Homeಕರ್ನಾಟಕರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು- ಸಿದ್ದರಾಮಯ್ಯ

ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು- ಸಿದ್ದರಾಮಯ್ಯ

'ತೇಜಸ್ವಿಯವರಿಗೆ ಮೀನು ಹಿಡಿಯುವ ಹವ್ಯಾಸವಿತ್ತು. ಮೀನು ಸಿಕ್ಕಲಿ, ಸಿಗದಿರಲಿ ಗಂಟೆಗಟ್ಟಲೆ ಕೂತಲ್ಲೇ ಕೂತಿರುತ್ತಿದ್ದರು. ಅವರ ಜೊತೆ ಒಂದೆರಡು ಬಾರಿ ನಾನೂ ಮೀನು ಹಿಡಿಯಲು ಹೋಗಿದ್ದೆ’

- Advertisement -
- Advertisement -

“ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯವೂ ಇರಲಿಲ್ಲ. ಆದರೆ ಅವರಿಗೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು. ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತೇಜಸ್ವಿಯವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ತೇಜಸ್ವಿಯವರೊಂದಿಗಿನ ಒಡನಾಟದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ತೇಜಸ್ವಿಯವರನ್ನು ನೆನಪು ಮಾಡಿಕೊಳ್ಳುವ ಇಂಥದ್ದೊಂದು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕಾಗಿ ಬಿ.ಎಲ್ ಶಂಕರ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

“ನಾನು ವಿದ್ಯಾರ್ಥಿಯಾಗಿದ್ದಾಗ ತೇಜಸ್ವಿಯವರ ಪರಿಚಯವಿರಲಿಲ್ಲ. ಅವರು ವಾರಕ್ಕೊಮ್ಮೆ ಮೈಸೂರಿನ ತಮ್ಮ ಆಪ್ತಸ್ನೇಹಿತ ಕೆ. ರಾಮದಾಸ್ ಎನ್ನುವವರ ಮನೆಗೆ ಬರುತ್ತಿದ್ದರು. ಹಲವು ಬಾರಿ ನಾನು ಕೂಡ ರಾಮದಾಸ್ ಮನೆಗೆ ಹೋಗಿದ್ದೆ, ಅಲ್ಲಿ ನನಗೆ ತೇಜಸ್ವಿಯವರು ಪರಿಚಯವಾಗಿ ನಮ್ಮ‌ ನಡುವೆ ಆತ್ಮೀಯತೆ ಬೆಳೆಯಿತು” ಎಂದಿದ್ದಾರೆ.

“ತೇಜಸ್ವಿಯವರು ಹಲವು ಬಾರಿ ತಮ್ಮ ಫಾರ್ಮ್ ಹೌಸ್‌ಗೆ ಬರುವಂತೆ ನನಗೆ ಆಹ್ವಾನ ನೀಡಿದ್ದರು. ಆದರೆ ಒಮ್ಮೆ ಮಾತ್ರ ಹೋಗಲು ಸಾಧ್ಯವಾಯಿತು. ಒಂದು ಇಡೀ ದಿನ ಅವರ ತೋಟದ ಮನೆಯಲ್ಲಿಯೇ ಮಾತನಾಡುತ್ತಾ ಕಳೆದಿದ್ದೆ. ತೇಜಸ್ವಿಯವರು ಒಬ್ಬ ಸಾಹಿತಿಯಷ್ಟೇ ಅಲ್ಲ, ಮಹಾನ್ ಪರಿಸರ ಪ್ರೇಮಿ ಜೊತೆಗೆ ಉತ್ತಮ ಛಾಯಾಗ್ರಾಹಕರಾಗಿದ್ದರು. ಅವರಿಗೆ ಮೀನು ಹಿಡಿಯುವ ಹವ್ಯಾಸವಿತ್ತು. ಮೀನು ಸಿಕ್ಕಲಿ, ಸಿಗದಿರಲಿ ಗಂಟೆಗಟ್ಟಲೆ ಕೂತಲ್ಲೇ ಕೂತಿರುತ್ತಿದ್ದರು. ಅವರ ಜೊತೆ ಒಂದೆರಡು ಬಾರಿ ನಾನೂ ಮೀನು ಹಿಡಿಯಲು ಹೋಗಿದ್ದೆ” ಎಂದು ಅವರ ಜೊತೆಗೆ ಕಳೆದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

