Homeಕರ್ನಾಟಕಆರ್‌ಎಸ್‌ಎಸ್‌ ಈ ದೇಶದ್ದಾ? ಅವರೇನು ದ್ರಾವಿಡರಾ? ಚರಿತ್ರೆಯನ್ನು ಕೆದಕಲು ಹೋಗಬಾರದು: ಸಿದ್ದರಾಮಯ್ಯ

ಆರ್‌ಎಸ್‌ಎಸ್‌ ಈ ದೇಶದ್ದಾ? ಅವರೇನು ದ್ರಾವಿಡರಾ? ಚರಿತ್ರೆಯನ್ನು ಕೆದಕಲು ಹೋಗಬಾರದು: ಸಿದ್ದರಾಮಯ್ಯ

“ವಿರೋಧ ಪಕ್ಷದ ನಾಯಕರು ಮಾತನಾಡುತ್ತಾರೆ ಎಂದು ನೆಹರೂ ಅವರು ಪಾರ್ಲಿಮೆಂಟ್‌ಗೆ ಗೈರು ಹಾಜರಾಗುತ್ತಿರಲಿಲ್ಲ. ಈ ಎದೆಗಾರಿಕೆ ಈಗಿನ ಪ್ರಧಾನಿ ನರೇಂದ್ರ ಮೋದಿಯವರಿಗೆ ಏಕಿಲ್ಲ?”

- Advertisement -
- Advertisement -

ಆರ್‌ಎಸ್‌ಎಸ್ ಈ ದೇಶದ್ದಾ? ಅವರೇನು ದ್ರಾವಿಡರಾ? ದ್ರಾವಿಡರು ಈ ದೇಶದವರು. ಇದನ್ನೆಲ್ಲಾ ಪ್ರಶ್ನಿಸುತ್ತಾ ಹೋದರೆ ಏನಾಗುತ್ತದೆ ಗೊತ್ತಾ? ಅದಕ್ಕೆ ಚರಿತ್ರೆಯನ್ನು ಕೆದಕಲು ಹೋಗಬಾರದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಮಾಜಿ ಪ್ರಧಾನಿ ದಿವಂಗತ ಜವಾಹರ್‌ಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು, “ಚರಿತ್ರೆ ಗೊತ್ತಿಲ್ಲದವರು ಭವಿಷ್ಯ ರೂಪಿಸಲಾರರು” ಎಂದು ಹೇಳಿದ್ದರು. ಯುವಕರು, ದ್ರಾವಿಡರು, ದುಡಿಯುವ ಜನ ಸಮುದಾಯಗಳು ಈ ದೇಶದ ನಿಜವಾದ ಚರಿತ್ರೆ ಓದಬೇಕು. ನಿಜವಾದ ಚರಿತ್ರೆಯನ್ನು ಅರಿತುಕೊಂಡರೆ ಏನಾಗಬಹುದು ಎನ್ನುವುದು ಆರ್ ಎಸ್‌ಎಸ್ ನವರಿಗೆ ಗೊತ್ತಿದೆ ಮತ್ತು ನಿಜವಾದ ಚರಿತ್ರೆ ಬಗ್ಗೆ ಅವರಿಗೆ ಭಯವಿದೆ. ಈ ಕಾರಣಕ್ಕೇ ಇತಿಹಾಸವನ್ನು ತಿರುಚುತ್ತಾರೆ. ಪಠ್ಯ ಪುಸ್ತಕಗಳ ಸಮಿತಿಗೆ ಚಕ್ರತೀರ್ಥನಂತವರನ್ನು ಹಾಕುವುದೇ ಈ ಉದ್ದೇಶಗಳಿಗೆ ಎಂದು ಅಭಿಪ್ರಾಯಪಟ್ಟರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೋಹಿತ್ ಚಕ್ರತೀರ್ಥ ಎನ್ನುವ ಒಬ್ಬನಿಗೆ ಮಕ್ಕಳ ಪಠ್ಯ ಪುಸ್ತಕ ರೂಪಿಸುವ ಜವಾಬ್ದಾರಿ ನೀಡಲಾಗಿದೆ. ಇದಕ್ಕಿಂತ ಮೂರ್ಖತನವನ್ನು ನಾನು ನೋಡಿಲ್ಲ. ಈತ ಹೆಡಗೇವಾರ್‌ಗಿಂತ ಒಂದು ಹೆಜ್ಜೆ ಮುಂದಿದ್ದಾನೆ. ಅಪ್ರತಿಮ ದೇಶಭಕ್ತ ಭಗತ್‌ಸಿಂಗ್ ಪಠ್ಯವನ್ನು ತೆಗೆದು ಹೆಡಗೇವಾರ್ ಭಾಷಣ ಹಾಕಿದ್ದಾನೆ. ಭಗತ್‌ಸಿಂಗ್ ಗಿಂತ ದೇಶಭಕ್ತ ಬೇಕಾ? ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಬ್ರಾಹ್ಮಣ್ಯ ಯಾಜಮಾನ್ಯ ಉಳಿಸಿಕೊಳ್ಳುವ ಹುನ್ನಾರ; ಸುಳ್ಳು ಸಮರ್ಥನೆಗಿಳಿದ ಸಚಿವ ಬಿ.ಸಿ ನಾಗೇಶ್

