೇಳಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷರಾದ ಬಿ.ಸುಬ್ರಹ್ಮಣ್ಯ“ಇದು ನೇರವಾಗಿ ಸಿದ್ದರಾಮಯ್ಯನವರಿಗೆ ಹೋಲಿಕೆ ಮಾಡಲಾಗಿದೆ. ಹಾಗೂ ಕೇಡಿ ಆಂಕಲ್ ಎಂದು ಮಂತ್ರಿಯ ಪಾತ್ರವನ್ನು ಸೃಷ್ಟಿಸಿ ಅದರಲ್ಲಿ ಕಳ್ಳತನ ಮಾಡಿ ಕೊಳ್ಳೆ ಹೊಡೆಯುತ್ತಿದ್ದಾನೆ ಎಂದು ಹೇಳಿಸಲಾಗಿದೆ. ಇದೂ ಕೂಡ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನೇ ಹೋಲುವಂತೆ ಪಾತ್ರ ಸೃಷ್ಟಿಸಲಾಗಿದೆ ಎಂದು ಕಿಡಿಕಾರಿದ್ದಾರೆ.

ಇದಕ್ಕೆ ಸ್ವತಃ ಕಂಬಾರರೇ ಆಕ್ರೋಶ ವ್ಯಕ್ತಪಡಿಸಿ “ಈ ರೀತಿ ನಾಟಕವನ್ನು ತಿರುಚಿದವರು ಮತ್ತು ನಾಟಕ ಪ್ರದರ್ಶಿಸಲು ಅವಕಾಶ ನೀಡಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು” ಎಂದು ಮೈಸೂರು ಪೊಲೀಸ್ ಕಮಿಷನರ್‌ಗೆ ಅವರು ಪತ್ರ ಬರೆದಿದ್ದಾರೆ.

“ಮೈಸೂರಿನ ರಂಗಾಯಣದಲ್ಲಿ ನನ್ನ ನಾಟಕ, ಸಾಂಬಶಿವ ಪ್ರಹಸನವನ್ನು ಅಸಹ್ಯವಾಗಿ ತಿರುಚಿ ಪ್ರದರ್ಶಿಸಿರುವ ಬಗ್ಗೆ ನನಗೆ ತುಂಬ ವಿಷಾದವಾಗಿದೆ” ಎಂದಿರುವ ಕಂಬಾರರು, “ಮೊದಲನೆಯದಾಗಿ ನನ್ನ ನಾಟಕ ಪ್ರದರ್ಶಿಸುವುದಕ್ಕೆ ನನ್ನ ಅನುಮತಿ ಕೇಳಲೇ ಬೇಕಾಗಿತ್ತು. ಆದರೆ ಇವರು ಕೇಳಿಲ್ಲ. ರಂಗಾಯಣವಾದರೂ ನನ್ನ ಅನುಮತಿ ಇಲ್ಲದ ನಾಟಕ ಪ್ರದರ್ಶನಕ್ಕೆ ಅವಕಾಶ ಕೊಟ್ಟಿರುವುದು ವಿಷಾದಕರ” ಎಂದು ಟೀಕಿಸಿದ್ದಾರೆ.

“ಎರಡನೆಯದಾಗಿ, ನನ್ನ ಯಾವುದೇ ನಾಟಕಗಳಲ್ಲಿ ವ್ಯಕ್ತಿಗಳ ನಿಂದನೆ ಇರುವುದು ಸಾಧ್ಯವಿಲ್ಲ. ಅನುಮತಿ ಇಲ್ಲದೇ ನಾಟಕವನ್ನು ಪ್ರದರ್ಶಿಸಿದ್ದಕ್ಕೆ, ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟವರಿಗೂ ಮತ್ತು ಇಲ್ಲದ ಸಾಹಿತ್ಯವನ್ನು ಸೇರಿಸಿದ್ದಕ್ಕೆ ನಿರ್ದೇಶಕರ ಮೇಲೂ ಈ ಅಹಿತಕರ ವಾತಾವರಣಕ್ಕೆ ಕಾರಣರಾದ, ಸಂಬಂಧಪಟ್ಟ ಎಲ್ಲರ ಮೇಲೂ, ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಅವರು ಕೋರಿದ್ದಾರೆ.

ಇದನ್ನೂ ಓದಿ: ನಾಟಕದಲ್ಲಿ ಇಲ್ಲದ ವಿಚಾರ ತುರುಕಿ ಸಿದ್ದರಾಮಯ್ಯನವರಿಗೆ ಅವಹೇಳನ: ಕ್ರಮ ಜರುಗಿಸಲು ಮೈಸೂರು ಕಮಿಷನರ್‌ಗೆ ಕಂಬಾರರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...