Homeಕರ್ನಾಟಕಸಿದ್ದರಾಮಯ್ಯನವರೇ ಬಹುಜನರ ಆಯ್ಕೆ, ಕಾಂಗ್ರೆಸ್ಸಿಗೆ ಜೈ ಎಂದ ಜನತೆ; ಎನ್.ಡಿ.ಟಿ.ವಿ. ಸಮೀಕ್ಷೆ

ಸಿದ್ದರಾಮಯ್ಯನವರೇ ಬಹುಜನರ ಆಯ್ಕೆ, ಕಾಂಗ್ರೆಸ್ಸಿಗೆ ಜೈ ಎಂದ ಜನತೆ; ಎನ್.ಡಿ.ಟಿ.ವಿ. ಸಮೀಕ್ಷೆ

- Advertisement -
- Advertisement -

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ಪ್ರಶ್ನೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರನ್ನೇ ಬಹುಜನರು ಆಯ್ಕೆ ಮಾಡಿದ್ದಾರೆ, ನಂತರದ ಸ್ಥಾನದಲ್ಲಿ ಬಸವರಾಜ ಬೊಮ್ಮಾಯಿ ಇದ್ದಾರೆ ಎಂದು ಲೋಕನೀತಿ-ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (ಸಿಎಸ್‌ಡಿಎಸ್) ಸಹಭಾಗಿತ್ವದಲ್ಲಿ ಎನ್‌ಡಿಟಿವಿ ನಡೆಸಿರುವ ಸಮೀಕ್ಷೆ ಬಹಿರಂಗಪಡಿಸಿದೆ.

ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಮತ್ತು ಆನಂತರ ಯಾರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಬೇಕೆಂದು ಜನರು ಬಯಸುತ್ತಿದ್ದಾರೆಂಬ ವಿಷಯದ ಕುರಿತು ಸಮೀಕ್ಷೆ ಬೆಳಕುಚೆಲ್ಲಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಮತದಾರರಲ್ಲಿ ಸ್ವಲ್ಪ ಹೆಚ್ಚು ಜನಪ್ರಿಯರಾಗಿದ್ದಾರೆ, ಆದರೆ ಕಿರಿಯ ಮತದಾರರು ಬೊಮ್ಮಾಯಿ ಅವರಿಗೆ ಆದ್ಯತೆ ನೀಡಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೂರನೇ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನಂತರದ ಸ್ಥಾನದಲ್ಲಿದ್ದಾರೆ.

ಒಂದು ಅವಧಿಯನ್ನೂ ಪೂರ್ಣಗೊಳಿಸದೆ, ನಾಲ್ಕು ಬಾರಿ ಮುಖ್ಯಮಂತ್ರಿಯಾಗಿರುವ ಬಿಜೆಪಿಯ ಬಿಎಸ್ ಯಡಿಯೂರಪ್ಪ ಅವರು 5 ನೇ ಸ್ಥಾನದಲ್ಲಿದ್ದು ಆಶ್ಚರ್ಯಕರವಾಗಿ ಕಡಿಮೆ ಸ್ಥಾನ ಪಡೆದಿದ್ದಾರೆ.

ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸುವವರೆಗೂ ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿದ್ದರು. ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವ ಬಿ.ಎಸ್.ಯಡಿಯೂರಪ್ಪನವರು ಯಾವುದೇ ಪ್ರಬಲ ಸ್ಥಾನದ ಆಕಾಂಕ್ಷೆಯನ್ನು ಸದ್ಯಕ್ಕೆ ಹೊಂದಿಲ್ಲ.

ಆದರೆ ಮತ ಚಲಾಯಿಸುವಾಗ ಪಕ್ಷ ಮತ್ತು ಅಭ್ಯರ್ಥಿಯಷ್ಟೇ ಅಲ್ಲ, ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಮತದಾರರು ಗಮನಿಸುತ್ತಾರೆಯೇ ಎಂಬುದರ ಕುರಿತೂ ಸಮೀಕ್ಷೆ ಅವಲೋಕಿಸಿರುವುದಾಗಿ ಎನ್.ಡಿ.ಟಿ.ವಿ ವರದಿ ಪ್ರಕಟಿಸಿದೆ.

ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಹೆಚ್ಚಿನವರು ಪಕ್ಷಕ್ಕೆ ಪ್ರಾಮುಖ್ಯತೆಯನ್ನು ನೀಡಿದ್ದಾರೆ. 56% ಮಂದಿ ಪಕ್ಷಕ್ಕೆ ಮತ್ತು 38% ಜನರು ಅಭ್ಯರ್ಥಿಗೆ ಒಲುವು ತೋರಿದ್ದಾರೆ. ಶೇ.4ರಷ್ಟು ಮಂದಿ ಮಾತ್ರ ಮುಖ್ಯಮಂತ್ರಿ ಯಾರೆಂದು ನೋಡಿ ಮತ ಹಾಕುವುದಾಗಿ ಹೇಳಿದ್ದಾರೆಂದು ವರದಿ ತಿಳಿಸಿದೆ.

ಕಾಂಗ್ರೆಸ್ ಅಥವಾ ಜೆಡಿಎಸ್ ಅನ್ನು ಬೆಂಬಲಿಸುವ ಮತದಾರರು ಹೆಚ್ಚಾಗಿ ಪಕ್ಷವನ್ನು ಪ್ರಮುಖ ಅಂಶವೆಂದು ಪರಿಗಣಿಸಿದ್ದಾರೆ. ಆದರೆ ಬಿಜೆಪಿ ಮತದಾರರು ಈ ವಿಚಾರವಾಗಿ ಭಿನ್ನಾಭಿಪ್ರಾಯ ಹೊಂದಿದ್ದಾರೆ.

ಮತದಾರರ ಗ್ರಹಿಕೆಗೆ ಬಂದಾಗ ಬಿಜೆಪಿಗಿಂತ ಕಾಂಗ್ರೆಸ್ ಉತ್ತಮವಾಗಿದೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ.

ಪ್ರತಿಕ್ರಿಯಿಸಿದವರು ಹೆಚ್ಚಿನವರು ಬಿಜೆಪಿ ಸರ್ಕಾರವನ್ನು `ಭ್ರಷ್ಟ’ ಎಂದು ಅಭಿಪ್ರಾಯಪಟ್ಟಿದ್ದಾರೆ. 59% ಮಂದಿ ಬಿಜೆಪಿಯನ್ನು ಭ್ರಷ್ಟ ಎಂದರೆ 35% ಜನರು ಕಾಂಗ್ರೆಸ್ ಪಕ್ಷವನ್ನು ಭ್ರಷ್ಟವೆಂದು ಟೀಕಿಸಿದ್ದಾರೆ. 3% ಜನರು ಜೆಡಿಎಸ್ ಪಕ್ಷವನ್ನು ಭ್ರಷ್ಟವೆಂದು ಪರಿಗಣಿಸಿದ್ದಾರೆ.

ಕುಟುಂಬ ರಾಜಕಾರಣದಲ್ಲೂ ಬಿಜೆಪಿಯೇ ಮುಂದಿದೆ ಎಂದು 59% ಮಂದಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ 30%, ಜೆಡಿಎಸ್ 8% ಸ್ವಜನಪಕ್ಷಪಾತ ಮಾಡಿರುವುದಾಗಿ ಜನರು ಅಭಿಪ್ರಾಯ ತಾಳಿದ್ದಾರೆ. ಗುಂಪುಗಾರಿಕೆಯಲ್ಲೂ ಬಿಜೆಪಿ (55%) ಪಕ್ಷವು, ಕಾಂಗ್ರೆಸ್ (30%), ಜೆಡಿಎಸ್ (12) ಪಕ್ಷಗಳಿಗಿಂತ ಮುಂದಿದೆ ಎಂದು ಸಮೀಕ್ಷೆ ತಿಳಿಸಿದೆ. ಇದು ಪಕ್ಷವನ್ನು ಹದಗೆಡಿಸುವ ಪ್ರಮುಖ ಅಂಶವೂ ಹೌದು.

ಕಾಂಗ್ರೆಸ್ ಪಕ್ಷವೇ ಅಭಿವೃದ್ಧಿ ವಿಚಾರದಲ್ಲಿ ಒಳ್ಳೆಯ ಕೆಲಸ ಮಾಡಿದೆ ಎಂದು ಹೆಚ್ಚಿನ ಮಂದಿ ಒಲುವು ತೋರಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ 47%, ಬಿಜೆಪಿ 34%, ಜೆಡಿಎಸ್ 14% ಜನರ ಬೆಂಬಲ ಪಡೆದಿವೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವನ್ನು ನಿಭಾಯಿಸುವಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮಾನ ರೇಟಿಂಗ್ (40%)  ಪಡೆದಿವೆ. ಜೆಡಿಎಸ್ ಮೂರನೇ (14%) ಸ್ಥಾನ ಗಳಿಸಿದೆ.

