Homeಮುಖಪುಟಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಜೊತೆಗೆ 8 ಶಾಸಕರ ಪ್ರಮಾಣ ವಚನ ಇಂದು

ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಜೊತೆಗೆ 8 ಶಾಸಕರ ಪ್ರಮಾಣ ವಚನ ಇಂದು

- Advertisement -
- Advertisement -

ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಜೊತೆಗೆ 8 ಶಾಸಕರು ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆಯುವ ಪದಗ್ರಹಣ ಸಮಾವೇಶದಲ್ಲಿ ಸಚಿವರಾಗಿ ಆಯ್ಕೆಯಾಗಿರುವವರ ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದೆ. ಪಟ್ಟಿ ಇಂತಿದೆ.

  1. ಡಾ.ಜಿ ಪರಮೇಶ್ವರ
  2. ಕೆ.ಎಚ್ ಮುನಿಯಪ್ಪ
  3. ಕೆ.ಜೆ ಜಾರ್ಜ್
  4. ಎಂ.ಬಿ ಪಾಟೀಲ್
  5. ಸತೀಶ್ ಜಾರಕಿಹೊಳಿ
  6. ಪ್ರಿಯಾಂಕ್ ಖರ್ಗೆ
  7. ರಾಮಲಿಂಗಾರೆಡ್ಡಿ
  8. ಜಮೀರ್ ಅಹ್ಮದ್ ಖಾನ್

ಪಟ್ಟಿಯಲ್ಲಿ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯದ ಆಧಾರದಲ್ಲಿ ಹಿರಿಯರನ್ನು ಹೆಸರಿಸಲಾಗಿದೆ. ಕೆಲವೇ ದಿನಗಳಲ್ಲಿ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ನಡೆಯಲಿದೆ ಎನ್ನಲಾಗಿದೆ.

ಇಂದು ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ನಡೆಯಲಿದೆ. ಈ ಕುರಿತು ರಾಜ್ಯಪಾಲರು ಅಧಿಕೃತ ಆಹ್ವಾನ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: 2023ರ ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶದ ಪರಿಣಾಮಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...