Homeಕರ್ನಾಟಕಸಮ್ಮಿಶ್ರ ಸರ್ಕಾರ ಬೀಳಿಸುವುದಾಗಿದ್ದರೆ ಕುಮಾರಸ್ವಾಮಿಯನ್ನು ಸಿಎಂ ಆಗುದಕ್ಕೆ ಬಿಡುತ್ತಿರಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ಬೀಳಿಸುವುದಾಗಿದ್ದರೆ ಕುಮಾರಸ್ವಾಮಿಯನ್ನು ಸಿಎಂ ಆಗುದಕ್ಕೆ ಬಿಡುತ್ತಿರಲಿಲ್ಲ: ಸಿದ್ದರಾಮಯ್ಯ

ಕುಣಿಯೋಕೆ ಆಗದವರು ನೆಲಡೊಂಕು ಎನ್ನುತ್ತಾರೆ, ಕುಮಾರಸ್ವಾಮಿ ಕೂಡಾ ಇದೇ ರೀತಿ. ಸಮ್ಮಿಶ್ರ ಸರ್ಕಾರ ಬೀಳಲು ಕುಮಾರಸ್ವಾಮಿಯೆ ಕಾರಣ.

- Advertisement -
- Advertisement -

ಸಮ್ಮಿಶ್ರ ಸರ್ಕಾರವನ್ನು ಸಿದ್ದರಾಮಯ್ಯ ಬೀಳಿಸಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, “ಸರ್ಕಾರ ಬಿಳಿಸುವುದಾಗಿದ್ದರೆ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಆಗುವುದಕ್ಕೆ ಬಿಡುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ‘ಗ್ರಾಮ್ ಜನಾಧಿಕಾರ’ ಸಮಾವೇಶದಲ್ಲಿ ಮಾತನಾಡಿದ ಅವರ, “ಕುಮಾರಸ್ವಾಮಿ ನಾನು‌ ಸರ್ಕಾರ ಬಿಳಿಸಿದೆ ಅಂತಾರೆ. ನಾನು ಸರ್ಕಾರ ಬಿಳಿಸುವುದಾಗಿದ್ದರೆ ಕುಮಾರಸ್ವಾಮಿಯನ್ನು‌ ಮುಖ್ಯಮಂತ್ರಿ ಆಗುವುದಕ್ಕೆ ಬಿಡುತ್ತಿರಲಿಲ್ಲ. 80 ಸೀಟು ನಾವು ಗೆದ್ದಿದ್ದೆವು, ನಾವು ಜೆಡಿಎಸ್‌ಗೆ ಬೆಂಬಲಿಸದೆ ಇದ್ದಿದ್ದರೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಿದ್ದರೆ? ನಾನು ಒಪ್ಪದೆ ಕುಳಿತಿದ್ದರೆ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಆಗುತ್ತಿತ್ತೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಿಧಾನ ಪರಿಷತ್‌ ಕೋಲಾಹಲ ಬಿಜೆಪಿ-ಜೆಡಿಎಸ್‌ನ ‍ಷಡ್ಯಂತ್ರ: ಸಿದ್ದರಾಮಯ್ಯ

“ಇವರು ಅಧಿಕಾರ ಕಳೆದುಕೊಂಡಿದ್ದು ನನ್ನಿಂದಲ್ಲ. ಬದಲಿಗೆ ವೆಸ್ಟ್‌ಎಂಡ್‌ನಲ್ಲಿ ಕುಳಿತು ಅಧಿಕಾರ ಮಾಡುತ್ತಿದ್ದಿದ್ದಕ್ಕೆ ಅಧಿಕಾರ ಕಳೆದುಕೊಂಡರು. ಶಾಸಕರು ಹಾಗೂ ಸಚಿವರ ಕೈಗೆ ಸಿಗಲಿಲ್ಲ. ಯಾವ ಪತ್ರ ಕೊಟ್ಟರು ಒಂದಕ್ಷರ ಬರೆಯುತ್ತಿರಲಿಲ್ಲ. ಇದರಿಂದ ಬೇಸರಗೊಂಡು ಎಂಎಲ್‌ಎಗಳು ಹೊರಗೆ ಹೋದರು. ಇವರು ಎಂಎಲ್‌ಎಗಳ ಕೈಗೆ ಸಿಗುತ್ತಿದ್ದರೆ 14 ಎಂಎಲ್‌ಎಗಳು ನಮ್ಮಲ್ಲೆ ಇರುತ್ತಿದ್ದರು ಮತ್ತು ಸರ್ಕಾರವು ಬಿಳುತ್ತಿರಲಿಲ್ಲ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಕುಣಿಯೋಕೆ ಆಗದವರು ನೆಲಡೊಂಕು ಎನ್ನುತ್ತಾರೆ, ಕುಮಾರಸ್ವಾಮಿ ಕೂಡಾ ಇದೇ ರೀತಿ. ಸಮ್ಮಿಶ್ರ ಸರ್ಕಾರ ಬೀಳಲು ಕುಮಾರಸ್ವಾಮಿಯೆ ಕಾರಣ. 5 ವರ್ಷ ನನ್ನ ವಿರುದ್ದ ಯಾವತ್ತು ಯಾವ ಎಂಎಲ್ಎಗಳು ಧ್ವನಿ ಎತ್ತಿರಲಿಲ್ಲ. ಸಚಿವ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಶ್ರೀನಿವಾಸ್ ಪ್ರಸಾದ್ ಹೋಗಿದ್ದು ಬಿಟ್ಟರೆ ಇನ್ಯಾರು ಮಾತನಾಡಿದ್ದಾರೆ. ಆದರೆ ಒಂದೂವರೆ ವರ್ಷ ಕುಮಾರಸ್ವಾಮಿ ವಿರುದ್ದ ಎಲ್ಲ ಎಂಎಲ್‌ಎಗಳು ಮಾತನಾಡಿದ್ದಾರೆ. ಈಗ ಸುಮ್ಮನೆ ನನ್ನ ಮೇಲೆ ಆರೋಪ‌ ಮಾಡುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: BJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...