Homeಕರ್ನಾಟಕಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

’ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ 30 ರಷ್ಟು ವಿನಾಯಿತಿ ನೀಡಿ ಶೇ 70 ರಷ್ಟು ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಜಾರಿಗೆ ಬರಲಿಲ್ಲ’

- Advertisement -
- Advertisement -

ಶಾಲಾ ಶುಲ್ಕ ವಿಚಾರದಲ್ಲಿ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಉಂಟಾಗಿರುವ ಸಂಘರ್ಷವನ್ನು ತಕ್ಷಣ ನಿವಾರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

’ಪೋಷಕರು ಪಾವತಿಸಬೇಕಾದ ರಿಯಾಯಿತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಿನ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್‍ಗಳಿಗೆ ಪಾವತಿಸಬೇಕಾದ ಕೊರೋನಾ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿ ಮುಂತಾದ ವಿಚಾರಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅವರಿಗಾಗುವ ಹೊರೆ ತಗ್ಗಿಸಲು ಸಾಧ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

’ಕಳೆದ ವರ್ಷದಿಂದ ಮಕ್ಕಳು ಶಾಲೆಗಳಿಗೆ ಹೋಗಲು ಸಾಧ್ಯವಾಗಿಲ್ಲ. ತರಗತಿಗಳು ನಡೆಯಲಿಲ್ಲವೆಂದು ಖಾಸಗಿ ಶಾಲೆ-ಕಾಲೇಜುಗಳು ಶಿಕ್ಷಕರಿಗೆ ಸಂಬಳವನ್ನು ನೀಡಿಲ್ಲ. ಸಂಬಳವಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕರು ಹಣ್ಣು ತರಕಾರಿ ವ್ಯಾಪಾರಿಗಳಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆ ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ. ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ 30 ರಷ್ಟು ವಿನಾಯಿತಿ ನೀಡಿ ಶೇ 70 ರಷ್ಟು ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಜಾರಿಗೆ ಬರಲಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಬಿಎಸ್‌ವೈ

’ಪೋಷಕರಿಂದ ವಾಹನ ಶುಲ್ಕ ಸೇರಿ ಇತರೆ ಶುಲ್ಕವನ್ನೂ ಕಟ್ಟಿಸಿಕೊಳ್ಳಲಾಗಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ನಿಷ್ಕ್ರಿಯವಾಗಿ ಕೂತಿದೆ. ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಕೊಡದ ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ಯಾವ ಕ್ರಮ ವಹಿಸಲಾಗಿದೆ..? ಪೂರ್ತಿ ಶುಲ್ಕವನ್ನು ಕಟ್ಟಲಾಗದ ಮಕ್ಕಳಿಗೆ ಮುಂದಿನ ತರಗತಿಗಳಿಗೆ ಪ್ರವೇಶ ನೀಡದೆ ಶೋಷಿಸುತ್ತಿರುವ ಶಾಲೆಗಳ ವಿಚಾರದಲ್ಲಿ ಯಾವ ಕ್ರಮ ವಹಿಸಲಾಗಿದೆ.. ? ಎಂಬುದರ ಬಗ್ಗೆ ರಾಜ್ಯದ ಜನರಿಗೆ ಸ್ಪಷ್ಟಪಡಿಸಬೇಕಿದೆ’ ಎಂದು ಒತ್ತಾಯಿಸಿದ್ದಾರೆ.

’ಜುಲೈ 1 ರಿಂದ ಶೈಕ್ಷಣಿಕ ವರ್ಷದ ತರಗತಿಗಳನ್ನು ಆರಂಭಿಸಲು ಹಾಗೂ ಇದೇ 15 ರಿಂದ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ಆದರೆ, ಶುಲ್ಕ ವಸೂಲಿ ಬಗ್ಗೆ ಇಲಾಖೆ ಯಾವುದೇ ಸ್ಪಷ್ಟ ಸೂಚನೆ ನೀಡಿಲ್ಲ. ಹೀಗಾಗಿ ಕಳೆದ ವರ್ಷದಂತೆಯೇ ಈ ಶೈಕ್ಷಣಿಕ ವರ್ಷದಲ್ಲೂ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ’ ಎಂದಿದ್ದಾರೆ.

’ಸರ್ಕಾರ ಶೇ 30 ರಷ್ಟು ಶುಲ್ಕ ಕಡಿತ ಮಾಡಿದ್ದು ಹಿಂದಿನ ವರ್ಷಕ್ಕೆ ಮಾತ್ರ, ಈ ವರ್ಷ ಸರ್ಕಾರವೇ ಪೂರ್ಣ ಶುಲ್ಕ ವಸೂಲಿ ಮಾಡಲು ಒಪ್ಪಿಗೆ ಕೊಟ್ಟಿದೆ ಎಂದು ಆಡಳಿತ ಮಂಡಳಿಗಳು ಪೋಷಕರಿಗೆ ಹೇಳುತ್ತಿವೆ. ಹೀಗಾಗಿ ತಕ್ಷಣ ಸರ್ಕಾರ ಈ ವಿಚಾರದಲ್ಲಿ ತನ್ನ ನಿಲುವು ಏನು ಎನ್ನುವುದನ್ನು ಸ್ಪಷ್ಟಪಡಿಸಬೇಕು ಮತ್ತು ಶುಲ್ಕದ ಪ್ರಮಾಣವನ್ನು ಸರ್ಕಾರವೇ ನಿರ್ಧರಿಸಿ ತನ್ನ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು. ಪೋಷಕರ ಸಂಘಗಳ ಜತೆ ಚರ್ಚಿಸಿ ವೈಜ್ಞಾನಿಕವಾದ ಮಾನದಂಡದಲ್ಲಿ ಶುಲ್ಕದ ಪ್ರಮಾಣವನ್ನು ನಿಗಧಿ ಮಾಡಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

’ಶಾಲಾ ಶುಲ್ಕ ಸಮಸ್ಯೆ ಮುಂದುವರೆದಷ್ಟು ಮಕ್ಕಳ ಕಲಿಕೆಯ ಮೇಲೆ, ಮಾನಸಿಕತೆ ಮೇಲೆ ಮತ್ತು ಶೈಕ್ಷಣಿಕ ವಾತಾವರಣದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಸಗಿ ಆಡಳಿತ ಮಂಡಳಿಗಳು ಮತ್ತು ಪೋಷಕರು ಪರಸ್ಪರ ಸಂಘರ್ಷಕ್ಕಿಳಿಯುವುದನ್ನು ನೋಡುತ್ತಾ ಕೂರುವುದು ಸರ್ಕಾರದ ಅರಾಜಕ ನಿಲುವಿನ ಸಂಕೇತ ಮತ್ತು ಕ್ರೌರ್ಯದ ಸಂಗತಿ. ಆದ್ದರಿಂದ ಈ ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕ”  ಎಂದು ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ರಾಮ ಮಂದಿರ ಹಗರಣ: ಮಾನನಷ್ಟ ಮೊಕದ್ದಮೆ ಹೂಡಲು ಸೂಚಿಸಿದ ವಿಎಚ್‌‌ಪಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...