Homeಕರ್ನಾಟಕಸಿದ್ದರಾಮಯ್ಯ v/s ಡಿಕೆ ಶಿವಕುಮಾರ್‌‌: ರಾಜ್ಯ ಕಾಂಗ್ರೆಸ್‌‌ನಲ್ಲಿ ಎಲ್ಲವೂ ಸರಿಯಿಲ್ಲ!

ಸಿದ್ದರಾಮಯ್ಯ v/s ಡಿಕೆ ಶಿವಕುಮಾರ್‌‌: ರಾಜ್ಯ ಕಾಂಗ್ರೆಸ್‌‌ನಲ್ಲಿ ಎಲ್ಲವೂ ಸರಿಯಿಲ್ಲ!

- Advertisement -
- Advertisement -

ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ನಡೆಯುತ್ತಿದ್ದ ಆಂತರಿಕ ಕಚ್ಚಾಟಗಳು ಇದೀಗ ತಣ್ಣಗಾಗುತ್ತಿದೆ ಎನ್ನುವಾಗಲೆ, ಪಕ್ಷದೊಳಗೆ ಮತ್ತೊಂದು ಸುತ್ತಿನ ಕಚ್ಚಾಟ ಭುಗಿಲೇಳುತ್ತಿದೆ. ಈ ಹಿಂದೆ ‘ಮುಂದಿನ ಮುಖ್ಯಮಂತ್ರಿ’ ಎಂಬ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌ ಬೆಂಬಲಿಗ ಶಾಸಕರ ನಡುವೆ ವಾದ ಪ್ರತಿವಾದಗಳು ನಡೆಯುತ್ತಿತ್ತು. ಆದರೆ ಇದೀಗ ಈ ಇಬ್ಬರು ನಾಯಕರೆ ತಮ್ಮ ನಡುವೆ ಎಲ್ಲವೂ ಸರಿಯಿಲ್ಲ ಎಂಬುವುದನ್ನು ಬಟಾ ಬಯಲು ಮಾಡಿದ್ದಾರೆ.

ಈ ಹಿಂದಿನ ಸಮ್ಮಿಶ್ರ ಸರ್ಕಾರ ಕೆಡವಿ ಬಿಜೆಪಿ ಸೇರಿದ್ದ ಶಾಸಕರನ್ನು ವಾಪಾಸು ಪಕ್ಷಕ್ಕೆ ಸೇರಿಸುವುದರ ಬಗ್ಗೆ ಇಬ್ಬರು ನಾಯಕರು ಶನಿವಾರ ನೀಡಿರುವ ಹೇಳಿಕೆಯು ದ್ವಂದ್ವಗಳಿಂದ ಕೂಡಿದ್ದು, ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳಾಗುತ್ತಿದೆ.

ಇದನ್ನೂ ಓದಿ: ಜಿಎಸ್‌ಟಿ ವಿಚಾರದಲ್ಲಿ ರಾಜ್ಯಗಳನ್ನು ವಂಚಿಸಿದ್ದಕ್ಕೆ ಸಂಭ್ರಮಿಸಬೇಕೆ?: ಕುಮಾರಸ್ವಾಮಿ ಆಕ್ರೋಶ

ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಡಿಕೆ ಶಿವಕುಮಾರ್‌‌, “ಕಾಂಗ್ರೆಸ್‌ ಪಕ್ಷದ ಸಿದ್ಮಾಂತ, ನಾಯಕತ್ವ ಒಪ್ಪಿ, ಕೆಲಸ ಮಾಡಲು ಇಚ್ಚಿಸುವ ಯಾರೆ ಆದರೂ ಪಕ್ಷ ಸೇರಲು ಅರ್ಜಿ ಹಾಕಬಹುದು. ನಾನು ಕೇವಲ ಕಾಂಗ್ರೆಸ್ ತೆರೆದು ಬಿಜೆಪಿ ಸೇರಿದ ಶಾಸಕರನ್ನು ಉದ್ದೇಶಿಸಿ ಈ ಮಾತು ಹೇಳುತ್ತಿಲ್ಲ. ಯಾರೇ ಅರ್ಜಿ ಹಾಕಿದರೂ ಪಕ್ಷ ಅದನ್ನು ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳಲಿದೆ” ಎಂದು ಹೇಳಿದ್ದಾರೆ.

ಆದರೆ ಮತ್ತೊಂದು ಕಡೆಯಲ್ಲಿ ಸಿದ್ದರಾಮಯ್ಯ ಅವರು, “ಪ್ರಳಯವಾದರೂ ಕಾಂಗ್ರೆಸ್ ತೆರೆದು ಬಿಜೆಪಿ ಸೇರಿದ ಶಾಸಕರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎ೦ದು ನಾನು ವಿಧಾನಸಭೆಯಲ್ಲಿ ಹೇಳಿದ್ದೇನೆ. ಹೀಗಾಗಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಪಕ್ಷ ತೊರೆದ ಶಾಸಕರನ್ನು ಸೇರಿಸಿಕೊಳ್ಳುವುದಾಗಿ ಯಾರೂ ಹೇಳಿಲ್ಲ. ಈ ಕುರಿತು ನಾನು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ ಜೊತೆ ಮಾತನಾಡುತ್ತೇನೆ” ಎಂದು ಹೇಳಿದ್ದಾರೆ.

