Homeಕರ್ನಾಟಕಯಾತ್ರೆಯಲ್ಲಿ ಕಾರ್ಯಕರ್ತನಿಗೆ ಥಳಿತ - ಯಥಾ ಮುಖ್ಯಮಂತ್ರಿ, ತಥಾ‌ ಪೊಲೀಸ್ ಎಂದ ಸಿದ್ದರಾಮಯ್ಯ

ಯಾತ್ರೆಯಲ್ಲಿ ಕಾರ್ಯಕರ್ತನಿಗೆ ಥಳಿತ – ಯಥಾ ಮುಖ್ಯಮಂತ್ರಿ, ತಥಾ‌ ಪೊಲೀಸ್ ಎಂದ ಸಿದ್ದರಾಮಯ್ಯ

ಇದು ವಿಕೋಪಕ್ಕೆ ಹೋಗಿ ಜನರೇ ಪೊಲೀಸರ ವಿರುದ್ಧ ತಿರುಗಿ ಬೀಳುವಂತಹ ಪರಿಸ್ಥಿತಿಯನ್ನು ದಯವಿಟ್ಟು ಸೃಷ್ಟಿ ಮಾಡಬೇಡಿ ಎಂದು ಅವರು ಎಚ್ಚರಿಸಿದ್ದಾರೆ

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ‌ ಐಕ್ಯತಾ ಯಾತ್ರೆ’ಯಲ್ಲಿ #PayCM ಬಾವುಟ ಮತ್ತು ಟಿ ಶರ್ಟ್ ಧರಿಸಿ ಭಾಗವಹಿಸಿದ ಕಾಂಗ್ರೆಸ್ ಕಾರ್ಯಕರ್ತನಿಗೆ ಪೊಲೀಸರು ಹಲ್ಲೆ ನಡೆಸಿರುವುದನ್ನು ವಿಪಕ್ಷ ನಾಯಕ ಶನಿವಾರ ಖಂಡಿಸಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಅವರು ಟ್ವಿಟರ್‌ನಲ್ಲಿ ಆಕ್ರೊಶ ವ್ಯಕ್ತಪಡಿಸಿದ್ದು, “#PayCM ಟೀ ಶರ್ಟ್ ಧರಿಸಿದ್ದ ನಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಬೀದಿ ಗೂಂಡಾನಂತೆ ಹಲ್ಲೆಗೈದ ಪೊಲೀಸ್ ಅಧಿಕಾರಿಯ ಕೃತ್ಯ ಖಂಡನೀಯ. ಈ‌ ಪುಂಡ ಪೋಲಿಸನನ್ನು ಈ ಕೂಡಲೇ ಅಮಾನತು ಮಾಡಬೇಕು ಎಂದು ರಾಜ್ಯ ಮುಖ್ಯಮಂತ್ರಿಯವರನ್ನು ಆಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಯಥಾ ಮುಖ್ಯಮಂತ್ರಿ, ತಥಾ‌ ಪೊಲೀಸ್. ಕರ್ನಾಟಕದಲ್ಲಿ ಯುಪಿ ಮಾದರಿ ಆಡಳಿತ ತರುತ್ತೇವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದರು. ಪೊಲೀಸರು ಅದನ್ನು ಅನುಷ್ಠಾನಗೊಳಿಸಲು ಹೊರಟಂತಿದೆ. 40% ಕಮಿಷನ್ಭ್ರ ಷ್ಟಾಚಾರದ ವಿರುದ್ಧದ ನಮ್ಮ ಪಕ್ಷದ ಅಭಿಯಾನವನ್ನು ಎದುರಿಸುವ ಧಮ್ಮು-ತಾಕತ್‌ ರಾಜ್ಯದ ಬಿಜೆಪಿ ಪಕ್ಷಕ್ಕೆ ಇಲ್ಲ. ರಾಜಕೀಯವಾಗಿ ನಮ್ಮನ್ನು ಎದುರಿಸಲಾಗದೆ ಬಿಜೆಪಿ ಪೊಲೀಸರ ಮೂಲಕ ದಮನಿಸುವ ಹೇಡಿತನಕ್ಕೆ ಇಳಿದಿದೆ” ಎಂದು ಅವರು ಕಿಡಿ ಕಾರಿದ್ದಾರೆ.

ಭ್ರಷ್ಟಾಚಾರದ ವಿರುದ್ಧದ ಅಭಿಯಾನ ಅಪರಾಧ ಎಂದು ಯಾವ ಕಾನೂನಿನಲ್ಲಿ ಹೇಳಿದೆ? ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. “ನಮ್ಮ ವಿರುದ್ಧ ಕೊಳಕು ಭಾಷೆಯ ಜಾಹೀರಾತು ನೀಡಿದ್ದೀರಿ, ಅದನ್ನು ನಾವು ಹರಿದುಹಾಕಲು ಹೋಗುವುದಿಲ್ಲ. ರಾಜಕೀಯವಾಗಿಯೇ ಎದುರಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

“ಕಳೆದ ಕೆಲವು ದಿನಗಳಿಂದ ರಾಜ್ಯದ ಪೊಲೀಸರು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ಶುರುಮಾಡಿದ್ದಾರೆ. ಇದು ವಿಕೋಪಕ್ಕೆ ಹೋಗಿ ಜನರೇ ಪೊಲೀಸರ ವಿರುದ್ಧ ತಿರುಗಿ ಬೀಳುವಂತಹ ಪರಿಸ್ಥಿತಿಯನ್ನು ದಯವಿಟ್ಟು ಸೃಷ್ಟಿ ಮಾಡಬೇಡಿ” ಎಂದು ಅವರು ಎಚ್ಚರಿಸಿದ್ದಾರೆ.

“ಕರ್ನಾಟಕ ಶಾಂತಿಪ್ರಿಯರ ನಾಡು, ಇದನ್ನು ಪೊಲೀಸ್ ರಾಜ್ಯ ಮಾಡಲು ಹೋಗಬೇಡಿ. ಯಾವ ಸರ್ಕಾರವೂ ಶಾಶ್ವತ ಅಲ್ಲ, ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಪಾಪಕ್ಕೆ ತಕ್ಕ ಶಿಕ್ಷೆ ಅನುಭವಿಸಬೇಕಾದೀತು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

🛑 Live | ಕರ್ನಾಟಕದಲ್ಲಿ ‘ಭಾರತ ಐಕ್ಯತಾ ಯಾತ್ರೆ’ಯ ಲೈವ್ ಅಪ್‌ಡೇಟ್‌‌ಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...