ರಾಹುಲ್‌, ಸೋನಿಯಾಗೆ ಕೃತಜ್ಞತೆ ತಿಳಿಸಿದೆ ಸಿದ್ದರಾಮಯ್ಯ…

ಕಾಂಗ್ರೆಸ್ ಪಕ್ಷದ ನಾಯಕನನ್ನಾಗಿ ಮತ್ತು ಕರ್ನಾಟಕ ವಿಧಾನಸಭೆಯ ವಿರೋಧಪಕ್ಷದ ನಾಯಕನನ್ನಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್‌ನ ಹಲವಾರು ನಾಯಕರು, ಶಾಸಕರು, ಸಂಸದರು ಸಿದ್ದರಾಮಯ್ಯನವರಗೆ ಅಭಿನಂದನೆ ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕನಾಗಿ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕನಾಗಿ ನೇಮಕ ಮಾಡಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ‌ ಮತ್ತು ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರಿಗೆ ಚಿರ‌ಋಣಿಯಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ‌ ಸ್ಥಾನದಿಂದ ನಿರ್ಗಮಿಸಿದ್ದೇನೆ. ಈ ಜವಾಬ್ದಾರಿ ಕೊಟ್ಟು ಕೆಲಸ ಮಾಡಲು ಅವಕಾಶ ನೀಡಿದ್ದ ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷರಾಗಿರುವ ಸೋನಿಯಾಗಾಂಧಿ‌ ಅವರಿಗೆ ಆಭಾರಿಯಾಗಿದ್ದೇನೆ ಎಂದು ಸಹ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದರೂ ಸಹ ಹೈಕಮಾಂಡ್ ಸ್ವಲ್ಪ ಆತಂಕ ಹುಟ್ಟಿಸಿತ್ತು. ಕಾಂಗ್ರೆಸ್‌ನ ಒಳಗೆಯೇ ಹಲವರು ಸಿದ್ದರಾಮಯ್ಯ ವಿರುದ್ಧ ಅಪಸ್ವರ ಎತ್ತಿದ್ದರು. ಹಾಗಾಗಿ ಪಕ್ಷದಲ್ಲಿ ಗೊಂದಲ ಉಂಟಾಗಿತ್ತು. ಆದರೆ ಗೊಂದಲಕ್ಕೆ ತೆರೆ ಎಳೆದ ಹೈಕಮಾಂಡ್ ಅವಿರೋಧವಾಗಿ ಸಿದ್ದರಾಮಯ್ಯನವರನ್ನು ಆರಿಸಿದೆ.

ಇದರ ಜೊತೆಗೆ ತಾನಿನ್ನು ಬಲಿಷ್ಠ ಎಂಬ ಸಂದೇಶವನ್ನು ಕೊಡಲು ಕಾಂಗ್ರೆಸ್ ಹೈಕಮಾಂಡ್ ಸಫಲವಾಗಿದೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

LEAVE A REPLY

Please enter your comment!
Please enter your name here