Homeಮುಖಪುಟಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ಸಿದ್ದರಾಮಯ್ಯ

ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ಸಿದ್ದರಾಮಯ್ಯ

- Advertisement -
- Advertisement -

ಕರ್ನಾಟಕದ 15ನೇ ವಿಧಾನಸಭೆಯ 10ನೇ ವಿಧಾನಸಭಾ ಅಧಿವೇಶನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ವಿಶೇಷ ಘಟನೆ ನಡೆಯಿತು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರ್ಕಾರ ಮಾಡಿದ ಆಯಿಲ್‌ ಬಾಂಡ್‌ಗಳೇ ಕಾರಣ ಎಂಬ ಬಿಜೆಪಿಯ ಆರೋಪಕ್ಕೆ ಎಳೆ ಎಳೆಯಾಗಿ ಮಾಹಿತಿ ಬಿಚ್ಚಿಟ್ಟ ಸಿದ್ದರಾಮಯ್ಯನವರು ಮೋದಿ ಸರ್ಕಾರ ಅಬಕಾರಿ ಶುಂಕ ಹೆಚ್ಚಾಗಿರುವುದೇ ಬೆಲೆ ಏರಿಕೆಗೆ ಕಾರಣ ಹೊರತು ಆಯಿಲ್ ಬಾಂಡ್‌ಗಳಲ್ಲ, ಅವುಗಳ ಬೆಲೆ ಕೇವಲ 1.7 ಲಕ್ಷ ಕೋಟಿ ಅಷ್ಟೇ ಎಂದು ಮನವರಿಕೆ ಮಾಡಿಕೊಟ್ಟರು. ಅಲ್ಲದೇ ತಮಿಳುನಾಡು ಬೆಲೆ ಇಳಿಸಿರುವ ಹೊತ್ತಲ್ಲಿ ಕರ್ನಾಟಕವೂ ಬೆಲೆ ಇಳಿಸಬೇಕೆಂದು ಒತ್ತಾಯಿಸಿದರು.

ನಂತರ ಕುಮಾರವ್ಯಾಸ ರಚಿತ ಮಹಾಭಾರತದ ಪದ್ಯವೊಂದನ್ನು ಓದಿದರು.

ಅರಸು ರಾಕ್ಷಸ, ಮಂತ್ರಿಯೆಂಬುವ ಮೊರೆವ ಹುಲಿ
ಪರಿವಾರ ಹದ್ದಿನ ನೆರವಿ, ಬಡವರ ಭಿನ್ನಪವನಿನ್ಯಾರು ಕೇಳುವರು
ಉರಿ ಉರಿವುತ್ತಿದೆ, ದೇಶ ನಾವಿನ್ನನಿರಲು
ಬಾರದೆನ್ನುತ ಜನ ಬೇಸರದ ಬೇಗೆಯಲ್ಲಿರದಲೆ ಭೂಪಾಲ ಕೇಳೆಂದ.

ಭಾಮಿನಿ ಷಟ್ಪದಿ ಗೊತ್ತಲ್ಲ ನಿಮಗೆ.. ಲಘು ಗುರುಗಳು ಇರುತ್ತವೆ.

ಒಂದು ವಾಕ್ಯದಲ್ಲಿ 1,2,4,5 ನೇಯದರಲ್ಲಿ 13 ಲಘು ಗುರುಗಳಿರುತ್ತವೆ

3ನೇಯದು ಮತ್ತು 6ನೇಯದರಲ್ಲಿ 23 ಲಘು ಗುರುಗಳಿರುತ್ತವೆ ಭಾಮಿನಿ ಷಟ್ಪದಿಯಲ್ಲಿ..

ಕೊನೆಯ ಅಕ್ಷರ ಲಘುವಾದರೂ ಅದನ್ನು ಧೀರ್ಘವಾಗಿ ಉಚ್ಛರಿಸಬೇಕು, ಅದನ್ನು ಗುರು ಎಂದು ಪರಿಗಣಿಸಬೇಕು.

ಕುಮಾರವ್ಯಾಸನ ಸಭಾಪರ್ವದಲ್ಲಿ ಬರುತ್ತಕ್ಕಂತ ಪ್ರಸಂಗ ಇದು. ನಾರದ ಮಹರ್ಷಿ ಧರ್ಮರಾಯರಿಗೆ ಹೇಳಿದ ಮಾತುಗಳು. ಬಹುಶಃ ಅವತ್ತು ಕುಮಾರವ್ಯಾಸ ಈ ಥರ ಪರಿಸ್ಥಿತಿ ಈ ದೇಶದಲ್ಲಿ ಬರುಬಹುದು ಎಂದು ಈ ಪದ್ಯ ಬರೆದಿರಬಹುದು. ಆಗ ಆತ ರಾಜರಿಗೆ, ಧರ್ಮರಾಯನಿಗೆ ಹೇಳಿದ್ದ ಮಾತಿದು. ಈ ಥರ ರಾಜನೀತಿ ಇರಬೇಕಪ್ಪ, ಈ ಥರ ನಡೆದುಕೊಳ್ಳಬೇಕು, ಜನರಿಗೆ ರಕ್ಷಣೆ ಕೊಡಬೇಕು ಎಂದು ಅವತ್ತು ನಾರದ ಮುನಿಗಳು ಧರ್ಮರಾಯನಿಗೆ ಹೇಳಿದ ಮಾತುಗಳು ಇಂದಿಗೂ ಅನ್ವಯಿಸುತ್ತವೆ ಎಂದು ಪಾಠ ಮಾಡಿದರು. ಇಡೀ ಸದನ ನಿಶ್ಯಬ್ದವಾಗಿ ಆಲಿಸಿದ್ದಲ್ಲದೆ ಕೊನೆಗೆ ಚಪ್ಪಾಳೆ ತಟ್ಟಿ ಅಭಿನಂದಿಸಿದರು.

ವಿಡಿಯೋ ನೋಡಿ


ಇದನ್ನೂ ಓದಿ: Explainer: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಆಯಿಲ್ ಬಾಂಡ್‌ಗಳು ಕಾರಣವೇ? GST ವ್ಯಾಪ್ತಿಗೆ ತರಲು ರಾಜ್ಯಗಳ ವಿರೋಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...