ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕೋವಿಡ್ ಪಾಸಿಟಿವ್ ಆಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
— Siddaramaiah (@siddaramaiah) August 4, 2020
ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಗೃಹಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಸಿದ್ದರಾಮಯ್ಯ ಚೇತರಿಕೆಗೆ ಹಾರೈಸಿದ್ದಾರೆ.
ಪ್ರಸ್ತುತ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಇಬ್ಬರೂ ಒಂದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಜನಪ್ರತಿನಿಧಿಗಳು ತಮಗೆ ಕೊರೊನಾ ತಗುಲಿದಾಗ ಖಾಸಗಿ ಆಸ್ಪತ್ರೆಗೆ ಸೇರುವುದು ಏಕೆ? ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ ಅಲ್ಲಿನ ಮೂಲಭೂತ ಸೌಲಭ್ಯಗಳು ಹೆಚ್ಚಿ ಜನರಿಗೆ ಹೆಚ್ಚಿನ ನಂಬಿಕೆ ಬರುವುದಿಲ್ಲವೇ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾಗಿದೆ.
ಇದನ್ನೂ ಓದಿ: ಗೃಹ ಸಚಿವರು ಏಮ್ಸ್‌ನಲ್ಲಿ ಯಾಕೆ ದಾಖಲಾಗಿಲ್ಲ: ಕಾಂಗ್ರೆಸ್ ಸಂಸದ ಶಶಿ ತರೂರ್
ಇದನ್ನೂ ಓದಿ: ಕೋವಿಡ್ ಸೋಂಕಿತ ಬಹುತೇಕ ರಾಜಕಾರಣಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ! ಏಕೆ?


