Homeಕರ್ನಾಟಕಸದನದಲ್ಲಿಂದು ಗುಡುಗಿದ ಸಿದ್ದರಾಮಯ್ಯನವರ ಸಂಪೂರ್ಣ ಭಾಷಣ ಇಲ್ಲಿದೆ...

ಸದನದಲ್ಲಿಂದು ಗುಡುಗಿದ ಸಿದ್ದರಾಮಯ್ಯನವರ ಸಂಪೂರ್ಣ ಭಾಷಣ ಇಲ್ಲಿದೆ…

- Advertisement -
- Advertisement -

ಕರ್ನಾಟಕದ ಮತಪ್ರಮಾಣದ ಪ್ರಕಾರ ಮತದಾರರು ನಮಗೆ ಬಹುಮತ ಕೊಟ್ಟಿದ್ದರು. ನಮ್ಮೆರಡು ಪಕ್ಷಗಳ ಒಟ್ಟು ಮತಪ್ರಮಾಣ ಶೇಕಡಾ 54.44. ಇದರ ಆಧಾರದಲ್ಲಿಯೇ ನಾವು ಸರ್ಕಾರ ರಚಿಸಿದ್ದು. ಈ ಹಿಂದೆಯೂ ಕರ್ನಾಟಕದಲ್ಲಿ ಹಲವು ಬಾರಿ ಸಮ್ಮಿಶ್ರ ಸರ್ಕಾರಗಳು ರಚನೆಯಾಗಿ, ಆಡಳಿತ ನಡೆಸಿವೆ. ಇದೇನು ಮೊದಲ ಬಾರಿ ರಚನೆಯಾಗುತ್ತಿರುವುದಲ್ಲ.

2018ರ ಚುನಾವಣೆಯಲ್ಲಿ ಬಿಜೆಪಿಗೆ ಸಂಖ್ಯೆ ಇಲ್ಲವೇ ಮತಪ್ರಮಾಣದಲ್ಲಿ ಬಹುಮತ ಇರಲಿಲ್ಲ. ಅವರಿಗೆ ಕೇವಕ ಶೇ.36.34% ರಷ್ಟು ಮತಪ್ರಮಾಣ ಸಿಕ್ಕಿದೆ. ಹೀಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದು ತಮ್ಮ ಬಲದ ಮೇಲಿನ ವಿಶ್ವಾಸದಿಂದ ಅಲ್ಲ. ಆಪರೇಷನ್ ಕಮಲದ ಮೇಲಿನ ವಿಶ್ವಾಸದಿಂದ. 15 ದಿನ ಕಾಲಾವಕಾಶ ಸಿಕ್ಕಿದ್ದರೆ ಈಗಿನದ್ದನ್ನು ಆಗಲೇ ಮಾಡಿಬಿಡುತ್ತಿದ್ದರು. ಈ ಹೊಲಸು ರಾಜಕೀಯ ಬೆಳವಣಿಗೆಗಳ ಹಿಂದೆ ಬಿಜೆಪಿ ಪಕ್ಷ ಇದೆ ಎಂಬುದು ಅತ್ಯಂತ ಸ್ಪಷ್ಟವಾಗಿ ಕಾಣಿಸುತ್ತಿದೆ. ರಾಜ್ಯದ ಮತದಾರರು ಮೂರ್ಖರಲ್ಲ. ಇದಕ್ಕೆ ಮುಂದಿನ ಚುನಾವಣೆಗಳು ತಕ್ಕ ಪಾಠ ಕಲಿಸಲಿವೆ.

ಅಧಿಕಾರದಾಸೆಗೆ ಶಾಸಕರನ್ನು ಖರೀದಿಸಿ, ಇದ್ದ ಸರ್ಕಾರವನ್ನು ಅಸ್ಥಿರಗೊಳಿಸಿ ಜನರ ಆಶಯಗಳಿಗೆ ವಿರುದ್ಧವಾಗಿ ಸರ್ಕಾರ ರಚಿಸುವುದು ಎಷ್ಟು ಸರಿ?

