‘ಇನ್ನೂ ಆರೋಪಿಯಾಗಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಕ್ರಿಮಿನಲ್ ಎಂಬ ಹಣೆಪಟ್ಟಿ ಕಟ್ಟಿದ್ದಾರೆ’ ಎಂದು ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಮಾಜಿ ಪ್ರಧಾನಿ ಎಚ್.ಡಿ ಮೊಮ್ಮಗ.ಕುಮಾರಸ್ವಾಮಿ ಅವರ ಅಣ್ಣನ ಮಗನಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥೀಯಾಗಿದ್ದಾರೆ. ಕರ್ನಾಟಕದ ಸೆಕ್ಸ್ ವಿಡಿಯೋ ಹಗರಣದ ಪ್ರಮುಖ ಆರೋಪಿಯಾಗಿದ್ದು, ಅವರು ಪ್ರಸ್ತುತ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, “ಪ್ರಜ್ವಲ್ ರೇವಣ್ಣ ಅವರು ಪ್ರಕರಣದಲ್ಲಿ ಇನ್ನೂ ಆರೋಪಿಯಾಗಿದ್ದಾರೆ. ಅವರ ಅಪರಾಧ ಸಾಬೀತಾಗಿದೆಯೇ? ಆಪಾದಿತ ವಿಡಿಯೋಗಳಲ್ಲಿ ವ್ಯಕ್ತಿಯ ಮುಖ ಕಾಣುತ್ತಿಲ್ಲ ಎಂದು ತನಿಖಾ ತಂಡ ಮಾಧ್ಯಮಗಳಿಗೆ ಮಾಹಿತಿ ಸೋರಿಕೆ ಮಾಡಿದೆ. ಇದು ಸಿಎಂಗೆ ಗೊತ್ತಿಲ್ಲವೇ? ನೈತಿಕತೆಯನ್ನು ಎತ್ತಿಹಿಡಿಯಲು ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರಂತೆ ನಾವು ದುರಹಂಕಾರ ತೋರಿಲ್ಲ” ಎಂದು ಹೇಳಿದ್ದಾರೆ.
“ಅವರ ದುರಹಂಕಾರದಿಂದಲೇ ಸಿಎಂ ಪುತ್ರನ ಪ್ರಕರಣವನ್ನು ಮುಚ್ಚಿ ಹಾಕಲಾಗಿದೆ. ಕೇವಲ ಐದು ಹೆಸರುಗಳನ್ನು ನೀಡಿರುವ ಅವರು ಪಟ್ಟಿಯಲ್ಲಿ ಆರನೇ ಹೆಸರು ಏಕೆ ಎಂದು ದೂರವಾಣಿ ಮೂಲಕ ಕೇಳುತ್ತಿರುವ ವಿಡಿಯೋ ತೋರಿಸಿದ್ದು, ವರ್ಗಾವಣೆಯಲ್ಲಿ ಮಗನ ಪಾತ್ರದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಸಿಎಸ್‌ಆರ್ ನಿಧಿಗೆ ಸಂಬಂಧಿಸಿದಂತೆ ಮಾತುಕತೆ ನಡೆದಿದೆ ಎಂದು ಅವರು ಸಮರ್ಥಿಸಿಕೊಂಡರು, ಇದು ರಾಜ್ಯದ ಜನತೆಗೆ ತಿಳಿದಿದೆ” ಎಂದು ಕುಮಾರಸ್ವಾಮಿ ಆರೋಪಿಸಿದರು.
“ಅಧಿಕಾರ ದುರುಪಯೋಗಪಡಿಸಿಕೊಂಡು ಸಾಕ್ಷಿ ತಿರುಚಬಹುದು ಎಂಬುದನ್ನು ಮುಖ್ಯಮಂತ್ರಿ ಸಾಬೀತುಪಡಿಸಿದ್ದಾರೆ. ಸದ್ಯ ಅದೇ ಕೆಲಸದಲ್ಲಿ ನಿರತರಾಗಿದ್ದಾರೆ. ಪೆನ್‌ಡ್ರೈವ್‌ಗಳನ್ನು ವಿತರಿಸಿದ ಆರೋಪಿಯನ್ನು ಇಂದಿಗೂ ಮುಟ್ಟಿಲ್ಲ” ಎಂದು ಆರೋಪಿಸಿದರು.
“ಸಿಎಂ ಹಗುರವಾದ ಕಾಮೆಂಟ್‌ಗಳನ್ನು ಮಾಡಬಾರದು. ಅವರು ನನ್ನ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಪ್ರಕರಣವನ್ನು ರಾಜಕೀಯ ಪ್ರಚಾರಕ್ಕಾಗಿ ಬಳಸಲಾಗುತ್ತಿದೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ವ್ಯರ್ಥವಾಗಿದೆ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ; ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ


