Homeಕರ್ನಾಟಕಡಿ.ಜೆ ಹಳ್ಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ: ನಿರಪರಾಧಿಗಳ ಬಿಡುಗಡೆಗೆ ಆಗ್ರಹ

ಡಿ.ಜೆ ಹಳ್ಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ: ನಿರಪರಾಧಿಗಳ ಬಿಡುಗಡೆಗೆ ಆಗ್ರಹ

ಗಲಭೆಯ ದಿನ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ನಿಂದನಾತ್ಮಕ ಬರಹ ಪ್ರಕಟಿಸಿದ ನವೀನ್‌ನನ್ನು ಪೊಲೀಸರು ಶೀಘ್ರವೇ ಬಂಧಿಸಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿರಲಿಲ್ಲವೇನೊ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಆಗಸ್ಟ್ 11 ರಂದು ನಡೆದ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆಯಲ್ಲಿ ಭಾಗಿಯಾಗದ ಹಲವರು ಅಮಾಯಕರನ್ನು ಸಹ ಬಂಧಿಸಲಾಗಿದೆ. ಗಲಭೆಯಲ್ಲಿ ಭಾಗವಹಿಸಿದ್ದಾರೆ ಎಂಬುದಕ್ಕೆ ಸಾಕ್ಷ್ಯವಿಲ್ಲದ ನಿರಪರಾಧಿಗಳನ್ನು ಬಿಡುಗಡೆಗೊಳಿಸಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇಂದು ಗಲಭೆಪೀಡಿತ ಡಿ.ಜೆ ಹಳ್ಳಿಗೆ ಭೇಟಿ ನೀಡಿ ಮಾತನಾಡಿದ ಅವರು, “ಗಲಭೆ ನಡೆದ ಸಂದರ್ಭದಲ್ಲಿ ನಾನು ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ, ಸೋಂಕಿನಿಂದ ಗುಣಮುಖನಾದ ನಂತರ ಕೆಲವು ದಿನಗಳ ಕಾಲ ಹೋಂ ಕ್ವಾರೆಂಟೈನ್‌ಗೂ ಒಳಗಾಗಿದ್ದೆ. ಈ ಎಲ್ಲಾ ಕಾರಣಗಳಿಂದಾಗಿ ಘಟನೆ ನಡೆದ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ” ಎಂದಿದ್ದಾರೆ.

ಗಲಭೆಯ ದಿನ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ನಿಂದನಾತ್ಮಕ ಬರಹ ಪ್ರಕಟಿಸಿದ ನವೀನ್‌ನನ್ನು ಪೊಲೀಸರು ಶೀಘ್ರವೇ ಬಂಧಿಸಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿರಲಿಲ್ಲವೇನೊ ಎಂದು ಅಭಿಪ್ರಾಯಪಟ್ಟ ಅವರು, ಗಲಭೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಹಾಗೂ ಗಲಭೆ ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಪ್ರಕರಣದಲ್ಲಿ ಭಾಗಿಯಾಗದ ಹಲವರು ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಹಾಗಾಗಿ ಯಾರ ವಿರುದ್ಧ ಸೂಕ್ತ ಸಾಕ್ಷ್ಯಗಳಿಲ್ಲ, ಯಾರು ನಿರಪರಾಧಿಗಳಿದ್ದಾರೆ ಅಂಥವರನ್ನು ಕೂಡಲೇ ಬಿಡುಗಡೆ ಮಾಡಬೇಕು ಮತ್ತು ನೈಜ ಅಪರಾಧಿಗಳು ಯಾರೇ ಆಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಡಿ.ಜೆ. ಹಳ್ಳಿಯಲ್ಲಿ ನಡೆದ ಗಲಭೆ ಸಂದರ್ಭದಲ್ಲಿ ಹಾನಿಗೊಳಗಾಗಿದ್ದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಹಾಗೂ ಪೊಲೀಸ್ ಠಾಣೆಗೆ ಭೇಟಿನೀಡಿ ಮಾಹಿತಿ ಸಂಗ್ರಹಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ರಿಜ್ವಾನ್ ಹರ್ಷದ್, ನಸೀರ್ ಅಹ್ಮದ್, ವೆಂಕಟರಮಣಪ್ಪ ಉಪಸ್ಥಿತರಿದ್ದರು.


ಇದನ್ನೂ ಓದಿ: ಡಿ.ಜೆ ಹಳ್ಳಿಯಲ್ಲಿ ಗಲಭೆಯಾಗುತ್ತಿದ್ದಾಗ ಮುಸ್ಲಿಂ ಮುಖಂಡರು ಏನು ಮಾಡುತ್ತಿದ್ದರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...