Homeಕರ್ನಾಟಕಬಿಜೆಪಿ ದ್ವೇಷ ರಾಜಕಾರಣವನ್ನು ಎಲ್ಲಾ ವಿಪಕ್ಷಗಳು ಒಟ್ಟಾಗಿ ಖಂಡಿಸಬೇಕು: ಸಿದ್ದರಾಮಯ್ಯ

ಬಿಜೆಪಿ ದ್ವೇಷ ರಾಜಕಾರಣವನ್ನು ಎಲ್ಲಾ ವಿಪಕ್ಷಗಳು ಒಟ್ಟಾಗಿ ಖಂಡಿಸಬೇಕು: ಸಿದ್ದರಾಮಯ್ಯ

- Advertisement -
- Advertisement -

’ವಿರೋಧ ಪಕ್ಷಗಳ ಮೇಲೆ ಬಿಜೆಪಿ ನಡೆಸುತ್ತಿರುವ ದ್ವೇಷ ರಾಜಕಾರಣವನ್ನು ಎಲ್ಲಾ ವಿಪಕ್ಷಗಳು ಒಟ್ಟಾಗಿ ಖಂಡಿಸಬೇಕು’ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಕ್ರಮ ಕೈಗೊಂಡಿರುವುದು ಹಾಗೂ ಪಕ್ಷದ ಮುಖಂಡರನ್ನು ಬಂಧಿಸಿರುವ ದೆಹಲಿ ಪೊಲೀಸರ ಕ್ರಮವನ್ನು ವಿರೋಧಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜಭವನ ಚಲೋ ಮತ್ತು ರಾಜಭವನ ಮುತ್ತಿಗೆ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮಾತನಾಡಿದ್ದಾರೆ.

ಮಾತನಾಡಿ, “ಬಿಜೆಪಿ ಸರ್ಕಾರ ತನಿಖೆ ಹೆಸರಿನಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಇದರ ಹಿಂದೆ ದುರುದ್ದೇಶವಿದೆ. ಕಾಂಗ್ರೆಸ್ ಎಂದಿಗೂ ದ್ವೇಷ ರಾಜಕಾರಾಣ ಮಾಡಿಲ್ಲ. ಆದರೆ ಬಿಜೆಪಿ ಅದನ್ನು ಮಾಡುತ್ತಿದೆ. ಸೋನಿಯಾ ಗಾಂಧಿ  ಮತ್ತು ರಾಹುಲ್ ಗಾಂಧಿ ಅವರ ಮೇಲೆ ಸುಳ್ಳು ಕೇಸ್ ಹಾಕಿ, ಅವರ ವರ್ಚಸ್ಸು ಕಡಿಮೆ ಮಾಡಲು ಪ್ರಯತ್ನ ಮಾಡ್ತಿದೆ. ಸತತ ಮೂರು ದಿನಗಳ ಕಾಲ 30 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದಾರೆ. ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳುನ್ನು ಬಳಸಿಕೊಂಡು ಇಂತಹ ಕೆಲಸ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ ಅಪ್‌ಡೇಟ್‌ | ಬಿಜೆಪಿಗರೆ ನೀವು ತುಕ್ಡೆ ಗ್ಯಾಂಗಿನ ನಾಯಕರು: ಸಿದ್ದರಾಮಯ್ಯ ಆಕ್ರೋಶ

“ದೆಹಲಿಯಲ್ಲಿರು ಕಾಂಗ್ರೆಸ್‌ ಪ್ರಧಾನ ಕಚೇರಿಯನ್ನು ಪೊಲೀಸರು ಆಕ್ರಮಿಸಿಕೊಂಡಿದ್ದಾರೆ. ಅಲ್ಲಿಗೆ ಕಾಂಗ್ರೆಸ್ ಶಾಸಕ, ಸಂಸದರನ್ನು, ಮುಖಂಡರನ್ನು ಹೋಗಲು ಬಿಡುತ್ತಿಲ್ಲ. ಹೋದವರ ಮೇಲೆ ಪೊಲೀಸರು ಹಲ್ಲೆ ಮಾಡಲಾಗುತ್ತಿದೆ. ಇಂತಹ ನೀಚ ಕೃತ್ಯಕ್ಕೆ ಬಿಜೆಪಿ ಕೈ ಹಾಕಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಡಿಕೊಳ್ಳುತ್ತಿದೆ” ಎಂದಿದ್ದಾರೆ.

ಮುಂದುವರೆದು “ಸಂವಿಧಾನ ಬದ್ಧವಾಗಿ ನೀಡಲಾಗಿರುವ ಪ್ರತಿಭಟಿಸುವ ಹಕ್ಕನ್ನು ಬಿಜೆಪಿ ಕಿತ್ತುಕೊಳ್ಳುತ್ತಿದೆ. ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇಂತಹದ್ದು ಎಂದೂ ನಡೆದಿರಲಿಲ್ಲ. ಇದಕ್ಕೆ ಅವಕಾಶ ನೀಡಬಾರದು. ಎಲ್ಲಾ ಬಿಜೆಪಿಯೇತರ ಪಕ್ಷಗಳು ಇದನ್ನು ಪ್ರತಿಭಟಿಸಬೇಕು. ಮಮತಾ ಬ್ಯಾನರ್ಜಿ, ಶರದ್ ಪವಾರ್‌, ಸ್ಟಾಲಿನ್, ಕಮ್ಯೂನಿಸ್ಟ್ ಪಾರ್ಟಿ ಸೇರಿದಂತೆ ಎಲ್ಲ ವಿರೋಧ ಪಕ್ಷಗಳು ಇದನ್ನು ಖಂಡಿಸಬೇಕು, ಇದು ದೇಶದ ಮೇಲೆ ನಡೆಯುತ್ತಿರುವ ಪ್ರಹಾರ, ಪ್ರಜಾಪ್ರಭುತ್ವದ ಮೇಲಿನ ಪ್ರಹಾರ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬುಧವಾರ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಗೆ ದೆಹಲಿ ಪೊಲೀಸರು ಬಲವಂತವಾಗಿ ನುಗ್ಗಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದರು. ಒಕ್ಕೂಟ ಸರ್ಕಾರ ತನಿಖಾ ಸಂಸ್ಥೆಗಳನ್ನು, ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ರಾಜಭವನ ಚಲೋಗೆ ಕರೆ ನೀಡಿದ್ದರು.


ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಬಿಜೆಪಿ ವಿರುದ್ಧ ಒಮ್ಮತದ ಅಭ್ಯರ್ಥಿಗೆ ವಿಪಕ್ಷಗಳು ಒಪ್ಪಿಗೆ: ಮಹಾತ್ಮ ಗಾಂಧಿ ಮೊಮ್ಮಗ ಅಭ್ಯರ್ಥಿ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...