Homeಕರ್ನಾಟಕಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಕಾಯ್ದೆ- 1985 (NDPS) ಅಡಿಯಲ್ಲಿ ಕಳೆದ 10 ವರ್ಷಗಳಿಂದ ಸರ್ಕಾರ ತೆಗೆದುಕೊಂಡ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿ- ಸಿದ್ಧರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ಕಳೆದ 10 ವರ್ಷಗಳ ಜಿಲ್ಲಾವಾರು ವಿವರಗಳನ್ನು ನೀಡಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ.

ಇದರ ಕುರಿತು ಇಂದು ಸಂಜೆ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, “ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಕಾಯ್ದೆ- 1985 (NDPS) ಅಡಿಯಲ್ಲಿ ಕಳೆದ 10 ವರ್ಷಗಳಿಂದ ಸರ್ಕಾರ ತೆಗೆದುಕೊಂಡ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿ” ಎಂದು ತಾವು ಬರೆದಿರುವ ಪತ್ರವನ್ನು ಹಂಚಿಕೊಂಡಿದ್ದಾರೆ.

“ರಾಜ್ಯದಲ್ಲಿ ಮಾದಕ ವಸ್ತು ವ್ಯಸನಕ್ಕೆ ಬಲಿಯಾದವರಲ್ಲಿ ಎಷ್ಟು ಜನರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ? ಎಷ್ಟು ಜನ ವ್ಯಸನದಿಂದ ಮುಕ್ತರಾಗಿದ್ದಾರೆ? ಮತ್ತೆ ಎಷ್ಟು ಜನ ವ್ಯಸನಿಗಳಾಗಿದ್ದಾರೆ ಮತ್ತು ಎಷ್ಟು ಜನ ಸಾವಿಗೀಡಾಗಿದ್ದಾರೆ?” ಎಂಬ ಮಾಹಿತಿಯನ್ನು ಕೋರಿ ಪತ್ರ ಬರೆಯಲಾಗಿದೆ.

“ಕಳೆದ 10 ವರ್ಷಗಳಿಂದ ಎಷ್ಟು ಜನರ ಮೇಲೆ NDPS ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ, ಅವು ಈಗ ನ್ಯಾಯಾಲಯದಲ್ಲಿ ಈಗ ಯಾವ ಸ್ಥಿತಿಯಲ್ಲಿದೆ. ಖುಲಾಸೆಯಾದ ಪ್ರಕರಣಗಳೆಷ್ಟು. ಶಿಕ್ಷೆಯಾದ ಪ್ರಕರಣಗಳೆಷ್ಟು? ಇವುಗಳಿಗೆ ಸಂಬಂಧಿಸಿದಂತೆ ಪ್ರಕರಣವಾರು, ಜಿಲ್ಲಾವಾರು ಮಾಹಿತಿ ನೀಡುವುದು” ಎಂದು ಪತ್ರದಲ್ಲಿ ಕೋರಿದ್ದಾರೆ.

“ರಾಜ್ಯದಲ್ಲಿ ಪೊಲೀಸರ ಸಹಕಾರವಿಲ್ಲದೆ ಗಾಂಜಾ ದಂಧೆ ಇಷ್ಟು ನಿರಾತಂಕವಾಗಿ ನಡೆಯಲು ಸಾಧ್ಯವೇ? ಇಲ್ಲವಾದರೆ, ಸಂಬಂಧಿಸಿದ ಪೊಲೀಸ್ ಸಿಬ್ಬಂಧಿಗಳ ಮೇಲೆ ಯಾವ ಕ್ರಮ ಕೈಗೊಳ್ಳಲಾಗಿದೆ, ಎಷ್ಟು ಜನರನ್ನು ಅಮಾನತು ಮಾಡಲಾಗಿದೆ, ಎಷ್ಟು ಜನರಿಗೆ ಶಿಕ್ಷೆ ವಿಧಿಸಲಾಗಿದೆ?” ಇದರ ಕುರಿತಂತೆ ಜಿಲ್ಲಾವಾರು ಮಾಹಿತಿಯನ್ನು ಕೋರಿದ್ದಾರೆ.

