Homeಕರ್ನಾಟಕಮಹಿಳಾ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿದ್ದರೂ ಸಾಂತ್ವನ ಕೇಂದ್ರ ಸ್ಥಗಿತಕ್ಕೆ ಸರ್ಕಾರ ನಿರ್ಧಾರ- ಸಿದ್ದರಾಮಯ್ಯ ಕಿಡಿ

ಮಹಿಳಾ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿದ್ದರೂ ಸಾಂತ್ವನ ಕೇಂದ್ರ ಸ್ಥಗಿತಕ್ಕೆ ಸರ್ಕಾರ ನಿರ್ಧಾರ- ಸಿದ್ದರಾಮಯ್ಯ ಕಿಡಿ

- Advertisement -
- Advertisement -

ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಸಮಯದಲ್ಲಿ ಕರ್ನಾಟಕ ಸರ್ಕಾರ ಮಹಿಳಾ ಸಾಂತ್ವನ ಕೇಂದ್ರಗಳನ್ನು ಮುಚ್ಚಲು ಹೊರಟ್ಟಿದ್ದು, ಸರ್ಕಾರದ ನಿರ್ಧಾರಕ್ಕೆ ವಿಪ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಬಂದ್ ಆಗಿರುವ ಸಾಂತ್ವನ ಕೇಂದ್ರಗಳನ್ನು ತಕ್ಷಣ ಆರಂಭಿಸಬೇಕು. ಉಳಿದ ಕೇಂದ್ರಗಳನ್ನು ಬಂದ್ ಮಾಡುವ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

“ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದರೂ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ನೆರವು ನೀಡುವ ಸಾಂತ್ವನ ಕೇಂದ್ರಗಳನ್ನು ಆರ್ಥಿಕ ಕೊರತೆಯ ನೆಪವೊಡ್ಡಿ ಸ್ಥಗಿತಗೊಳಿಸಲು ಹೊರಟಿರುವ ರಾಜ್ಯ ಸರ್ಕಾರದ ಮಹಿಳಾ ವಿರೋಧಿ ಕ್ರಮವನ್ನು ಖಂಡಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶವನ್ನು ಕೂಡಲೇ ವಾಪಸ್ ಪಡೆಯಿರಿ: ಸಿದ್ದರಾಮಯ್ಯ ಆಗ್ರಹ

“ನೊಂದ ಮತ್ತು ತುರ್ತು ಅಗತ್ಯ ಇರುವ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ, ಆರ್ಥಿಕ ನೆರವು, ಶಿಕ್ಷಣ, ಉದ್ಯೋಗ, ಉಚಿತ ಕಾನೂನು ನೆರವು ಸೇರಿದಂತೆ ಹಲವು ರೀತಿಯ ಸಹಾಯ ಒಂದೇ ಸೂರಿನ ಅಡಿಯಲ್ಲಿ ಸಿಗಬೇಕು ಎನ್ನುವ ಕಾಳಜಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಾಂತ್ವನ ಕೇಂದ್ರಗಳನ್ನು ನಿರ್ವಹಿಸಲಾಗುತಿತ್ತು”.

’ಸ್ವಯಂ ಸೇವಾ ಸಂಸ್ಥೆಗಳ ನೆರವಿನಿಂದ ಈ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದವು. ಸಾಂತ್ವನ ಕೇಂದ್ರಗಳ ಆಪ್ತ ಸಮಾಲೋಚಕರಿಂದ ಇದುವರೆಗೂ ಸಹಸ್ರಾರು ಮಹಿಳೆಯರು ಸಾಂತ್ವನ ಮತ್ತು ಭರವಸೆ ಪಡೆದುಕೊಂಡಿದ್ದಾರೆ. ಈ ಕೇಂದ್ರಗಳು ನೊಂದ ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿ ಆತ್ಮಹತ್ಯೆ, ಖಿನ್ನತೆ ಸೇರಿದಂತೆ ಹಲವು ರೀತಿಯ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುತ್ತಿದ್ದವು” ಎಂದಿದ್ದಾರೆ.

’ಈಗ ಕೋವಿಡ್ ನೆಪದಲ್ಲಿ ಆರ್ಥಿಕ ಬಿಕ್ಕಟ್ಟಿನ ಕಾರಣ ಹೇಳಿ 71 ಸಾಂತ್ವನ ಕೇಂದ್ರಗಳನ್ನು ಬಂದ್ ಮಾಡಲಾಗಿದೆ. ರಾಜಧಾನಿ ಬೆಂಗಳೂರು ಮಹಿಳೆಯರ ಮೇಲೆ ಅತಿ ಹೆಚ್ಚು ದೌರ್ಜನ್ಯ ನಡೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಹೀಗಿದ್ದೂ ಬೆಂಗಳೂರು ನಗರದಲ್ಲಿದ್ದ ಎಲ್ಲಾ ಸಾಂತ್ವನ ಕೇಂದ್ರಗಳನ್ನು ಬಂದ್ ಮಾಡಿರುವುದು ಅಕ್ಷಮ್ಯ” ಎಂದು ಸಿದ್ದರಾಮಯ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ.

’ಹೀಗಾಗಿ ಬಂದ್ ಆಗಿರುವ ಸಾಂತ್ವನ ಕೇಂದ್ರಗಳನ್ನು ತಕ್ಷಣ ಆರಂಭಿಸಬೇಕು. ಉಳಿದ ಕೇಂದ್ರಗಳನ್ನು ಬಂದ್ ಮಾಡುವ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...