ವಿವಿಧ ಜಾತಿಗಳು ಮತ್ತು ಸಮುದಾಯಗಳು ಹೇಗೆ ಮತ ಚಲಾಯಿಸುವ ಸಾಧ್ಯತೆಯಿದೆ ಎಂಬುದನ್ನು ತಿಳಿಯಲು ಎನ್.ಡಿ.ಟಿ.ವಿ. ಸಮೀಕ್ಷೆಯು ಪ್ರಯತ್ನಿಸಿದೆ.

ಒಕ್ಕಲಿಗರಲ್ಲಿ ಶೇ.34% ಮಂದಿ ಕಾಂಗ್ರೆಸ್ಸಿಗೂ, 36% ಜನರು ಜೆಡಿ(ಎಸ್) ಪಕ್ಷಕ್ಕೂ ಹಂಚಿ ಹೋಗಿದ್ದರೆ, 67% ಲಿಂಗಾಯತರು ಬಿಜೆಪಿಯೊಂದಿಗೆ ದೃಢವಾಗಿ ಉಳಿದಿದ್ದಾರೆ. ಮುಸ್ಲಿಮರಲ್ಲಿ 59% ಮಂದಿ ಕಾಂಗ್ರೆಸ್‌ಗೆ ಮತ ಹಾಕಲು ನಿರ್ಧರಿಸಿದ್ದಾರೆ.

ಸರ್ಕಾರದ ವಿರುದ್ಧ  ಆಡಳಿತ ವಿರೋಧಿ ಅಲೆ ಬಲವಾಗಿ ಇರುವುದನ್ನು ಸಮೀಕ್ಷೆ ಬಹಿರಂಗಪಡಿಸಿದೆ. ಬಡವರು, ಕೆಳ ಮಧ್ಯಮ ವರ್ಗದವರು ಮತ್ತು ಗ್ರಾಮೀಣ ಮತದಾರರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಬೇಸರವಿರುವುದನ್ನು ಸಮೀಕ್ಷೆಯ  ಅಂಕಿ-ಅಂಶಗಳು ಎತ್ತಿಹಿಡಿದಿವೆ.

ಬಡಮತದಾರರು ಹೆಚ್ಚಿನದಾಗಿ ಕಾಂಗ್ರೆಸ್ಸಿಗೆ ಜೈ ಎಂದಿದ್ದಾರೆ. 50 ಬಡವರು ಕಾಂಗ್ರೆಸ್ಸಿನೊಂದಿಗೆ ನಿಂತರೆ, 23% ಬಡವರು ಬಿಜೆಪಿಗೆ ಸಮ್ಮತಿ ಸೂಚಿಸಿದ್ದಾರೆ. ಶ್ರೀಮಂತರಲ್ಲಿ 46% ಜನರು ಬಿಜೆಪಿಗೆ ಜೈ ಎಂದರೆ, 31% ಶ್ರೀಮಂತರು ಕಾಂಗ್ರೆಸ್ಸಿನತ್ತ ಹೊರಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ

ಏರ್‌ಪ್ಯೂರಿಫೈಯರ್‌ ಸಾಧನಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವಂತೆ ಜಿಎಸ್‌ಟಿ ಮಂಡಳಿಗೆ ಆದೇಶಿಸಿದರೆ ಅದು ಅಂತಹ ಇನ್ನಷ್ಟು ಪ್ರಕರಣಗಳು ಹೆಚ್ಚಳವಾಗಲು ಕಾರಣವಾಗುತ್ತದೆ (Pandora Box)ಎಂದು ಕೇಂದ್ರ ಸರ್ಕಾರ ಶುಕ್ರವಾರ (ಡಿ.26) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ದೆಹಲಿ ಎನ್‌ಸಿಆರ್‌...

ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

ಬಳ್ಳಾರಿ ನಗರಕ್ಕೆ ಹೊಂದಿಕೊಂಡಿರುವ ಕೌಲ್‌ ಬಜಾರಿನ ದಾನಪ್ಪಬೀದಿ ಮತ್ತು ಬಂಡಿಹಟ್ಟಿ ಏರಿಯಾಗಳ ಬಡ ಜನರಿಗೆ ಇನಾಂ ರದ್ದತಿಯ ಬಳಿಕ ನೀಡಲಾಗಿದ್ದ ಭೂಮಿಯನ್ನು ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರ (ಬುಡಾ) ದ ಮಾಜಿ ಅಧ್ಯಕ್ಷ ಎನ್‌....

ಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು ಹೋರಾಟಕ್ಕೆ ಸಿದ್ದತೆ

ವರ್ಷಾಂತ್ಯದ ಎರಡು ಪ್ರಮುಖ ದಿನಗಳಾದ ಡಿಸೆಂಬರ್ 25ರ ಕ್ರಿಸ್‌ಮಸ್‌ ಮತ್ತು ಡಿಸೆಂಬರ್ 31ರ ಹೊಸ ವರ್ಷದ ಸಂಜೆ (ಮುನ್ನಾದಿನ) ದೇಶದಾದ್ಯಂತ ಪ್ರತಿಭಟನೆ ನಡೆಸಲು ಗಿಗ್ ಕಾರ್ಮಿಕರು ನಿರ್ಧರಿಸಿದ್ದಾರೆ. ಈಗಾಗಲೇ ಡಿಸೆಂಬರ್ 25ರ ಕ್ರಿಸ್‌ಮಸ್‌ ದಿನದಂದು...

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ ಸರ್ಕಾರ

ಬಾಂಗ್ಲಾದೇಶದ ರಾಜ್‌ಬರಿ ಜಿಲ್ಲೆಯಲ್ಲಿ ಸುಲಿಗೆ ಯತ್ನದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಗುಂಪೊಂದು ಥಳಿಸಿ ಕೊಂದಿದೆ. ಇದು ಇತ್ತೀಚೆಗೆ ಹಿಂದೂ ವ್ಯಕ್ತಿಯನ್ನು ಗುಂಪು ಹತ್ಯೆ ನಡೆಸಿರುವ ಎರಡನೇ ಘಟನೆಯಾಗಿದೆ. ಆದರೆ, ಅಲ್ಲಿನ ಮಧ್ಯಂತರ ಸರ್ಕಾರ...

ದೆಹಲಿ ವಾಯು ಮಾಲಿನ್ಯದಿಂದ ಸಾಂತಾ ಕ್ಲಾಸ್ ಮೂರ್ಛೆ ಹೋದ ವಿಡಿಯೋ ಹಂಚಿಕೆ : ಎಎಪಿಯ ಸೌರಭ್ ಭಾರದ್ವಾಜ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯದಿಂದ ಸಾಂತಾಕ್ಲಾಸ್ ವೇಷ ಧರಿಸಿದ ಪುರುಷರು ಮೂರ್ಛೆ ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ಸ್ಕಿಟ್ (ಅಭಿನಯ) ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ...

ಕ್ರಿಸ್‌ಮಸ್‌ ವೇಳೆ ಶಾಲೆಗೆ ನುಗ್ಗಿ ದಾಂಧಲೆ : ವಿಹೆಚ್‌ಪಿ-ಬಜರಂಗದಳದ ನಾಲ್ವರ ಬಂಧನ

ನಲ್ಬರಿ ಜಿಲ್ಲೆಯ ಶಾಲೆಯೊಂದಕ್ಕೆ ನುಗ್ಗಿ ಕ್ರಿಸ್‌ಮಸ್ ಅಲಂಕಾರವನ್ನು ಧ್ವಂಸ ಮಾಡಿದ, ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ನಾಲ್ವರನ್ನು ಅಸ್ಸಾಂ ಪೊಲೀಸರು ಗುರುವಾರ (ಡಿ.25) ಬಂಧಿಸಿದ್ದಾರೆ. ಬಂಧಿತರನ್ನು ವಿಹೆಚ್‌ಪಿ ಜಿಲ್ಲಾ ಕಾರ್ಯದರ್ಶಿ ಭಾಸ್ಕರ್...

ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಗುಂಡಿಕ್ಕಿ ಶಿಕ್ಷಕನ ಹತ್ಯೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ದ ಶಿಕ್ಷಕರೊಬ್ಬರನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ (ಡಿ.24) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಭೀತಿ ಮೂಡಿಸಿದೆ. ಮೃತರನ್ನು ಎಎಂಯುನ ಎಬಿಕೆ ಯೂನಿಯನ್ ಹೈಸ್ಕೂಲ್‌ನ ಶಿಕ್ಷಕ...

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಉನ್ನಾವೋ ಅತ್ಯಾಚಾರ ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಇಬ್ಬರು ಮಹಿಳಾ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, "ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?"...