ಜನಸೇವೆಯ ಉದ್ದೇಶದಿಂದ ರಾಜಕಾರಣಕ್ಕೆ ಬಂದಿದ್ದೇವೆ. ಇದು ನಮಗೆ ವೃತ್ತಿಯಲ್ಲ, ಪ್ರವೃತ್ತಿ. ಇಲ್ಲಿಗೆ ಬಂದ ನಂತರ ಒಂದು ಸಿದ್ದಾಂತವಿಲ್ಲದೇ ಹೋದರೆ ಬಂದದ್ದು ವ್ಯರ್ಥವಾಗುತ್ತದೆ. ನಾನು ಸಂವಿಧಾನದಲ್ಲಿ ನಂಬಿಕೆಯಿಟ್ಟವನು. ದೇಶದ ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ಸಂವಿಧಾನದ ಉದ್ದೇಶ. ಸಾಮಾಜಿಕ ನ್ಯಾಯ, ಸಮಾನ ಅವಕಾಶ ಇವು ನನ್ನ ಆಶಯಗಳು ಕೂಡ. ಅಧಿಕಾರ ಯಾರೂ ಬೇಕಾದರೂ ಮಾಡಬಹುದು, ಸರ್ಕಾರ ಯಾವುದು ಬೇಕಾದರೂ ಬರಬಹುದು. ಯಾರೂ ಇಲ್ಲಿ ಶಾಶ್ವತರಲ್ಲ. ಆದರೆ ಪಕ್ಷಾಂತರ ಎಂಬ ಪ್ರಜಾಪ್ರಭುತ್ವಕ್ಕಂಟಿದ ರೋಗದ ಬಗ್ಗೆ ಇಂದು ಚರ್ಚೆಯಾಗಬೇಕಿದೆ. ಇದರ ಬಗ್ಗೆ ಜನರನ್ನು ಎಚ್ಚರಿಸಬೇಕು. ಬಿಜೆಪಿ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಬಿಜೆಪಿಯ ಈ ನಡೆ ನಾಚಿಕೆಗೇಡಿನ ಸಂಗತಿಯಲ್ಲವೇ?

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ104 ಸ್ಥಾನ ಪಡೆದಿದ್ದ ಕಾರಣದಿಂದ ರಾಜ್ಯಪಾಲರು ಯಡಿಯೂರಪ್ಪನವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು, ಜೊತೆಗೆ ಹದಿನೈದು ದಿನಗಳ ಕಾಲಾವಕಾಶ ಸಹ ನೀಡಿದ್ದರು. ಬಹುಮತ ಸಾಬೀತುಪಡಿಸುವಲ್ಲಿ ಅವರು ವಿಫಲರಾದ ನಂತರವೇ ನಾವು ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದು. ಹಾಗಾಗಿ ಇದೇನು ಜನಾಭಿಪ್ರಾಯದ ವಿರುದ್ಧವಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಹೆಚ್ಚು ಸ್ಥಾನ ಪಡೆಯದಿದ್ದರೂ ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡಲಿಲ್ಲವೇ? ಕರ್ನಾಟಕದಲ್ಲಿ ನಮ್ಮದು ಅಪವಿತ್ರ ಮೈತ್ರಿಯಾದರೇ, ಗೋವಾದಲ್ಲಿ ಬಿಜೆಪಿ ಸಮ್ಮಿಶ್ರ ಸರ್ಕಾರ ರಚಿಸಿರುವುದು ಅಪವಿತ್ರ ಮೈತ್ರಿಯಲ್ಲವೇ?

ತಮಿಳುನಾಡಲ್ಲಿ ಪಳನಿಸ್ವಾಮಿಯವರ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಾಸ್ಸು ಪಡೆಯುತ್ತೇವೆ ಎಂದು ಕೆಲವು ಶಾಸಕರು ರಾಜ್ಯಪಾಲರಿಗೆ ಪತ್ರ ನೀಡಿದ್ದರು. ಅಲ್ಲಿ ವಿಪ್ ಸಹ ನೀಡದೆ ಆ ಶಾಸಕರನ್ನು ಅನರ್ಹಗೊಳಿಸಲಾಗಿದೆ. ಯಾವುದೇ ಶಾಸಕ ಪಕ್ಷದ ನಿಯಮಗಳಿಗೆ ವಿರುದ್ಧವಾಗಿ ವರ್ತಿಸಿದರೆ ತಕ್ಷಣ ಅವರನ್ನು ವಜಾ ಮಾಡುವ ಅಧಿಕಾರವಿದೆ. ಇಂದು ಚರ್ಚೆಯಾಗಬೇಕಿರುವ ಮುಖ್ಯ ವಿಚಾರ ಶಾಸಕರ ಪಕ್ಷಾಂತರದ್ದು. ಇದೇ ರೀತಿಯ ಕೀಳು ಮನೋಭಾವ ಮುಂದುವರೆದರೆ ಯಾವ ಸರ್ಕಾರ ಕೂಡ ಸ್ಥಿರವಾಗಿ ನಿಲ್ಲಲಾರದು. ಬಿಜೆಪಿಯವರು ನಮ್ಮ ಶಾಸಕರನ್ನು ಸಾರಾಸಗಟಾಗಿ ಖರೀದಿ ಮಾಡಿದ್ದಾರೆ.‌ ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಬೆಳವಣಿಗೆ. ಇದನ್ನು ರಾಜ್ಯದ ಜನ ಒಪ್ಪುತ್ತಾರೆಯೇ?