ಪಂಡಿತ್ ಜವಾಹರಲಾಲ್ ನೆಹರೂ ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಪ್ರಜಾತಂತ್ರದ ಆಧಾರದಲ್ಲಿ ದೇಶವನ್ನು ಕಟ್ಟಿ ನಿಲ್ಲಿಸಿದ್ದು ಮಾತ್ರವಲ್ಲದೆ, ಪ್ರಜಾಪ್ರಭುತ್ವದ ಬೇರುಗಳು ದೇಶದಲ್ಲಿ ಆಳವಾಗಿ ಬೇರೂರಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಂಡರು. ಸಂವಿಧಾನ ಬದ್ದವಾದ ಸಂಸ್ಥೆಗಳನ್ನು ರೂಪಿಸಿ ಅವುಗಳಿಗೆ ಶಕ್ತಿ ತುಂಬಿದರು. ಹೀಗಾಗಿ ದೇಶ ಈ ಮಟ್ಟದ ಪ್ರಗತಿ ಪಥದಲ್ಲಿ ಮುನ್ನಡೆದು ಬರಲು ಸಾಧ್ಯವಾಯಿತು ಎಂದು ತಿಳಿಸಿದರು.

ಬ್ರಿಟಿಷರು ಭಾರತ ಬಿಟ್ಟು ಹೊರಟಾಗ ಇಲ್ಲಿ ಏನಿತ್ತು? ಶಿಕ್ಷಣ, ಆರೋಗ್ಯ, ನೀರಾವರಿ, ಕೃಷಿ, ತಂತ್ರಜ್ಞಾನ, ವಿಜ್ಞಾನ ಸೇರಿ ಪ್ರತಿ ಕ್ಷೇತ್ರವನ್ನೂ ಸೊನ್ನೆಯಿಂದ ಆರಂಭಿಸಿ ಹೊಸದಾಗಿ ನಿರ್ಮಿಸಿದರು. ಆಗ ದೇಶದ ಸಾಕ್ಷರತಾ ಪ್ರಮಾಣ ಶೇ 15-18 ಇತ್ತು. ಇಂದು ಸಾಕ್ಷರತಾ ಪ್ರಮಾಣ ಶೇ 75-80 ನ್ನು ತಲುಪಲು ಅಂದು ನೆಹರೂ ಅವರು ಹಾಕಿಕೊಟ್ಟ ಅಡಿಪಾಯಗಳೇ ಮುಖ್ಯ ಕಾರಣ. ಆದರೆ ಈಗಿನ ಪ್ರಧಾನಿ ನರೇಂದ್ರ ಮೋದಿ ಇದಕ್ಕೆಲ್ಲಾ ತದ್ವಿರುದ್ಧ. ಇವರು ಪ್ರಧಾನಿ ಆದ ಬಳಿಕ ಒಂದೇ ಒಂದು ಸಂಸ್ಥೆಯನ್ನೂ ಕಟ್ಟಿ ಬೆಳೆಸಿಲ್ಲ. ನೆಹರೂ ಅವರು ಕಟ್ಟಿದ ತಾಂತ್ರಿಕ-ವೈಜ್ಞಾನಿಕ-ಶೈಕ್ಷಣಿಕ ಸಂಸ್ಥೆಗಳ ಹೆಸರನ್ನು ಹಾಳು ಮಾಡಲು ಹಗಲೂ ರಾತ್ರಿ ಶ್ರಮಿಸುತ್ತಿದ್ದಾರೆ. ಸಂವಿಧಾನ ಬದ್ದವಾದ ಸಂಸ್ಥೆಗಳ ಕುತ್ತಿಗೆ ಹಿಚುಕಿ ಎಲ್ಲವನ್ನೂ ಸರ್ಕಾರದ ಕೈಗೊಂಬೆ ಮಾಡಿಕೊಳ್ಳಲು ಒದ್ದಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ನೆಹರೂ ಅವರು ದೇಶವನ್ನು ಮುನ್ನಡೆಸಲು ಬೇಕಾದ ಅರ್ಹತೆ ದೂರದೃಷ್ಟಿ ಹೊಂದಿದ್ದರು. ಇಂದು ದೇಶದಲ್ಲಿರುವ ವಿಶ್ವ ದರ್ಜೆಯ ವಿಜ್ಞಾನ, ಸಂಶೋಧನಾ ಸಂಸ್ಥೆಗಳು ನೆಹರೂ ಅವರ ಸಾಧನೆ. ಪಂಚವಾರ್ಷಿಕ ಯೋಜನೆಗಳು ನೆಹರೂ ಅವರ ಕೊಡುಗೆ. ಆದರೆ ಈಗಿನ ಪ್ರಧಾನಿ ನೆಹರೂ ಅವರಿಗೆ ದೇಶವನ್ನು ಮುನ್ನಡೆಸುವುದು ಗೊತ್ತಿಲ್ಲ. ಐದು ಸಾವಿರ ವರ್ಷಗಳಷ್ಟು ಹಿಂದಕ್ಕೆ ದೇಶವನ್ನು ಎಳೆದೊಯ್ಯುವ ಅಪಾಯಕಾರಿ ಬೆಳವಣಿಗೆಗಳು ಈಗ ನಡೆಯುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ನೆಹರೂ ಅವರು ಪ್ರಧಾನಿ ಆದ ಮೇಲೂ ವಿರೋಧ ಪಕ್ಷಗಳಿಗೆ ಮನ್ನಣೆ ನೀಡುತ್ತಿದ್ದರು. ವಿರೋಧ ಪಕ್ಷದ ಮಾತುಗಳನ್ನು ಕೇಳಿಸಿಕೊಳ್ಳುತ್ತಿದ್ದರು. ವಿರೋಧ ಪಕ್ಷದ ನಾಯಕರು ಮಾತನಾಡುತ್ತಾರೆ ಎಂದು ಪ್ರಧಾನಿ ನೆಹರೂ ಅವರು ಪಾರ್ಲಿಮೆಂಟ್‌ಗೆ ಗೈರು ಹಾಜರಾಗುತ್ತಿರಲಿಲ್ಲ. ಸದನದಲ್ಲೇ ಕುಳಿತು ವಿರೋಧ ಪಕ್ಷದವರ ಮಾತು ಮತ್ತು ಅಭಿಪ್ರಾಯಗಳನ್ನು ಸಂಪೂರ್ಣವಾಗಿ ಕೇಳಿಸಿಕೊಳ್ಳುವ ಎದೆಗಾರಿಕೆ ಇತ್ತು. ಈ ಎದೆಗಾರಿಕೆ ಈಗಿನ ಪ್ರಧಾನಿ ನರೇಂದ್ರ ಮೋದಿಯವರಿಗೆ ಏಕಿಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ತಮಿಳುನಾಡಿಗೆ ಅನ್ಯಾಯ; ಮೋದಿ ಇದ್ದ ವೇದಿಕೆಯಲ್ಲೇ ಸ್ಟಾಲಿನ್‌ ಹೇಳಿಕೆ; ಅಣ್ಣಾಮಲೈಗೆ ಬೇಸರ

