Homeಕರ್ನಾಟಕಮಾನವ ಹಕ್ಕುಗಳ ಆಯೋಗಕ್ಕೆ ಭ್ರಷ್ಟಾಚಾರ ಆರೋಪ ಹೊತ್ತ ಶ್ಯಾಮ್ ಭಟ್ ನೇಮಕ!

ಮಾನವ ಹಕ್ಕುಗಳ ಆಯೋಗಕ್ಕೆ ಭ್ರಷ್ಟಾಚಾರ ಆರೋಪ ಹೊತ್ತ ಶ್ಯಾಮ್ ಭಟ್ ನೇಮಕ!

- Advertisement -
- Advertisement -

ಹಲವು ಭ್ರಷ್ಟಾಚಾರ ಆರೋಪಗಳನ್ನು ಹೊತ್ತಿರುವ ಟಿ. ಶ್ಯಾಮ್‌ ಭಟ್‌ ಅವರನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರನ್ನಾಗಿ ನೇಮಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಈ ಹಿಂದೆ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ(ಬಿಡಿಎ) ಆಯುಕ್ತರಾಗಿದ್ದ ಶ್ಯಾಮ್ ಭಟ್‌ ವಿರುದ್ದ, ನಿವೇಶನದ ಮೂಲ ಹಂಚಿಕೆದಾರರ ಒಪ್ಪಿಗೆಯನ್ನು ಪಡೆಯದೇ ಬಡಾವಣೆ ನಕ್ಷೆಯನ್ನೇ ತಿದ್ದುಪಡಿ ಮಾಡಿ ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪವಿದೆ. ಈ ಪ್ರಕರಣದ ತನಿಖೆ ಎದುರಿಸುತ್ತಿರುವ ಶ್ಯಾಮ್ ಭಟ್ ಅವರನ್ನು ರಾಜ್ಯ ಸರ್ಕಾರ ಮಾನವ ಹಕ್ಕುಗಳ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿದೆ.

2023ರ ನವೆಂಬರ್ 25ರಂದು ಶ್ಯಾಮ್ ಭಟ್‌ ಅವರನ್ನು ಮಾನವ ಹಕ್ಕುಗಳ ಸದಸ್ಯರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಮಾನವ ಹಕ್ಕುಗಳ ಇಲಾಖೆಯ ಸಚಿವರಾಗಿರುವ ಹೆಚ್‌.ಕೆ ಪಾಟೀಲ್ ಅವರ ಅನುಮೋದನೆ ಮೇರೆಗೆ ಈ ನೇಮಕಾತಿ ನಡೆದಿದೆ. ಸರ್ಕಾರ ಮಾಡಿದ್ದ ಶಿಫಾರಸ್ಸನ್ನು ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಅನುಮೋದಿಸಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ ಶ್ಯಾಮ್ ಭಟ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ಕ್ಕೆ ಅಧ್ಯಕ್ಷರನ್ನಾಗಿ ನೇಮಿಸಿದ್ದರು. ಅವರ ಅಧಿಕಾರವಧಿಯಲ್ಲಿ ಕೆಪಿಎಸ್‌ಸಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದ ಆರೋಪಗಳು ಕೇಳಿ ಬಂದಿತ್ತು. ಇದೀಗ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿರುವಾಗ ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ಶ್ಯಾಮ್ ಭಟ್‌ ಅವರನ್ನು ಸದಸ್ಯರನ್ನಾಗಿ ನೇಮಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ‘ಜನತಾ ದರ್ಶನ’: 3,812 ಅರ್ಜಿಗಳ ಸ್ವೀಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...