Homeಕರ್ನಾಟಕಸಿದ್ದರಾಮಯ್ಯ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ: ಕುಮಾರಸ್ವಾಮಿ

ಸಿದ್ದರಾಮಯ್ಯ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ: ಕುಮಾರಸ್ವಾಮಿ

ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡದಂತಿದೆ

- Advertisement -
- Advertisement -

ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್‌ಗೆ ಜಿಗಿದ ಸಿದ್ದರಾಮಯ್ಯ ‘ಜೆಡಿಎಸ್ ಅವಕಾಶವಾದಿ ಪಕ್ಷ’ ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ ಎಂದಿರುವ ಹೆಚ್‌.ಡಿ.ಕುಮಾರಸ್ವಾಮಿ “ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡದಂತಿದೆ” ಎಂದು ತೀವ್ರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಹರಿಕಾಯ್ದಿದ್ದಾರೆ.

ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಮುಖ್ಯಮಂತ್ರಿಯಾಗಿದ್ದಾಗಲೇ ಬಹಿರಂಗವಾಗಿ ಕಾಂಗ್ರೆಸ್ ಪಕ್ಷ ನಿರ್ನಾಮವಾಗಬೇಕು. ಇದನ್ನು ಬುಡಸಹಿತ ಕಿತ್ತೊಗೆಯಬೇಕು ಎಂದು ಬಹಿರಂಗವಾಗಿ ಅಂತರಂಗದ ಮಾತನ್ನು ಹೇಳಿದ್ದ ನೀವು ಎಂತಹ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ ಎಂಬುದು ಇಡೀ ನಾಡಿಗೆ ಗೊತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿಗೆ ವ್ಯಂಗ್ಯವಾಗಿ ಶುಭಾಶಯ ತಿಳಿಸಿದ ಎಚ್‌ಡಿಕೆ, ಸಿದ್ದರಾಮಯ್ಯ!

ಅಧಿಕಾರದ ನಿರ್ಮೋಹ, ಸ್ವಾಭಿಮಾನಕ್ಕೆ ಕಟ್ಟುಬಿದ್ದು ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಜಿಸಿ ಬಂದರು. ಅಧಿಕಾರ ಉಳಿಸಿಕೊಳ್ಳಬೇಕೆಂದಿದ್ದರೆ ಪ್ರಧಾನಿಯಾಗಿ ಮುಂದುವರಿಯಬಹುದಿತ್ತು. ದೇವೇಗೌಡರ ಈ ಸ್ವಾಭಿಮಾನಿ ರಾಜಕಾರಣವನ್ನು ಇಷ್ಟು ಬೇಗ ಮರೆತು ಬಿಟ್ಟಿರಾ? ಆತ್ಮವಂಚನೆಯ ರಾಜಕಾರಣಿಯಿಂದ ಜೆಡಿಎಸ್ ಕಲಿಯುವುದು ಏನೇನೂ ಇಲ್ಲ ಎಂದು ಹೇಳಿದ್ದಾರೆ.

ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಗಲೆಲ್ಲಾ ಜನರ ಕಷ್ಟಕಾರ್ಪಣ್ಯಗಳು, ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದೆ. ಅಧಿಕಾರದ ಮದ ಮತ್ತು ದುರಹಂಕಾರವನ್ನು ಎಂದೂ ಪ್ರದರ್ಶನ ಮಾಡಿಲ್ಲ. ಅಧಿಕಾರದ ಅಲ್ಪಾವಧಿಯಲ್ಲೂ ಜನಕಲ್ಯಾಣ ಪಕ್ಷದ ಹೆಗ್ಗುರುತಾಗಿತ್ತು ಎಂದು ಅವರು ಹೇಳಿದ್ದಾರೆ.

ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನು ಆಲಿಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣದ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದ್ದು ಬಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹ್ಯವಾದೀತು? ಎಂದು ಅವರು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...