ಒಂದೇ ಪಕ್ಷಗಳ ನಾಯಕರ ನಡುವೆ ಸಮನ್ವಯತೆಯಿಲ್ಲದ ನಡೆಯ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಗಳಾಗುತ್ತಿದೆ.

“ರಾಜಕೀಯದಲ್ಲಿ ಬೆನ್ನಿಗೆ ಚೂರಿ ಹಾಕುವ ಕೆಲಸ ನಿತ್ಯ ನಡೆಯುತ್ತಿರುತ್ತದೆ. ಇದು ಕೇವಲ ಡಿ.ಕೆ.ಶಿವಕುಮಾರ್‌ ಅಥವಾ ಕಾಂಗ್ರೆಸ್‌ ಪಕ್ಷ ಅ೦ತ ಅಲ್ಲ, ಎಲ್ಲ ಪಕ್ಷದಲ್ಲೂ ಇ೦ತಹ ಉದಾಹರಣೆಗಳನ್ನು ನೋಡಿದ್ದೇವೆ” ಎಂದು ಡಿಕೆ ಶಿವಕುಮಾರ್‌ ಅವರು ಯಾರೂನ್ನೂ ಸೂಚಿಸದೆ ಹೇಳಿದ್ದಾರೆ. ಪ್ರತಾಪಗೌಡ ಪಾಟೀಲ್‌ ಅವರನ್ನು ನಾವು ಬಿಜೆಪಿಯಿಂದಲೇ ಕರೆ ತಂದಿದ್ದವು. ಹೀಗೆ ಒ೦ದು ಪಕ್ಷದಿ೦ದ ಇನ್ನೊಂದು ಪಕ್ಷಕ್ಕೆ ಹೋಗುವುದು, ಮರಳುವುದು ರಾಜಕೀಯದಲ್ಲಿ ಸಾಮಾನ್ಯ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 2024ರಲ್ಲಿ ಮೋದಿ ಸೋಲಿಸಲು AAP, TMC ಜೊತೆ ಮೈತ್ರಿ: ಸಂದರ್ಶನದಲ್ಲಿ ಅಖಿಲ್‌ ಗೊಗೊಯ್

ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತ್ರ ಬಿಜೆಪಿಗೆ ತೆರಳಿದ ಶಾಸಕರನ್ನು ವಾಪಾಸು ಕಾಂಗ್ರೆಸ್‌ಗೆ ತರುವುದಿಲ್ಲ ಎಂದು ಹೇಳಿದ್ದಾರೆ. ಈ ಮಧ್ಯೆ ಬಿಜೆಪಿಗೆ ತೆರಳಿದ ಶಾಸಕರು ಸಿದ್ದರಾಮಯ್ಯ ಅವರ ಆಪ್ತ ಶಾಸಕರೇ ಆಗಿರುವುದರಿಂದ ಅವರು ಕಾಂಗ್ರೆಸ್‌ಗೆ ಮರಳಿದರೂ ಡಿಕೆ ಶಿವಕುಮಾರ್‌ ಅವರಿಗೆ ಲಾಭವಿಲ್ಲ ಎಂದು ಹೇಳಲಾಗುತ್ತಿದೆ.

ಇದಕ್ಕಿಂತಲೂ ಮುಂಚೆ “ಮುಂದಿನ ಮುಖ್ಯಮಂತ್ರಿ” ಚರ್ಚೆಯನ್ನು ಸಿದ್ದರಾಮಯ್ಯ ಅವರ ಆಪ್ತ ಶಾಸಕರೆ ಮುನ್ನಲೆಗೆ ತಂದಿದ್ದರು. ಈ ಬಿಕ್ಕಟ್ಟು ಈಗ ಶಮನವಾದರೂ ಈ ಎಲ್ಲಾ ಬೆಳವಣಿಗೆಗಳೂ ಸಿದ್ದರಾಮಯ್ಯ ಅವರ ಕೃಪಕಟಾಕ್ಷದಲ್ಲೇ ಆಗಿದ್ದು ಎನ್ನಲಾಗುತ್ತಿದೆ.

ಕೊರೊನಾ ಬಿಕ್ಕಟ್ಟನ್ನು ಸಮರ್ಪಕವಾಗಿ ನಿರ್ವಹಿಸದ ಹಿನ್ನಲೆಯಲ್ಲಿ ಬಿಜೆಪಿಗೆ ಮುಂದಿನ ಚುನಾವಣೆಯಲ್ಲಿ ಹಿನ್ನಡೆಯಾಗಲಿದೆ ಎಂದು ಗ್ರಹಿಸಲಾಗಿದೆ. ಈ ಲಾಭವನ್ನು ಕಾಂಗ್ರೆಸ್ ಪಡೆಯಲಿದ್ದು, ಇದಕ್ಕಾಗಿಯೆ ಪಕ್ಷದೊಳಗೆ ವೇದಿಕೆ ಸಜ್ಜು ಮಾಡಲಾಗುತ್ತಿದೆ. ಒಟ್ಟಿನಲ್ಲಿ ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾಯಿ ಹೊಲಿಸಲು ಕಾಂಗ್ರೆಸ್ ಹೊರಟಂತಿದೆ.

ಇದನ್ನೂ ಓದಿ: ಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...