Homeಕರ್ನಾಟಕ‘ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ, ಇದು ಗ್ಯಾರಂಟಿ ಸರ್ಕಾರವಲ್ಲ’: ನೂರ್ ಶ್ರೀಧರ್

‘ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ, ಇದು ಗ್ಯಾರಂಟಿ ಸರ್ಕಾರವಲ್ಲ’: ನೂರ್ ಶ್ರೀಧರ್

- Advertisement -
- Advertisement -

ಬೆಂಗಳೂರು: ಸಮಸ್ಯೆಗಳ ಪಟ್ಟಿ ಹಾಗೂ ಮನೆಹಾಳು ಯೋಜನೆಗಳ ಪಟ್ಟಿ ಬೆಳೆಯುತ್ತಲೇ ಇದೆ. ಆದರೆ ಪರಿಹಾರ ಮಾತ್ರ ಸಿಗುತ್ತಿಲ್ಲ. ಮುಖ್ಯಮಂತ್ರಿಗಳ ಬಗ್ಗೆ ನಮ್ಮ ಅಭಿಪ್ರಾಯ ಏನು ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ, ಹೊಲಸು ರಾಜಕೀಯದಲ್ಲಿ ಅವರ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ ಎಂದು ಜನಶಕ್ತಿಯ ನೂರ್ ಶ್ರೀಧರ್ ಹೇಳಿದರು.

ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕದ ಆಶ್ರಯ’ದಲ್ಲಿ ನಡೆದ ‘ಬೆಂಗಳೂರು ಚಲೋ’ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.  

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸರ್ಕಾರದ ನಿಲುವುಗಳ ಬಗ್ಗೆ ಪ್ರಶ್ನಿಸಿದ ನೂರ್ ಶ್ರೀಧರ್ ಅವರು ನೀವು ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಬಿಜೆಪಿ ಸರ್ಕಾರದ ಎಲ್ಲ ಕಾನೂನುಗಳನ್ನು ವಿರೋಧ ಪಕ್ಷವಿದ್ದಾಗ ವಿರೋಧ ಮಾಡಿದ್ದೀರಾ, ಈಗ ನೀವು ಏನು ಮಾಡುತ್ತಾ ಇದ್ದೀರಿ ಎಂದು ಪ್ರಶ್ನಿಸಿದರು. 

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಯ್ದೆ ಜಾರಿ ಆಗುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಂಯುಕ್ತ ಹೋರಾಟ ವೇದಿಕೆಯಲ್ಲಿ ಹೇಳಿದ್ದೀರಿ, ಆದರೆ, ಎಪಿಎಂಸಿ ಕಾಯ್ದೆಗೆ ಸ್ವಲ್ಪ ತಿದ್ದುಪಡಿ ಮಾಡಿದ್ದು ಬಿಟ್ಟರೆ ಎಲ್ಲ ಕಾನೂನುಗಳೂ ಹಾಗೆ ಇವೆ. ಪ್ರಜಾತಂತ್ರವನ್ನು ಬುಡಮೇಲು ಮಾಡುವ, ವಿರೋಧ ಪಕ್ಷಗಳು ಅಧಿಕಾರಕ್ಕೆ ಬರಲೇಬಾರದು ಎಂದು SIR ಕಾಯ್ದೆ ಜಾರಿ ಮಾಡುತ್ತಿದ್ದಾರೆ. ಜಾತ್ಯತೀತ ಮತದಾರರ ಹೆಸರುಗಳನ್ನ ಶೇ.15 ರಷ್ಟು ಅಳಿಸುತ್ತಿದ್ದಾರೆ, ಇಷ್ಟೆಲ್ಲಾ ಆದರೂ ಕರ್ನಾಟಕದಲ್ಲಿ ನೀವು ಏನು ಮಾಡುತ್ತಾ ಇದ್ದೀರಾ ಎಂದು ಕೇಳಿದರು.  

