Homeಕರ್ನಾಟಕರಾಜಕೀಯ ವಿರೋಧಿಗಳಿಗೆ ದೀಪಾವಳಿ ಸಂದೇಶ ನೀಡಿದ ಸಿದ್ದರಾಮಯ್ಯ..!

ರಾಜಕೀಯ ವಿರೋಧಿಗಳಿಗೆ ದೀಪಾವಳಿ ಸಂದೇಶ ನೀಡಿದ ಸಿದ್ದರಾಮಯ್ಯ..!

- Advertisement -
- Advertisement -

ನನ್ನ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋದ ತಪ್ಪು ವ್ಯಾಖ್ಯಾನ ಮಾಡುತ್ತಾ, ಪ್ರಚಾರ ಮಾಡುತ್ತಾ ನಾಯಕರು, ವಿಕೃತ ಆನಂದ ಪಡುತ್ತಿದ್ದಾರೆ. ಇದು ನನಗೆ ಹೊಸತಲ್ಲ. ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತೆ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಳ್ಳುವ ಮೂಲಕ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜಕೀಯ ವಿರೋಧಿಗಳಿಗೆ ದೀಪಾವಳಿ ಸಂದೇಶ ನೀಡಿದ್ದಾರೆ.

’ನಾನು ಜಾತಿವಾದಿ ಅಲ್ಲ, ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವ ನಾನು, ಅಂಬೇಡ್ಕರ್, ಗಾಂಧೀಜಿ, ಬಸವಣ್ಣ ಮತ್ತು ಕುವೆಂಪು ಅವರ ಚಿಂತನೆಯಿಂದ ಪ್ರೇರಿತನಾದ ಜಾತ್ಯತೀತ. ಅವರ ಚಿಂತನೆಗಳ ಫಲವೇ ನನ್ನ ಸರ್ಕಾರದ ಯೋಜನೆಗಳಾಗಿದ್ದವು. ಇದು ನನ್ನ ಜಾತಿ ವಿನಾಶದ ಹಾದಿ. ನಿಮ್ಮದು ಯಾವ ಹಾದಿ’..? ಎಂದು ಪ್ರಶ್ನಿಸಿದ್ದಾರೆ. ’

ಇದನ್ನೂ ಓದಿ: ಸಿದ್ದರಾಮಯ್ಯ ನನ್ನ ವೆಲ್ ವಿಶರ್, ಅವರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ: ಡಿ.ಕೆ.ಶಿವಕುಮಾರ್

’ನಾನು ಜಾತಿ ರಾಜಕೀಯ ಮಾಡುತ್ತಿದ್ದೇನೆ ಎಂದು ಆರೋಪಿಸುವವರು ಅವರ ಪಕ್ಷಗಳ ನೀತಿ ಮತ್ತು ಕಾರ್ಯಕ್ರಮಗಳಲ್ಲಿ ಗಾಂಧಿ ಅಂಬೇಡ್ಕರ್,ಬಸವಣ್ಣ ಮತ್ತು ಕುವೆಂಪು ವಿಚಾರಧಾರೆಗಳೆಷ್ಟು ಇವೆ ಎನ್ನುವುದನ್ನು ಬಹಿರಂಗಪಡಿಸಲಿ. ಇದರ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧ. ಇದು ನನ್ನ ಸವಾಲು ಕೂಡಾ ಹೌದು. ರಾಜ್ಯದ ಮತದಾರರು ಜಾತಿ ಬಿಟ್ಟು ಯೋಚನೆ ಮಾಡುತ್ತಿದ್ದಾರೆ. ಲಿಂಗಾಯತರು ಯಡಿಯೂರಪ್ಪನವರಿಂದ, ಒಕ್ಕಲಿಗರು ಜೆಡಿಎಸ್ ಪಕ್ಷದಿಂದ ದೂರವಾಗುತ್ತಿದ್ದಾರೆ ಎಂಬ ಗೆಳೆಯರ ಮಾತಿಗೆ ನಾನು ಸಹಮತ ಸೂಚಿಸಿದ್ದು ನಿಜ. ಜನ ಜಾತ್ಯತೀತರಾಗುತ್ತಿದ್ದಾರೆ ಎಂದು ಹೇಳಿದ್ದರಲ್ಲಿ ಏನು ತಪ್ಪಿದೆ’..?”

’ರಾಜಕೀಯ ಪಕ್ಷಗಳು ನೈತಿಕವಾಗಿ ದಿವಾಳಿಯಾದಾಗ ಇಂತಹ ಅಪಸವ್ಯಗಳು ಹುಟ್ಟಿಕೊಳ್ಳುತ್ತವೆ.
ವೈಯುಕ್ತಿಕ ದಾಳಿಗಳು ನನ್ನ ಸಾಮಾಜಿಕ ಬದ್ದತೆಯನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಮತ್ತು ಜನರಿಗಾಗಿ ಹೋರಾಡುವ ಹುಮ್ಮಸ್ಸನ್ನು ಇಮ್ಮಡಿಗೊಳಿಸುತ್ತದೆ. ಇದಕ್ಕಾಗಿ ನನ್ನ ರಾಜಕೀಯ ವಿರೋಧಿಗಳಿಗೆ ಧನ್ಯವಾದಗಳು’ ಎಂದು ರಾಜಕೀಯ ವಿರೋಧಿಗಳಿಗೆ ದೀಪಾವಳಿಯ ಸಂದೇಶ ನೀಡಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರು, ಡಿಕೆಶಿ ಜೆಡಿಎಸ್ ಬಾವುಟ ಹಿಡಿದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ವಿಡಿಯೋ ಹರಿದಾಡಿತ್ತು. ಅಲ್ಲದೇ ಅದಕ್ಕೆ ಸಂಬಂಧಪಟ್ಟಂತೆ ವ್ಯಾಪಕ ಚರ್ಚೆ ಮತ್ತು ವಿರೋಧ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...