Homeಮುಖಪುಟಪ್ರಧಾನಿಗೆ ವ್ಯಂಗ್ಯವಾಗಿ ಶುಭಾಶಯ ತಿಳಿಸಿದ ಎಚ್‌ಡಿಕೆ, ಸಿದ್ದರಾಮಯ್ಯ!

ಪ್ರಧಾನಿಗೆ ವ್ಯಂಗ್ಯವಾಗಿ ಶುಭಾಶಯ ತಿಳಿಸಿದ ಎಚ್‌ಡಿಕೆ, ಸಿದ್ದರಾಮಯ್ಯ!

#NationalUnemploymentDay ಅಭಿಯಾನಕ್ಕೆ ಬೆಂಬಲ ಸೂಚಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳನ್ನು‌ ಮಾಡಿದ್ದಾರೆ.

- Advertisement -
- Advertisement -

ಇಂದು ಪ್ರಧಾನಿ ನರೇಂದ್ರ ಮೋದಿಯವರ 70 ನೇ ಜನ್ಮದಿನ. ಅನೇಕ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ತಿಳಿಸಿದ್ದಾರೆ. ಇತ್ತ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಪ್ರಧಾನಿಗೆ ವಿಶೇಷ ಶುಭಾಶಯ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು “ರಾಷ್ಟ್ರೀಯ ನಿರುದ್ಯೋಗ ದಿನ”ವನ್ನಾಗಿ ಆಚರಿಸಿ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಈ ಹಿಂದೆ ಟ್ರೆಂಡಿಂಗ್ ಆಗಿತ್ತು. ಇಂದು ನಿರೀಕ್ಷೆಗೂ ಮೀರಿ ನೆಟ್ಟಿಗರು ಈ ಅಭಿಯಾನದಲ್ಲಿ ಪಾಲ್ಗೊಂಡು #NationalUnemploymentDay ಎಂಬ ಹ್ಯಾಶ್‌ಟ್ಯಾಗ್ ಬಳಸಿ ಲಕ್ಷಾಂತರ ಟ್ವೀಟ್‌ಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

ಈ ಅಭಿಯಾನಕ್ಕೆ ಬೆಂಬಲ ಸೂಚಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳನ್ನು‌ ಮಾಡಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಮೋದಿಯವರು ಕಳೆದ 45 ವರ್ಷಗಳಲ್ಲಿ ಅತ್ಯಧಿಕ ನಿರುದ್ಯೋಗಕ್ಕೆ ಕಾರಣಕರ್ತರಾಗಿದ್ದಾರೆ. ಇದರ ವಿರುದ್ಧ ಸಿಡಿದೆದ್ದಿರುವ ದೇಶದ ಯುವಜನತೆ ಪ್ರಾರಂಭಿಸಿರುವ ಅಭಿಯಾನವನ್ನು ನಾನು ಬೆಂಬಲಿಸುತ್ತೇನೆ ಎಂದಿದ್ದಾರೆ. 

ಇನ್ನೊಂದು ಟ್ವೀಟ್‌ನಲ್ಲಿ ಆಡಳಿತದ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿದಿದೆ. ಕಳೆದ 6 ತಿಂಗಳಲ್ಲಿ ಸಂಬಳ‌ ಪಡೆಯುವ ಎರಡು ಕೋಟಿ ಉದ್ಯೋಗಗಳು ಮತ್ತು ಒಟ್ಟು 12 ಕೋಟಿ ಉದ್ಯೋಗಗಳು ನಷ್ಟವಾಗಿವೆ. ಉದ್ಯೋಗ ಸೃಷ್ಟಿಗೆ ನಿಮ್ಮ ಯೋಚನೆ ಮತ್ತು ಯೋಜನೆ ಏನು? ದೇಶದ ಯುವಜನ ಕೇಳುತ್ತಿದ್ದಾರೆ. ಎಂದು #NationalUnemploymentDay  ಹ್ಯಾಶ್‌ಟ್ಯಾಗ್ ಬಳಸಿ ಪೋಸ್ಟ್ ಮಾಡಿದ್ದಾರೆ. 

ಇದನ್ನೂ ಓದಿ: ಸರ್ಕಾರದ ಸೇವೆಗಳು ನಮ್ಮ ಭಾಷೆಯಲ್ಲಿಯೇ ಇರಲಿ: #ServeInMyLanguage ಟ್ವಿಟ್ಟರ್‌ ಟ್ರೆಂಡ್‌‌

ಇತ್ತ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪ್ರಧಾನಿ ಅವರಿಗೆ ಜನ್ಮದಿನದ ಶುಭಾಶಯಗಳು. ಭಗವಂತ ನಿಮಗೆ ಅಯುರಾರೋಗ್ಯ ದಯಪಾಲಿಸಲೆಂದು ನಾನು ಈ ಸಂದರ್ಭದಲ್ಲಿ ಕೋರುತ್ತೇನೆ ಎಂದು ಶುಭಕೋರಿ ಮತ್ತೆ ಇನ್ನೊಂದು ಟ್ವೀಟ್ ಮುಖಾಂತರ ಕಾಲೆಳೆದಿದ್ದಾರೆ. ಕೋವಿಡ್, ಚೀನಾ ತಂಟೆ, ಆರ್ಥಿಕತೆ ಕುಸಿತ, ನಿರುದ್ಯೋಗದಂಥ ಸಮಸ್ಯೆ ಮೆಟ್ಟಿನಿಲ್ಲುವ ಸಾಮರ್ಥ್ಯವನ್ನು ಭಗವಂತ ಕರುಣಿಸಲಿ ಎಂಬ ಜನಾಶಯದ ಹಾರೈಕೆಯೂ ನನ್ನದು ಕೂಡ ಎಂದಿದ್ದಾರೆ.

ಈಗಾಗಲೇ ರಾತ್ರಿಯಿಂದ #NationalUnemploymentDay ಟ್ರೆಂಡಿಂಗ್‌ನಲ್ಲಿದ್ದು, ಇದಕ್ಕೆ ನಾಯಕರ ಟ್ವೀಟ್‌ಗಳು ಸೇರಿಕೊಂಡಿವೆ.


ಇದನ್ನೂ ಓದಿ: ಪ್ರಧಾನಿ ಮೋದಿಯವರ ಜನ್ಮದಿನ: “ರಾಷ್ಟ್ರೀಯ ನಿರುದ್ಯೋಗ ದಿನ” ಎಂದು ಟ್ವಿಟರ್‌ನಲ್ಲಿ ಟ್ರೆಂಡಿಂಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...