Homeಕರ್ನಾಟಕಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ

ಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ

"ಬಿಜೆಪಿಯವರಿಗೆ ಜಾತಿ ಭೇದ,‌ ಧರ್ಮಭೇದದಲ್ಲಿ ನಂಬಿಕೆ ಹೆಚ್ಚು. ಹೀಗಾಗಿಯೇ ಇಂಥ ಕಾಯಿದೆಗಳ ಜಾರಿಗೆ ಮುಂದಾಗಿದೆ"

- Advertisement -
- Advertisement -

ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಮತಾಂತರ ನಿಷೇಧ ಕಾಯಿದೆ ಹಿಂದೆ ಜನರ ಹಿತ ಇಲ್ಲ. ದೇಶದ ಕೋಮುಸೌಹಾರ್ದತೆ ಹಾಳುಗೆಡವುವುದೇ ಇದರ ದುರುದ್ದೇಶ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರದ ತೀರ್ಮಾನ ವಿರೋಧಿಸಿ ಭಾರತೀಯ ಕ್ರೈಸ್ತ ಒಕ್ಕೂಟ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.

’ಬಲಾತ್ಕಾರದ ಮತಾಂತರ‌ ಈಗಲೂ ಶಿಕ್ಷಾರ್ಹ ಅಪರಾಧವಾಗಿರುವಾಗ ಹೊಸ ಕಾಯ್ದೆಯನ್ನು ರಚಿಸುವುದು ಯಾವ ಉದ್ದೇಶಕ್ಕೆ ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರ ವಿರುದ್ಧ ಇತರರನ್ನು ಎತ್ತಿಕಟ್ಟುವ ದುರುದ್ದೇಶದಿಂದಲೇ ಬಿಜೆಪಿ ಈ ಕಾಯ್ದೆ ತರಲು ಹೊರಟಿದೆ’ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷ ಜಾತಿ-ಧರ್ಮದ ಭೇದವಿಲ್ಲದೆ ಕ್ರಿಶ್ಚಿಯನರು ಸೇರಿದಂತೆ ಎಲ್ಲ ಸಮುದಾಯಗಳ ಜೊತೆಗಿರುತ್ತದೆ. ಯಾವ ಸಮುದಾಯದವರಿಗೂ ತೊಂದರೆಯಾಗಲು ಅವಕಾಶ ನೀಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕ್ಷಮೆ ಕೇಳಿದ ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌

’ಸಂವಿಧಾನದ ಪ್ರಕಾರ ದೇಶದ ಪ್ರಜೆ ತನ್ನ ಆಸಕ್ತಿ ಹಾಗೂ ಇಚ್ಚೆಗೆ ಸೂಕ್ತವಾದ ಧರ್ಮವನ್ನು ಆರಿಸಿಕೊಳ್ಳುವ, ಪಾಲಿಸುವ ಮತ್ತು ಆಚರಿಸುವ ಹಕ್ಕು ಇದೆ. ಇದಕ್ಕೆ ವಿರುದ್ಧವಾಗಿ ಕಾಯಿದೆ ತರುವುದು ಸಂವಿಧಾನಬಾಹಿರ. ಬಹುಮತ ಇದೆ ಎನ್ನುವ ಕಾರಣಕ್ಕೆ ಸಂವಿಧಾನದ ಮೇಲೆ ಸವಾರಿ ಮಾಡುವ ಹಾಗೂ ತನಗೆ ಬೇಕಾದ ಕಾಯಿದೆಗಳನ್ನು ಜಾರಿಗೆ ತರುವ ದುಸ್ಸಾಹಸಕ್ಕೆ ಸರ್ಕಾರ ಕೈ ಹಾಕಬಾರದು. ಅಂತಹ ನಡೆಯನ್ನು ನಾವು ಸದನದ ಒಳಗೆ ಮತ್ತು ಹೊರಗೆ ವಿರೋಧಿಸುತ್ತೇವೆ’ ಎಂದಿದ್ದಾರೆ.

’ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ. ಅವರು ನಡೆಸುವ ಶಾಲೆ, ಕಾಲೇಜು, ಆಸ್ಪತ್ರೆಗಳಿಗೆ ಒಂದು ಸಮುದಾಯದವರು ಮಾತ್ರ ಹೋಗುವುದಿಲ್ಲ. ಹೋಗುವ ಎಲ್ಲರೂ ಮತಾಂತರ ಆಗಿಲ್ಲ. ಅದಕ್ಕಾಗಿ ಬಲವಂತವೂ ನಡೆಯುತ್ತಿಲ್ಲ’ ಎಂದು ತಿಳಿಸಿದ್ದಾರೆ.

’ಯಾವುದೋ ಒಂದು ಧರ್ಮವನ್ನು ಆಧಾರವಾಗಿಟ್ಟುಕೊಂಡು ಸಂವಿಧಾನ ರಚನೆ ಮಾಡಿಲ್ಲ. ಸಂವಿಧಾನದಿಂದ ಒಳ್ಳೆಯದಾಗಬೇಕಾದರೆ ಆಡಳಿತ ಒಳ್ಳೆಯವರ ಕೈಯ್ಯಲ್ಲೇ ಇರಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದ್ದರು’ ಎಂದು ಉಲ್ಲೇಖಿಸಿದ್ದಾರೆ.

“ಬಿಜೆಪಿಯವರಿಗೆ ಜಾತಿ ಭೇದ,‌ ಧರ್ಮಭೇದದಲ್ಲಿ ನಂಬಿಕೆ ಹೆಚ್ಚು. ಹೀಗಾಗಿಯೇ ಇಂಥ ಕಾಯಿದೆಗಳ ಜಾರಿಗೆ ಮುಂದಾಗಿದೆ. ಇದರಲ್ಲಿ ಆರ್‌ಎಸ್‌ಎಸ್‌ನ ಹುನ್ನಾರವೂ ಅಡಗಿದೆ. “ದಯೆಯೇ ಧರ್ಮದ ಮೂಲ” ಎಂದು ಬಸವಣ್ಣ ಅವರು ಹೇಳಿದ್ದರು. ಆದರೆ, ಅದಕ್ಕೆ ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ. ರಾಜ್ಯದಲ್ಲಿ ಚರ್ಚ್‌ಗಳ ಮೇಲೆ ದಾಳಿಯಾಗುತ್ತಿದೆ. ನಮ್ಮ ಸರ್ಕಾರ ಇದ್ದಾಗ ಅದಕ್ಕೆ ಅವಕಾಶ ಕೊಟ್ಟಿರಲಿಲ್ಲ” ಎಂದು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಶಾಸಕರಾದ ರಾಜೇಗೌಡ, ವಿಜಯಸಿಂಗ್, ಪ್ರಕಾಶ್ ರಾಥೋಡ್, ಭಾರತೀಯ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಡಾ. ಸಜ್ಜನ್ ಜಾರ್ಜ್ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಉನ್ನತ ಶಿಕ್ಷಣದಲ್ಲಿ ಕನ್ನಡ ಕಡ್ಡಾಯಗೊಳಿಸಲು ಒತ್ತಾಯಿಸಬೇಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...