NDPS ಕಾಯ್ದೆಯ ಪ್ರಕಾರ ವಿವಿಧ ಹಂತದ ಸಮಿತಿಗಳನ್ನು ರಚಿಸಬೇಕು. ಹಾಗಾಗಿ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಎಷ್ಟು ಸಮಿತಿಗಳನ್ನು ರಚಿಸಲಾಗಿದೆ. ಅವುಗಳ ಕಾರ್ಯಕ್ರಮದ ಕುರಿತು ಮಾಹಿತಿಯನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.

ಡ್ರಗ್ಸ್ ಚಟಕ್ಕೆ ಸಿಲುಕಿದ ಮಕ್ಕಳ ಪೋಷಕರಿಂದ ಗುಪ್ತವಾಗಿ ಮಾಹಿತಿ ಸಂಗ್ರಹಿಸುವ ವ್ಯವಸ್ಥೆ ನಮ್ಮಲ್ಲಿದೆಯೇ. ಹಾಗಿದ್ದರೆ ಎಷ್ಟು ದೂರುಗಳನ್ನು ಸ್ವೀಕರಿಸಲಾಗಿದೆ, ಅದರ ಬಗ್ಗೆ ತೆಗೆದುಕೊಂಡ ಕ್ರಮಗಳೇನು?. ಡ್ರಗ್ಸ್ ಎಂದು ಕರೆಯಲ್ಪಡುವ ವಸ್ತುಗಳು ಎಲ್ಲಿಂದ ಸರಬರಾಜಾಗುತ್ತಿವೆ, ರಾಜ್ಯದಲ್ಲಿ ಎಲ್ಲೆಲ್ಲಿಗೆ ಸರಬರಾಜಾಗುತ್ತಿದೆ. ಸರಬರಾಜುದಾರರ ಎಷ್ಟು ಆಸ್ತಿಗಳನ್ನು ಇದುವರೆಗೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂಬುದರ ಬಗ್ಗೆ ಜಿಲ್ಲಾವಾರು ಮಾಹಿತಿಯನ್ನು ಕೋರಿದ್ದಾರೆ.

ರಾಜ್ಯದಲ್ಲಿ ಡ್ರಗ್ಸ್ ಕುರಿತಂತೆ ಹಲವು ವ್ಯಕ್ತಿಗಳ ಬಂಧನವಾಗುತ್ತಿದೆ. ಇದರ ಬಗ್ಗೆ ಪರ-ವಿರೋಧದ ಚರ್ಚೆಗಳು ಜೋರಾಗಿಯೇ ನಡೆಯುತ್ತಿವೆ. ಇದರ ನಡುವೆ ರಾಜಕೀಯವಾಗಿಯೂ ಇದು ಮಹತ್ವವನ್ನು ಪಡೆದುಕೊಂಡಿದೆ. ಈ ಸಂದರ್ಭದಲ್ಲಿ ಸಿದ್ಧರಾಮಯ್ಯನವರ ಈ ಪತ್ರ ಮಹತ್ವದ್ದೆನಿಸುತ್ತದೆ.


ಇದನ್ನೂ ಓದಿ: ಡ್ರಗ್ಸ್ ಮಾಫಿಯಾ ಪ್ರಕರಣ: ನಟಿ ರಾಗಿಣಿ ದ್ವಿವೇದಿ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌ | Naanu Gauri

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌

0
ದೇಶದ ತುಂಬ ಹರಡಿರುವ ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ ಎಂದು ಸ್ವರಾಜ್ ಪಕ್ಷದ ಮುಖ್ಯಸ್ಥ, ರೈತ ಹೋರಾಟಗಾರ ಯೋಗೇಂದ್ರ ಯಾದವ್‌ ಬುಧವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. ಅವರು ‘ಕರ್ನಾಟಕದ ಜನ ಯಾಕೆ...