Homeಕರ್ನಾಟಕಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ

- Advertisement -
- Advertisement -

ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣೆ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಬ್ಬರೂ ತೆರೆಮರೆಗೆ ಸರಿಯುತ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನಿನ್ನೆ(ಅ.21) ರಾಜರಾಜೇಶ್ವರಿ ನಗರದ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾಗಿಯಾಗಿ, ಅಲ್ಲಿನ ಮಾಜಿ ಕಾರ್ಪೋರೇಟರ್‌ಗಳನ್ನು ಬಿಜೆಪಿಗೆ ಸೇರ್ಪಡೆ ಮಾಡಿದ ಬಳಿಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರನ್ನು ಲೇವಡಿ ಮಾಡಿದ್ದರು.

ಹುಲಿಯಾ ಕಾಡಿಗೆ ಹೋಗಬೇಕಾಗುತ್ತದೆ, ಬಂಡೆ ಛಿಧ್ರವಾಗುತ್ತದೆ ಎಂಬ ಮಾತುಗಳಿಗೆ ವಿರೋಧ ಪಕ್ಷದ ನಾಯಕ ಸಿದ್ದಯಾಮಯ್ಯ ಕಿಡಿಕಾರಿದ್ದು, ಸರಣಿ ಟ್ವೀಟ್‌ಗಳ ಮೂಲಕ ತರಾಟೆ ತೆಗೆದುಕೊಂಡಿದ್ದಾರೆ.

“ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ” ಎಂದು ಟ್ವೀಟ್ ಒಂದರಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಯಡಿಯೂರಪ್ಪ ಪ್ರಶ್ನಾತೀತ ನಾಯಕ – ಸಚಿವ ಸೋಮಣ್ಣ

 

“ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳೀನ್ ಕುಮಾರ್‌‍ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ” ಎಂದು ಕಿಡಿ ಕಾರಿದ್ದಾರೆ.

ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ ಎಂದಿದ್ದಾರೆ.

ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ! ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ

ಮತ್ತೊಂದು ಟ್ವೀಟ್‌ನಲ್ಲಿ ಈ ಹಿಂದೆ ಸಚಿವ ಕೆ.ಈಶ್ವರಪ್ಪ ಹೇಳಿಕೆ ನೀಡಿದ್ದನ್ನು ಉಲ್ಲೇಖಿಸಿ. ’ಬಿಜೆಪಿ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನೂ ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ” ಎಂದು ಲೇವಡಿ ಮಾಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಬಗ್ಗೆ ಬಿಜೆಪಿ ನಾಯಕರೇ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್‌ ಕಟೀಲ್‌ಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ತು ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ” ಎಂದಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಿಎಂ ಸ್ಥಾನದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, “ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ” ಎಂದು ಹೇಳಿದ್ದರು. ಈಗ ಇದು ವಿವಾದಕ್ಕೆ ಕಾರಣವಾಗಿದ್ದು, ಯಡಿಯೂರಪ್ಪ ಕೂಡ ಯತ್ನಾಳ್ ಜೊತೆ ಮಾತನಾಡುವುದಾಗಿ ಹೇಳಿದ್ದರು.


ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...