Homeಮುಖಪುಟಬೊಮ್ಮಾಯಿಯವರ ಕ್ರಿಯೆ-ಪ್ರತಿಕ್ರಿಯೆ ಹೇಳಿಕೆ ಕೊಲೆ ಬೆದರಿಕೆಯಾಗಿ ಪ್ರಕಟವಾಗುತ್ತಿದೆ: ಸಿದ್ದರಾಮಯ್ಯ

ಬೊಮ್ಮಾಯಿಯವರ ಕ್ರಿಯೆ-ಪ್ರತಿಕ್ರಿಯೆ ಹೇಳಿಕೆ ಕೊಲೆ ಬೆದರಿಕೆಯಾಗಿ ಪ್ರಕಟವಾಗುತ್ತಿದೆ: ಸಿದ್ದರಾಮಯ್ಯ

- Advertisement -
- Advertisement -

ಸಿಎಂ ಬಸವರಾಜ ಬೊಮ್ಮಾಯಿಯವರ ಕ್ರಿಯೆ-ಪ್ರತಿಕ್ರಿಯೆ ಹೇಳಿಕೆ ಕೊಲೆ ಬೆದರಿಕೆಗಳ ರೂಪದಲ್ಲಿ ಪ್ರಕಟವಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಿಯಾಂಕ್ ಖರ್ಗೆಯವರನ್ನು ಕೊಲ್ಲುವುದಾಗಿ ಬೆದರಿಕೆಯೊಡ್ಡಿರುವ ಬಿಜೆಪಿ ರೌಡಿಯನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಬಿಜೆಪಿಯ ರೌಡಿಯೊಬ್ಬ ನಮ್ಮ ಪಕ್ಷದ ಮುಖ್ಯಸ್ಥರು ಮತ್ತು ಚಿತ್ತಾಪುರದ ಶಾಸಕರಾದ ಪ್ರಿಯಾಂಕ್‌ ಖರ್ಗೆಯವರಿಗೆ ಶೂಟ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ರಾಜ್ಯದೊಳಗೆ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿಯವರ ಕ್ರಿಯೆ-ಪ್ರತಿಕ್ರಿಯೆ ಹೇಳಿಕೆ ಕೊಲೆ ಬೆದರಿಕೆಗಳ ರೂಪದಲ್ಲಿ ಪ್ರಕಟವಾಗುತ್ತದೆ. ಪ್ರಿಯಾಂಕ್ ಖರ್ಗೆಯವರ ದಿಟ್ಟ ಕೆಲಸಗಳು ಬಿಜೆಪಿಯಲ್ಲಿ ತಲ್ಲಣ ಮೂಡಿಸಿವೆ. ಆಡಳಿತ ವಿರೋಧಿ ಅಲೆಯನ್ನು ಅಭಿವೃದ್ದಿಯ ಮೂಲಕ ಎದುರಿಸಬೇಕೆ ಹೊರತು ತಮ್ಮನ್ನು ಪ್ರಶ್ನಿಸುವ ವಿರೋಧ ಪಕ್ಷದ ಮುಖಂಡರನ್ನು ಬೆದರಿಸುವ ಮೂಲಕ ಅಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿಯವರು ಕೊಲೆ ಬೆದರಿಕೆಯೊಡ್ಡಿದ ರೌಡಿಯನ್ನು ಬಂಧಿಸಬೇಕು ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮರುಸ್ಥಾಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ಚಿತ್ತಾಪುರದ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡಲು ನಾವು ರೆಡಿ ಇದ್ದೀವಿ” ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಇತ್ತೀಚೆಗೆ ಬೆದರಿಕೆ ಹಾಕಿದ್ದರು. ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, “ನೀವು ಎಕೆ-47ನಿಂದ ಶೂಟ್ ಮಾಡುವಿರಾ? ಅಥವಾ ತೋಪ್‌ನಿಂದ ಮಾಡೋದಿದೆಯಾ? ನೀವು ಶೂಟ್ ಮಾಡಿ, ನಾವು ಸಾಯೋಕು ರೆಡಿ ಇದ್ದೀವಿ. ನಾವೂ ನಿಮಗೆ ಶೂಟ್ ಮಾಡೋಕೂ ರೆಡಿ ಇದ್ದೀವಿ” ಎನ್ನುವ ಮೂಲಕ ಬಂದೂಕಿನ ಪ್ರತಿಕ್ರಿಯೆಯನ್ನು ಪ್ರಸ್ತಾಪಿಸಿದ್ದರು.

ಇತ್ತೀಚೆಗೆ ‘ಪ್ರಿಯಾಂಕ್‌ ಖರ್ಗೆ ನಾಪತ್ತೆ’ ಎಂಬ ಪೋಸ್ಟರ್ ಅಳವಡಿಸಿದ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ, ಪ್ರಿಯಾಂಕ್ ಖರ್ಗೆಯವರು “ನಾವು ಮತ್ತು ನಮ್ಮ ಕಾರ್ಯಕರ್ತರು ಮನಸ್ಸು ಮಾಡಿದರೆ ಬಿಜೆಪಿ ಲೀಡರ್‌ಗಳು ತಿರುಗಾಡಲು ಬಿಡುವುದಿಲ್ಲ. ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದವರು ಸತ್ತೋಗಿಲ್ಲ” ಎಂದು ಹೇಳಿಕೆ ನೀಡಿದ್ದರು. ಅದನ್ನು ಖಂಡಿಸಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಶೂಟ್ ಬೆದರಿಕೆ ಹಾಕಲಾಗಿತ್ತು.


ಇದನ್ನೂ ಓದಿ: ಪ್ರಿಯಾಂಕ್‌ ಖರ್ಗೆಗೆ ಶೂಟ್ ಮಾಡುವುದಾಗಿ ಬಿಜೆಪಿ ಮುಖಂಡನಿಂದ ಬೆದರಿಕೆ; ಕಾಂಗ್ರೆಸ್ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...