Homeಕರ್ನಾಟಕನಂಜನಗೂಡಿನ ಪುರಾತನ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಆಕ್ರೋಶ

ನಂಜನಗೂಡಿನ ಪುರಾತನ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ನಂಜನಗೂಡಿನಲ್ಲಿರುವ ಪುರಾತನ ದೇವಸ್ಥಾನವನ್ನು ಕೆಡವಿ ಹಾಕಿರುವುದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಬಿಜೆಪಿ ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ದೇವಾಲಯವನ್ನು ಕೆಡವುತ್ತಿರುವ ವಿಡಿಯೊವನ್ನು ಹಂಚಿಕೊಂಡಿರುವ ಸಿದ್ದರಾಮಯ್ಯ ಅವರು, “ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿ ಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ರಾಜ್ಯ ಬಿಜೆಪಿ ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು. ನ್ಯಾಯಾಲಯದ ಆದೇಶವಿದ್ದರೂ ಅದ‌ನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸುವ ಮುನ್ನ ಜಿಲ್ಲಾಡಳಿತ ಪರಿಣಾಮದ ಬಗ್ಗೆ ಯೋಚನೆ ಮಾಡಬೇಕಾಗಿತ್ತು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

“ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ರಾಜ್ಯ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆ‌ನಪಾಗಲಿಲ್ಲವೇ? ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

“ದೇವಸ್ಥಾನ ಕೆಡವಿ ಹಾಕಿದ ಘಟನೆ ಬಗ್ಗೆ ರಾಜ್ಯದ ಮುಖ್ಯಮಂತ್ರಿ ನಿಷ್ಪಕ್ಷಪಾತ ತನಿಖೆ‌ ನಡೆಸಿ‌ ಕಾರಣಕರ್ತ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಹೊಸ ನಿವೇಶನ ಮಂಜೂರು ಮಾಡಿ ಸರ್ವರನ್ನೂ ವಿಶ್ವಾಸಕ್ಕೆ ಪಡೆದು ನೂತನ ದೇವಸ್ಥಾನವನ್ನು ರಾಜ್ಯದ ಬಿಜೆಪಿ ಸರ್ಕಾರವೇ ನಿರ್ಮಿಸಿಕೊಡಬೇಕು” ಎಂದು ಸಿದ್ದರಾಮಯ್ಯ ಅವರು ಅಗ್ರಹಿಸಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...