Homeಮುಖಪುಟವಾಸ್ತು ಧಿಕ್ಕರಿಸಿ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಸಿದ್ದರಾಮಯ್ಯ

ವಾಸ್ತು ಧಿಕ್ಕರಿಸಿ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಸಿದ್ದರಾಮಯ್ಯ

- Advertisement -
- Advertisement -

ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ, ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಜನರ ಬಗ್ಗೆ ಕಾಳಜಿ, ನಡತೆಯಲ್ಲಿ ಪ್ರಾಮಾಣಿಕತೆ, ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ ಎಂದು ಅವರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ, ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ. ಕೊಠಡಿಯೊಳಗೆ ಒಳ್ಳೆಯ ಗಾಳಿ, ಬೆಳಕು ಬರುವಂತಿದ್ದರೆ ಅದಕ್ಕಿಂತ ಉತ್ತಮ ವಾಸ್ತು ಬೇರಿಲ್ಲ. ನಡೆ – ನುಡಿ ಶುದ್ಧವಿದ್ದರೆ ಮತ್ತೆಲ್ಲವೂ ಶುಭದಾಯಕವಾಗಿರಲಿದೆ. ಜನತೆಯ ಆಶೀರ್ವಾದ ಇರಲಿ ಎಂದು ಅವರು ತಮ್ಮ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯನವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಗಲೂ ಸಹ ಚಾಮರಾಜನಗರಕ್ಕೆ ಹೋದವರು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯವನ್ನು ಧಿಕ್ಕರಿಸಿ ಚಾಮರಾಜನಗರ ಜಿಲ್ಲೆಗೆ ಹಲವಾರು ಭೇಟಿ ನೀಡಿದ್ದರು. ಅಲ್ಲದೇ ಅವರ ಕಾರಿನ ಮೇಲೆ ಕಾಗೆ ಕೂತಿದ್ದನ್ನು ಮಾಧ್ಯಮಗಳು ದೊಡ್ಡ ಸುದ್ದಿಯಾಗಿಸಿದ್ದವು. ಆದರೆ ಅದಕ್ಕೆ ತಲೆ ಕೆಡಿಸಿಕೊಳ್ಳದ ಸಿದ್ದರಾಮಯ್ಯನವರು ದೇವರಾಜ ಅರಸುರವರ ನಂತರ ಪೂರ್ಣಾವಧಿ ಅಧಿಕಾರ ನಡೆಸಿದ ಮುಖ್ಯಮಂತ್ರಿ ಎಂಬ ಖ್ಯಾತಿಗೆ ಭಾಜನರಾಗಿದ್ದರು. ಇಂದು ಕೂಡ ವಾಸ್ತು ಧಿಕ್ಕರಿಸಿ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರ ತೆರೆಸಿ ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ.

ಇದನ್ನೂ ಓದಿ; ತಮಿಳುನಾಡಿನಂತೆ ಕರ್ನಾಟಕವೂ NEP ತಿರಸ್ಕರಿಸಬೇಕು: ಕಣ್ಕಟ್ಟು ಪುಸ್ತಕದ ಕುರಿತ ಸಂವಾದದಲ್ಲಿ ಎಸ್‌.ಜಿ ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...