ದೇಶದ ನಿರುದ್ಯೋಗ, ಕೃಷಿ, ಆರ್ಥಿಕತೆ ಪ್ರತಿಯೊಂದನ್ನೂ ಸಮೀಕ್ಷೆ ನಡೆಸಿ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಲು ಅನುಕೂಲ ಆಗುವಂತಹ ಸಂಸ್ಥೆಗಳನ್ನು ನೆಹರೂ ಮತ್ತು ನಂತರದವರು ರೂಪಿಸಿದ್ದರು. ಆದರೆ ಮೋದಿ ಅವರು ಎಲ್ಲಾ ಸಂಸ್ಥೆಗಳ ಕುತ್ತಿಗೆ ಹಿಚುಕುತ್ತಿದ್ದಾರೆ. ಸಮೀಕ್ಷೆಗಳೇ ನಡೆಯದಂತೆ, ಖಾಸಗಿ ಸಂಸ್ಥೆಗಳು ನಡೆಸುವ ಸಮೀಕ್ಷೆಗಳೂ ಬಹಿರಂಗಗೊಳ್ಳದಂತೆ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ವಿವರಿಸಿದರು.

ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮ ನೆಹರೂ ಅವರ ಆಲೋಚನೆಯಾಗಿತ್ತು. ಕಂದಾಚಾರ-ಮೌಢ್ಯಕ್ಕೆ ದೇಶದ ಯುವ ಸಮೂಹವನ್ನು ಬಲಿ ಕೊಡದೆ ಅವರನ್ನು ವೈಜ್ಞಾನಿಕ ಮಾರ್ಗದಲ್ಲಿ ಶಿಕ್ಷಿತರನ್ನಾಗಿ ಮಾಡುವ ಮೂಲಕ ದೇಶವನ್ನು ಪ್ರಗತಿ ಪಥದಲ್ಲಿ ಕೊಂಡೊಯ್ಯಬೇಕು ಎನ್ನುವುದನ್ನು ನೆಹರೂ ಅವರು ಸಾಧಿಸಿ ತೋರಿಸಿದರು. ಈಗಿನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೈಜ್ಞಾನಿಕ ಮನೋಧರ್ಮ ಎಂದರೆ ಏನು ಎನ್ನುವುದೇ ಗೊತ್ತಿಲ್ಲ. ಹೀಗಾಗಿ ಈ ದೇಶದ ಯುವ ಸಮೂಹ ಮತ್ತು ವಿದ್ಯಾರ್ಥಿ ಸಮೂಹಕ್ಕೆ ಅಗತ್ಯವಾದ ಶಿಕ್ಷಣ, ಉದ್ಯೋಗ, ಪ್ರಗತಿ ಇದ್ಯಾವುದರ ಬಗ್ಗೆಯೂ ಅವರು ಮಾತನಾಡುವುದಿಲ್ಲ. ಈ ಕ್ಷೇತ್ರಗಳಲ್ಲಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಈ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಅವರು ಧರ್ಮ ಮತ್ತು ಜಾತಿ ಸಂಘರ್ಷಗಳ ಬಗ್ಗೆಯೇ ಮಾತನಾಡುತ್ತಾ ದೇಶದ ದಾರಿ ತಪ್ಪಿಸುತ್ತಾರೆ.
ಈ ಸತ್ಯವನ್ನು ದೇಶದ ಯುವಕರು, ಪ್ರಜೆಗಳು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ನಿಮ್ಮ ಮತ್ತು ನಿಮ್ಮ ಮಕ್ಕಳು ಐದು ಸಾವಿರ ವರ್ಷದ ಹಿಂದಕ್ಕೆ ಜಾರಬೇಕೋ, ಅಭಿವೃದ್ಧಿ ಪಥದಲ್ಲಿ ವಿಶ್ವ ಸಮುದಾಯದೊಂದಿಗೆ ಮುನ್ನಡೆಯಬೇಕೋ ಎನ್ನುವುದನ್ನು ಯುವಕರು ನಿರ್ಧರಿಸಬೇಕು ಎಂದು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹೌದು ಸ್ವಾಮಿ, ಆರ್ ಎಸ್ ಎಸ್ ಈ ದೇಶದ ಮೂಲದ್ದಲ್ಲ, ಸೋನಿಯಾ ಗಾಂಧಿ ಈ ದೇಶದಲ್ಲೇ ಹುಟ್ಟಿದವರು. ಭಲೇ, ಭೇಷ್.

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...