“ಪ್ರಕೃತಿಯನ್ನು ತೇಜಸ್ವಿಯವರಷ್ಟು ಪ್ರೀತಿಸಿದವರನ್ನು ನಾನು ನೋಡಿಯೇ ಇಲ್ಲ. ನಾನೂ ಒಬ್ಬ ಸಸ್ಯಶಾಸ್ತ್ರದ ವಿದ್ಯಾರ್ಥಿ. ಬಾಟನಿ ಯಲ್ಲಿ ಎಂ.ಎಸ್ಸಿ ಸೀಟ್ ಸಿಗದ ಕಾರಣ ಮುಂದೆ ನಾನು ಕಾನೂನು ಪದವಿ ಓದಿ, ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದೆ. ನನಗೆ ಪ್ರೋ. ನಂಜುಂಡಸ್ವಾಮಿ ಅವರ ಪರಿಚಯವಾಗದೆ ಇದ್ದಿದ್ದರೆ ಬಹುಶಃ ನಾನು ರಾಜಕಾರಣಕ್ಕೂ ಬರುತ್ತಾ ಇರಲಿಲ್ಲ. ತೇಜಸ್ವಿಯವರು ಕನ್ನಡ ಎಂ.ಎ ಓದಿ ಬರವಣಿಗೆ, ಛಾಯಾಗ್ರಹಣ, ಪರಿಸರದ ಬಗ್ಗೆ ಅರಿಯುವ ಕೆಲಸ ಮಾಡಿದರು” ಎಂದಿದ್ದಾರೆ.

’ತೇಜಸ್ವಿಯವರು ಎಂದಿಗೂ ತಾನು ಕುವೆಂಪು ಮಗ ಎಂದು ಹೇಳಿ ಅದರಿಂದ ಲಾಭ ಪಡೆಯುವ ಪ್ರಯತ್ನ ಮಾಡಲೇ ಇಲ್ಲ. ಅವರ ವಿಭಿನ್ನ ಯೋಚನಾ ಶೈಲಿಯೇ ಅವರ ಹೆಗ್ಗುರುತಾಗಿತ್ತು. ಪ್ರಕೃತಿ, ಪರಿಸರದ ಬಗ್ಗೆ ಹಲವು ಲೇಖನ ಬರೆದಿದ್ದಾರೆ. ಪರಿಸರ ಪ್ರೇಮಿಗಳಿಗೆ ಇಂದಿಗೂ ತೇಜಸ್ವಿಯವರು ಸ್ಪೂರ್ತಿಯ ಸೆಲೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶವನ್ನು ಕೂಡಲೇ ವಾಪಸ್ ಪಡೆಯಿರಿ: ಸಿದ್ದರಾಮಯ್ಯ ಆಗ್ರಹ

’ರಾಜಕಾರಣದ ಬಗ್ಗೆ ತೇಜಸ್ವಿಯವರು ಹೆಚ್ಚು ಚರ್ಚೆ ಮಾಡುತ್ತಿರಲಿಲ್ಲ. ರಾಜಕಾರಣಿಗಳ ಬಗ್ಗೆ ಅವರಿಗೆ ಒಳ್ಳೆಯ ಅಭಿಪ್ರಾಯವೂ ಇರಲಿಲ್ಲ. ಆದರೆ ಅವರಿಗೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು.
ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ. ಹಾಗಾಗಿ ಅವರನ್ನು ಈ ಒಂದು ದಿನ ಮಾತ್ರವಲ್ಲ ನಿತ್ಯವೂ ನೆನೆಯುತ್ತೇನೆ” ಎಂದಿದ್ದಾರೆ.

’ಪ್ರತೀ ಸೋಮವಾರ ಸಂಜೆ 5 ರಿಂದ 8 ಗಂಟೆ ವರೆಗೆ ತೇಜಸ್ವಿಯವರು, ರಾಮದಾಸ್ ಸೇರಿದಂತೆ ನಾವೆಲ್ಲ ಮೈಸೂರಿನ ಹೊಟೇಲ್ ಒಂದರಲ್ಲಿ ಸೇರುತ್ತಿದ್ದೆವು. ಆಗ ಬರೀ ರಾಜಕೀಯ ವಿಚಾರಗಳಷ್ಟೇ ಅಲ್ಲ ಬದುಕಿಗೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆವು’ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ.

’ಎಲ್ಲರೂ ತೇಜಸ್ವಿಯವರಾಗಲು ಸಾಧ್ಯವಿಲ್ಲದಿದ್ದರೂ ಕನಿಷ್ಟ ಪರಿಸರವನ್ನಾದರೂ ಪ್ರೀತಿಸಬಹುದು. ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವ ಮೂಲಕ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕು. ಪರಿಸರ ರಕ್ಷಣೆಗೆ ತೇಜಸ್ವಿಯವರ ಬದುಕು, ಬರಹ, ಜೀವನ ನಮಗೆ ಪ್ರೇರಣೆಯಾಗಲಿ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಇದನ್ನೂ ಓದಿ: ಮಹಿಳಾ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿದ್ದರೂ ಸಾಂತ್ವನ ಕೇಂದ್ರ ಸ್ಥಗಿತಕ್ಕೆ ಸರ್ಕಾರ ನಿರ್ಧಾರ- ಸಿದ್ದರಾಮಯ್ಯ ಕಿಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...