Homeಮುಖಪುಟಯಡಿಯೂರಪ್ಪನವರೇ ಯತ್ನಾಳ್‌ ಬಾಯಿ ಮುಚ್ಚಿಸಿ, ಇಲ್ಲದಿದ್ದರೆ ಅನಾಹುತ ಕಾದಿದೆ: ಸಿದ್ದರಾಮಯ್ಯ

ಯಡಿಯೂರಪ್ಪನವರೇ ಯತ್ನಾಳ್‌ ಬಾಯಿ ಮುಚ್ಚಿಸಿ, ಇಲ್ಲದಿದ್ದರೆ ಅನಾಹುತ ಕಾದಿದೆ: ಸಿದ್ದರಾಮಯ್ಯ

- Advertisement -
- Advertisement -

ಸ್ವಾತಂತ್ರ್ಯ ಸೇನಾನಿ ಎಚ್‌.ಎಸ್‌ ದೊರೆಸ್ವಾಮಿಯವರ ವಿರುದ್ಧ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನೀಡಿರುವ ಕೀಳು ಮಟ್ಟದ ಹೇಳಿಕೆಯನ್ನು ಖಂಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ,  ಯಡಿಯೂರಪ್ಪನವರೇ ಯತ್ನಾಳ್‌ ಬಾಯಿ ಮುಚ್ಚಿಸಿ, ಇಲ್ಲದಿದ್ದರೆ ಅನಾಹುತ ಕಾದಿದೆ ಎಂದು ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಹಿರಿಯ ಸ್ವಾತಂತ್ರ್ಯ‌ಹೋರಾಟಗಾರರಾದ ಎಚ್. ಎಸ್. ದೊರೆಸ್ವಾಮಿ ಅವರನ್ನು ನಿಂದಿಸಿ ಅತ್ಯಂತ‌ ಕೀಳಾಗಿ ಮಾತನಾಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮಕೈಗೊಂಡು ಬಾಯಿ ಮುಚ್ಚಿಸಿ, ಇಲ್ಲವಾದರೆ ಅವರ ಅಭಿಪ್ರಾಯ ನಿಮ್ಮ ಸರ್ಕಾರದ ಅಭಿಪ್ರಾಯ ಎಂದು ಒಪ್ಪಿಕೊಳ್ಳಿ ಎಂದು ಟೀಕಿಸಿದ್ದಾರೆ.

ಯಡಿಯೂರಪ್ಪನವರೇ, ಕೈ ಮೀರಿ ಹೋಗುವ ಮುನ್ನ ಎಚ್ಚೆತ್ತುಕೊಳ್ಳಿ. ದೆಹಲಿ ಗಲಭೆ ಕಣ್ಣ ಮುಂದಿದೆ. ಒಬ್ಬರಾದ ಮೇಲೆ ಒಬ್ಬರಂತೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ರಾಜ್ಯದ ಬಿಜೆಪಿ ನಾಯಕರ ನಾಲಗೆಗೆ ತಕ್ಷಣ ಕಡಿವಾಣ ಹಾಕದಿದ್ದರೆ ಅನಾಹುತ ಕಾದಿದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.


ಇದನ್ನೂ ಓದಿ: ದೊರೆಸ್ವಾಮಿ ಒಬ್ಬ ನಕಲಿ ಸ್ವಾತಂತ್ರ್ಯ ಹೋರಾಟಗಾರ, ಪಾಕಿಸ್ತಾನದ ಏಜೆಂಟ್‌ ಎಂದು ಶತಾಯುಷಿಗೆ ಅವಮಾನ ಮಾಡಿದ ಶಾಸಕ ಯತ್ನಾಳ್‌


ದೊರೆಸ್ವಾಮಿ ಒಬ್ಬ ನಕಲಿ ಸ್ವಾತಂತ್ರ್ಯ ಹೋರಾಟಗಾರ, ಎಲ್ಲಿದ್ದಾನೆ ಆ ಮುತ್ಯಾ? ಪಾಕಿಸ್ತಾನದ ಏಜೆಂಟ್‌ ಎಂದು ಬಿಜೆಪಿಯ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಇಂದು ಬೆಳಿಗ್ಗೆ ತಮ್ಮ ನಾಲಿಗೆ ಹರಿಯಬಿಟ್ಟಿದ್ದಾರೆ. ಆ ಮೂಲಕ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಅಗೌರವ ಸೂಚಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...