ಇಷ್ಟೆಲ್ಲಾ ನಾಟಕ ಮಾಡಿ, ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿದರೂ ಯಡಿಯೂರಪ್ಪನವರು ವರ್ಷಕ್ಕಿಂತ ಹೆಚ್ಚು ಕಾಲ ಅಧಿಕಾರ ನಡೆಸಲು ಆಗುವುದಿಲ್ಲ. 2008ರಲ್ಲೂ ಇದೇ ಪರಿಸ್ಥಿತಿಯನ್ನು ಅವರು ಎದುರಿಸಿದ್ದಾರೆ. ರೇಣುಕಾಚಾರ್ಯ, ಗೂಳಿಹಟ್ಟಿ ಶೇಖರ್ ಇವರೆಲ್ಲ ಅಂದು ಯಡಿಯೂರಪ್ಪನವರ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದವರಲ್ಲವೇ? ಇಂದಿನ ಹದಗೆಟ್ಟ ರಾಜಕೀಯ ಪರಿಸ್ಥಿತಿಗೂ ನಮಗೂ ಸಂಬಂಧವೇ ಇಲ್ಲ ಎಂದು ಬಿಜೆಪಿಯವರು ನಾಟಕ ಮಾಡುತ್ತಿದ್ದಾರೆ. ಇದೊಂದು ರೀತಿ ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಪ್ರಪಂಚಕ್ಕೆ ತಿಳಿಯದು ಎಂಬಂತಿದೆ. ಮುಂದೆ ಬಿಜೆಪಿ ಸರ್ಕಾರ ಬಂದು ಈಗ ಪಕ್ಷಾಂತರ ಮಾಡಿದವರೆಲ್ಲ ಬಿಜೆಪಿಯಲ್ಲಿ ಮಂತ್ರಿಗಳಾದರೆ ಜಗತ್ತಿಗೆ ಇವರ ಕುತಂತ್ರ ತಿಳಿಯುವುದಿಲ್ಲವೇ?

ಕರ್ನಾಟಕಕ್ಕೆ ತನ್ನದೇ ಆದ ಇತಿಹಾಸವಿದೆ. ಹಲವು ಜನಪರ ಹೋರಾಟಗಳನ್ನು ಕಂಡ ನೆಲವಿದು. ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರುವಾಸಿ ರಾಜ್ಯ ನಮ್ಮದು. ಇಂತಹ ಪುಣ್ಯಭೂಮಿಯಲ್ಲಿ ಇಂದು ಎದುರಾಗಿರುವ ಸನ್ನಿವೇಶ ಎಲ್ಲರೂ ತಲೆತಗ್ಗಿಸುವಂತೆ ಮಾಡಿದೆ. ಪ್ರಜಾಪ್ರಭುತ್ವ, ಸಿದ್ದಾಂತ ಗೊತ್ತಿಲ್ಲದವರೆಲ್ಲ ರಾಜಕಾರಣಕ್ಕೆ ಬಂದಿರುವುದೇ ಈ ಪರಿಸ್ಥಿತಿಗೆ ಕಾರಣ. ಹಿಂದೆ ದೇವದುರ್ಗದಲ್ಲಿ ಮಾತನಾಡಿದ್ದ ಆಡಿಯೋ ಟೇಪ್‌ನಲ್ಲಿದ್ದ ಧ್ವನಿ ನನ್ನದೇ ಎಂದು ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಇದೇ ತರ ಎಷ್ಟೋ ಆಡಿಯೋಗಳು ಹೊರಬಂದಿವೆ, ಬಂಡಾಯ ಶಾಸಕರಿಗೆ ವಿಮಾನ ವ್ಯವಸ್ಥೆ ಮಾಡಿಕೊಡೋದು, ಪಂಚತಾರಾ ಹೋಟೆಲುಗಳಲ್ಲಿ ವಾಸ್ತವ್ಯದ ವ್ಯವಸ್ಥೆ, ಪೊಲೀಸ್ ಬೆಂಗಾವಲು ಇವೆಲ್ಲ ಬಿಜೆಪಿಯವರು ಮಾಡಿಕೊಟ್ಟಿದ್ದಲ್ಲವೇ?

ಹಾಗಾದರೆ ಮಹಾರಾಷ್ಟ್ರದಲ್ಲಿ ಯಾವ ಸರ್ಕಾರವಿದೆ? ಹದಿನೈದು ಜನ ಪಕ್ಷಾಂತರ ಶಾಸಕರನ್ನು ಕಾಯಲು ಸಾವಿರಾರು ಜನರನ್ನು ಬಿಟ್ಟಿದ್ದಾರಲ್ಲ ಇದು ಪ್ರಜಾಪ್ರಭುತ್ವ ವ್ಯವಸ್ಥೆಯೇ? ನಾವು ನಮ್ಮ ಪಕ್ಷದ ಶಾಸಕರ ಬಳಿಯೇ ಮಾತನಾಡುವಂತಿಲ್ಲ, ಇಂದು ಇಂದಿನ ರಾಜಕಾರಣದ ವಾಸ್ತವ ಪರಿಸ್ಥಿತಿ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...