ಮಮತಾ ಬ್ಯಾನರ್ಜಿ ಸೇರಿದಂತೆ ಎಡ ಪಕ್ಷಗಳು ಬಿಜೆಪಿಯ ಜನವಿರೋಧಿ ನೀತಿಗಳನ್ನ ವಿರೋಧಿಸುತ್ತಿದ್ದಾರೆ. ಆದರೆ ನೀವು ಇಲ್ಲಿ ತಣ್ಣಗೆ ಮಲಗಿದ್ದೀರಾ. ದೇವನಹಳ್ಳಿ ಭೂಸ್ವಾಧೀನ ರದ್ದುಪಡಿಸಲು ನಾವು ಹೋರಾಟಗಾರರು ತಿಂಗಳುಗಟ್ಟಲೆ ಎಲ್ಲಾ ಕೆಲಸ ಬಿಟ್ಟು ಹೋರಾಟ ಮಾಡಬೇಕಾಯಿತು, ಹಾಗಾದರೆ ಉಳಿದ ಬೇಡಿಕೆ ಈಡೇರಿಸಿಕೊಳ್ಳಲು ನಾವು ಇನ್ನೆಷ್ಟು ವರ್ಷ ಹೋರಾಟ ಮಾಡಬೇಕು ಎಂದು ಪ್ರಶ್ನಿಸಿದರು. 

ಇದೇ ವೇಳೆ ರಾಮನಗರ ಜಿಲ್ಲಾಧಿಕಾರಿಗಳು ಮತ್ತು ಕೋಲಾರ ಅರಣ್ಯಾಧಿಕಾರಿಗಳು ರೈತರೊಂದಿಗೆ ಸಂಯಮದಿಂದ ವರ್ತಿಸಬೇಕು. ಇಲ್ಲದಿದ್ದರೆ ಸಂಯುಕ್ತ ಹೋರಾಟ ರೈತರ ಬೆನ್ನಿಗೆ ನಿಲ್ಲಲಿದೆ. ರಾಮನಗರ ಜಿಲ್ಲಾಧಿಕಾರಿಗಳು ಪ್ರಜಾಪ್ರಭುತ್ವದ ಜಿಲ್ಲಾಧಿಕಾರಿ, ಅವರು ಬ್ರಿಟಿಷ್ ಸರ್ಕಾರದ ಪ್ರತಿನಿಧಿಯಂತೆ ವರ್ತಿಸಬಾರದು ಹೀಗೆ ಮುಂದುವರೆದರೆ ರಾಮನಗರಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ರೈತ ಸಂಘದ ಯು. ಬಸವರಾಜಪ್ಪ ಎಚ್ಚರಿಕೆ ನೀಡಿದರು.  

ಪ್ರೊ. ಬಾಬು ಮ್ಯಾಥ್ಯೂ ಮಾತನಾಡಿ ‘ಭಾರತದ ಸಂವಿಧಾನ ನಾಶಕ್ಕೆ ಹಲವು ಅಕ್ರಮ ಮತ್ತು ಹುನ್ನಾರ ನಡೆಸಲಾಗುತ್ತಿದೆ.. ಸಂವಿಧಾನ ನಂಬಿಕೊಂಡಿರುವ ರೈತರು ಮತ್ತು ಕಾರ್ಮಿಕರ ಐಕ್ಯತೆ ಮುರಿಯುವ ಯತ್ನ ನಡೆಯುತ್ತಿದೆ. ಸಾಮಾನ್ಯ ಜನರ ಮೇಲೆ ದೊಡ್ಡ ದೌರ್ಜನ್ಯದ ಜೊತೆಗೆ, ಬಂಡವಾಳಶಾಹಿ ವ್ಯಯವಸ್ಥೆಯಲ್ಲಿ ದೊಡ್ಡ ಬದಲಾವಣೆ ನಡೆಯುತ್ತಿದೆ. ಅಂಬಾನಿ ಅದಾನಿ ಎಂಬ ಹೊಸತರಹದ ಬಂಡವಾಳ ಶಾಹಿ ಹುಟ್ಟಿಕೊಂಡಿದ್ದಾರೆ. ಅದೇ ಗುತ್ತೇದಾರಿ (ಮನೋಪಲಿ) ಬಂಡವಾಳಶಾಹಿ.

