Homeಮುಖಪುಟಅಕ್ಕಿ ಕೊಡಲು ಒಪ್ಪಿದ್ದ ಎಫ್‌ಸಿಐ ಕಮಿಟ್‌ಮೆಂಟ್ ಪತ್ರ ಟ್ವೀಟ್ ಮಾಡಿದ ಸಿದ್ದರಾಮಯ್ಯ: ಸಿ.ಟಿ ರವಿಗೆ ತಿರುಗೇಟು

ಅಕ್ಕಿ ಕೊಡಲು ಒಪ್ಪಿದ್ದ ಎಫ್‌ಸಿಐ ಕಮಿಟ್‌ಮೆಂಟ್ ಪತ್ರ ಟ್ವೀಟ್ ಮಾಡಿದ ಸಿದ್ದರಾಮಯ್ಯ: ಸಿ.ಟಿ ರವಿಗೆ ತಿರುಗೇಟು

- Advertisement -
- Advertisement -

ಸುಳ್ಳುರಾಮಯ್ಯ ಅಲ್ಲದಿದ್ದರೆ ಎಫ್‌ಸಿಐ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಸವಾಲು ಹಾಕಿದ್ದ ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಿ.ಟಿ ರವಿಗೆ ಸಿದ್ದರಾಮಯ್ಯ ಎಫ್‌ಸಿಐ ಕಮಿಟ್‌ಮೆಂಟ್ ಪತ್ರ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ‌ ನಾಯಕ ಸಿ.ಟಿ ರವಿ ಸವಾಲು ಹಾಕಿದ್ದರು. ಇಲ್ಲಿದೆ ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ. ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿ.ಟಿ.ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ನಾವು ಅನ್ನಭಾಗ್ಯದ ಅಕ್ಕಿಯನ್ನು 10 ಕೆಜಿಗೆ ಏರಿಸುವುದು ನಿಶ್ಚಿತ. ಬಸವಣ್ಣನ ಅನುಭವ ಮಂಟಪದ ದಾಸೋಹಕ್ಕೂ ವಿರೋಧಿಗಳು ಇಂತಹದ್ದೇ ಅಡೆತಡೆಗಳನ್ನು ಸೃಷ್ಟಿಸಿದ್ದರು. ನಮ್ಮ ಅನ್ನಭಾಗ್ಯದ ದಾಸೋಹವನ್ನು ಬಿಜೆಪಿಗರ ಯಾವ ಕುತಂತ್ರವೂ ತಡೆಯಲು ಸಾಧ್ಯವಿಲ್ಲ” ಎಂದು ಕಾಂಗ್ರೆಸ್ ಹೇಳಿದೆ.

ಕೇಂದ್ರ ಸರ್ಕಾರ ಸ್ಪಷ್ಟವಾಗಿ ಆಹಾರ ಹಕ್ಕು ಕಾಯ್ದೆಯನ್ನು ಉಲ್ಲಂಘಿಸುತ್ತಿದೆ. 7 ಲಕ್ಷ ಟನ್ ಅಕ್ಕಿ ಸಂಗ್ರಹವಿದ್ದರೂ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡುವುದನ್ನು ನಿರಾಕರಿಸುವ ಮೂಲಕ ಕನ್ನಡಿಗರ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ ಮೋದಿ. ಖಾಸಗಿಯವರಿಗೆ ಮಾರಾಟ ಮಾಡುವ ಅವಕಾಶವಿರುವಾಗ ರಾಜ್ಯ ಸರ್ಕಾರಕ್ಕೆ ಏಕೆ ಈ ನಿರಾಕರಣೆ. ಇದು ದುರುದ್ದೇಶವಲ್ಲದೆ ಇನ್ನೇನು? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಇದನ್ನೂ ಓದಿ; ಬಿಜೆಪಿಯವರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ಅನ್ನಭಾಗ್ಯದ ಅಕ್ಕಿ 10 ಕೆಜಿಗೆ ಏರಿಸುವುದು ನಿಶ್ಚಿತ: ಕಾಂಗ್ರೆಸ್ ವಾಗ್ದಾನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...