ಮನೋಪಲಿ ಬಂಡವಾಳಕ್ಕೆ ಹೆಚ್ಚಿನ ಬೆಂಬಲ ನೀಡಿದರೆ ಫಾಸೀಸಂ ಮೇಲೆ ಕಡಿವಾಣ ಹಾಕಲು ಸಾಧ್ಯವಿಲ್ಲ. ಆಗ ಅವರು ಸಂವಿಧಾನವನ್ನು ದುರ್ಬಲ ಮಾಡುತ್ತಾರೆ ಎಂದು ಎಚ್ಚರಿಗೆ ನೀಡಿದರು. 

ಈಗ ಜಾರಿಯಾಗಿರುವ ಕಾರ್ಮಿಕ ವಿರೋಧಿ ಕಾಯ್ದೆಗಳು ಸಾಕಷ್ಟು ಅಮಾನವೀಯವಾಗಿವೆ. ಇನ್ನು ಮುಂದೆ ಕಾರ್ಮಿಕರು ಲೀಗಲ್ ಸ್ಟ್ರೈಕ್ ಮಾಡುವುದಕ್ಕೆ ಸಾಧ್ಯವಿಲ್ಲ. ಹೋರಾಟ ಮಾಡಿದರೆ ಅದು ಕಾನೂನು ಬಾಹಿರ ಆಗುತ್ತದೆ. ಕಾರ್ಮಿಕರ ಯೂನಿಯನ್ ಗಳು ನಿಷೇಧ ಆಗುತ್ತವೆ

ಹಳೆ ಕಾನೂನುಗಳ ಮೇಲೆ ನಮಗೆ ಹಿಡಿತ ಇತ್ತು. ಆದರೆ ಹೊಸ ಕಾನೂನುಗಳಲ್ಲಿ ಯಾವಾಗ ಬೇಕಾದರೂ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಹುದು, ಯಾವಾಗ ಬೇಕಾದರೂ ಕಾರ್ಖಾನೆ ಮುಚ್ಚಿ ಬೇರೆ ತೆಗೆಯಬಹುದು. ಇದು ಕಾನೂನು ಬಾಹಿರ ಎಂಬುದನ್ನು ಮರೆಯಬಾರದು ಎಂದು ಹೇಳಿದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...

ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಫೆಬ್ರವರಿ 2021ರಲ್ಲಿ ಕೋಲ್ಕತ್ತಾದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆಗೆ ಕೋಲ್ಕತ್ತಾ ಮಹಾನಗರ ಪಾಲಿಕೆ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕಲ್ಕತ್ತಾ ಹೈಕೋರ್ಟ್ ಹೊಣೆಗಾರರನ್ನಾಗಿ ಮಾಡಿದೆ...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ಖುಲಾಸೆ

ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಸೇರಿದಂತೆ ಐವರನ್ನು ಖುಲಾಸೆಗೊಳಿಸಿ ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯ ಬುಧವಾರ (ನವೆಂಬರ್ 26) ತೀರ್ಪು ನೀಡಿದೆ ಎಂದು ಬಾರ್ & ಬೆಂಚ್ ವರದಿ...

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ ಕರೆ  

ಬೆಂಗಳೂರು.ನ. 26: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.  ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ "ಸಂವಿಧಾನ ದಿನಾಚರಣೆ -...

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಪಂಚಾಯತ್‌ಗಳಿಗೆ ತಲಾ 10 ಲಕ್ಷ ರೂ. : ಕೇಂದ್ರ ಸಚಿವ ಬಂಡಿ ಸಂಜಯ್ ಆಮಿಷ

ತೆಲಂಗಾಣದ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಿದರೆ, ತಮ್ಮ ಕರೀಂನಗರ ಲೋಕಸಭಾ ಕ್ಷೇತ್ರದ ಗ್ರಾಮಗಳಿಗೆ ತಲಾ 10 ಲಕ್ಷ ರೂ.ಗಳ ಹಣಕಾಸು ನೆರವು ನೀಡುವುದಾಗಿ ಕೇಂದ್ರ ಸಚಿವ ಬಂಡಿ...